ಬೈಂದೂರು | ಕಾರು-ಸ್ಕೂಟರ್ ಢಿಕ್ಕಿ: ಸಹಸವಾರೆ ಮೃತ್ಯು

ಸಾಂದರ್ಭಿಕ ಚಿತ್ರ
ಬೈಂದೂರು : ಸ್ಕೂಟರೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸಹಸವಾರೆ ಮೃತಪಟ್ಟ ಘಟನೆ ನ.2ರಂದು ಮಧ್ಯಾಹ್ನ ವೇಳೆ ಯಳಜಿತ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಗೋಳಿಮರ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಸ್ಕೂಟರ್ ಸಹಸಾವರೆ ತಸ್ಬೀಯಾ ಬೇಗಂ ಎಂದು ಗುರುತಿಸಲಾಗಿದೆ. ಸವಾರ ಸುಬಾನ್ ತೀವ್ರವಾಗಿ ಗಾಯಗೊಂಡು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬ್ರಹ್ಮಾವರದಿಂದ ಗೋಳಿಹೊಳೆಗೆ ಹೋಗುತ್ತಿದ್ದ ಕಾರಿಗೆ ಕೊಲ್ಲೂರು ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಇಬ್ಬರು ಸ್ಕೂಟರ್ ಸವಾರರು ರಸ್ತೆಗೆ ಬಿದ್ದಿದ್ದಾರೆ. ಇದರಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ತಸ್ಬೀಯಾ ಬೇಗಂ ಕುಂದಾಪುರ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





