ಬೈಂದೂರು | ಸ್ಕೂಟರ್- ಬೈಕ್ ಢಿಕ್ಕಿ: ಸವಾರ ಮೃತ್ಯು

ಬೈಂದೂರು, ನ.16: ಸ್ಕೂಟರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನ.15ರಂದು ತಡರಾತ್ರಿ ನಾಗೂರು ವೀರ ಆಂಜನೇಯ ದೇವಸ್ಥಾನ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಸ್ಕೂಟರ್ ಸವಾರ ಮಹಾಬಲ ಶೆಟ್ಟಿ ಎಂದು ಗುರುತಿಸಲಾಗಿದೆ. ಬೈಕ್ ಸವಾರ ಶರತ್ ಮತ್ತು ಸಹಸವಾರ ಸುದಾಮ ಎಂಬವರು ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಬೈಕ್ ಗೆ ವಿರುದ್ದ ದಿಕ್ಕಿನಲ್ಲಿ ಬಂದ ಸ್ಕೂಟರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಹಾಬಲ ಶೆಟ್ಟಿ, ಬೈಂದೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





