ಡಿ.27ರಂದು ಬೈಂದೂರು ನೂತನ ಬಸ್ ನಿಲ್ದಾಣ ಉದ್ಘಾಟನೆ

ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ವತಿಯಿಂದ ಬೈಂದೂರು ನೂತನ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭ ಡಿ.27ರಂದು ಬೆಳಗ್ಗೆ 11:30ಕ್ಕೆ ಬೈಂದೂರು ಕ.ರಾ.ರ.ಸಾ.ನಿಗಮ ಬಸ್ ನಿಲ್ದಾಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅಧ್ಯಕ್ಷತೆ ವಹಿಸಲಿದ್ದಾರೆ.
ಸಮಾರಂಭದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಎಸ್.ಅರ್.ಶ್ರೀನಿವಾಸ್ (ವಾಸು), ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ವಿವಿಧ ಮಂಡಳಿ, ನಿಗಮ, ಸಮಿತಿಗಳ ಪದಾಧಿಕಾರಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.





