Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೈಂದೂರು ಪಟ್ಟಣ ಪಂಚಾಯತ್ ಸಮಸ್ಯೆ: ಸಚಿವ...

ಬೈಂದೂರು ಪಟ್ಟಣ ಪಂಚಾಯತ್ ಸಮಸ್ಯೆ: ಸಚಿವ ಪ್ರಿಯಾಂಕ್ ಖರ್ಗೆಗೆ ಮನವಿ ಸಲ್ಲಿಸಿದ ಶಾಸಕ ಗುರುರಾಜ್

ವಾರ್ತಾಭಾರತಿವಾರ್ತಾಭಾರತಿ13 Nov 2025 7:12 PM IST
share
ಬೈಂದೂರು ಪಟ್ಟಣ ಪಂಚಾಯತ್ ಸಮಸ್ಯೆ: ಸಚಿವ ಪ್ರಿಯಾಂಕ್ ಖರ್ಗೆಗೆ ಮನವಿ ಸಲ್ಲಿಸಿದ ಶಾಸಕ ಗುರುರಾಜ್

ಬೈಂದೂರು: ಬೈಂದೂರು ಪಟ್ಟಣ ಪಂಚಾಯತ್‌ಗೆ ಸಂಬಂಧಿಸಿದಂತೆ ಗ್ರಾಮೀಣ ಭಾಗದ ರೈತರಿಗೆ ಪಟ್ಟಣ ಪಂಚಾಯತ್ ನಿಯಮಗಳಿಂದ ಆಗುತ್ತಿರುವ ಸಂಕಷ್ಟಗಳ ಕುರಿತು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಮುಖರೊಂದಿಗೆ ಬೆಂಗಳೂರಿನಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ, ಪೌರಾಡಳಿತ ಸಚಿವ ರಹೀಮ್ ಖಾನ್ ಹಾಗೂ ಪೌರಾಡಳಿತ ಇಲಾಖೆಯ ಕಾರ್ಯದರ್ಶಿ ದೀಪ ಎಂ. ಚೋಳನ್ ಅವರನ್ನು ಭೇಟಿ ಮಾಡಿ ಸರಣಿ ಸಭೆಗಳನ್ನು ನಡೆಸಿ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿದರು.

ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಪ್ರಸ್ತುತ ಇರುವ ಬೈಂದೂರು ಪಟ್ಟಣ ಪಂಚಾಯತ್ ಗ್ರಾಮೀಣ ಭಾಗವನ್ನು ಅದರ ವ್ಯಾಪ್ತಿಯಿಂದ ಕೈಬಿಟ್ಟು ಹೊಸದಾಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯನ್ನು ಮರುವಿಂಗಡಣೆ ಮಾಡಿ, ಬಫರ್ ಜೋನ್ ಮಿತಿಯನ್ನು ಕೈಬಿಟ್ಟು, ಆ ಪ್ರದೇಶದಲ್ಲಿ ಗ್ರಾಮ ಪಂಚಾಯತ್ ಗಳಿಗೆ ಅನ್ವಯಿಸುವ ನಿಯಮಗಳನ್ನು ಅಳವಡಿಸುವಂತೆ ಮನವಿ ಮಾಡಿದರು.

ಈ ಮೂಲಕ ಅಕ್ರಮ ಸಕ್ರಮ, 94 ಸಿ ಮತ್ತು ಕುಮ್ಕಿ ಹಾಗೂ ವಸತಿ ಯೋಜನೆ ಸೇರಿದಂತೆ ಇತರೆ ಎಲ್ಲಾ ಸರಕಾರಿ ಯೋಜನೆಗಳ ಹಕ್ಕುಗಳನ್ನು ರೈತರಿಗೆ ನೀಡುವ ಮುಖೇನ ಗ್ರಾಮೀಣ ಬಡ ಜನರ ಹಿತ ಕಾಪಾಡಲು ಕ್ರಮ ವಹಿಸುವ ಬಗ್ಗೆ ಪತ್ರದ ಮೂಲಕ ಮನವಿ ಸಲ್ಲಿಸಿದರು.

ಪಟ್ಟಣ ಪಂಚಾಯತ್‌ನಿಂದ ಪ್ರಸ್ತುತ ಜನರಿಗೆ ಆಗುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ, ಮೂಲ ಸೌಕರ್ಯ ಕೊರತೆಗಳ ಬಗ್ಗೆ ಮೌಖಿಕವಾಗಿ ಸಚಿವರುಗಳು ಹಾಗೂ ಪೌರಾಡಳಿತ ಇಲಾಖೆಯ ಕಾರ್ಯದರ್ಶಿಗಳ ಗಮನಕ್ಕೆ ತರುವ ಮೂಲಕ ವಿಸ್ತೃತವಾಗಿ ಚರ್ಚಿಸುವ ಮೂಲಕ ಈ ಕುರಿತು ಆದ್ಯತೆ ಮೇರೆಗೆ ಕ್ರಮ ವಹಿಸುವಂತೆ ಕೋರಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಹಾಗೂ ಕಾರ್ಯದರ್ಶಿಗಳು ಅತಿ ಶೀಘ್ರದಲ್ಲಿ ಈ ಕುರಿತಂತೆ ಆದ್ಯತೆ ಮೇರೆಗೆ ನಿಯಮಾನುಸಾರ ಕ್ರಮವಹಿಸಿ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ ಎಂದು ಶಾಸಕರ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X