Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಗೆ...

ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಗೆ ಪಿಸ್ತೂಲ್ ತೋರಿಸಿ ಬೆದರಿಕೆ ಪ್ರಕರಣ: 13 ಮಂದಿಯ ಬಂಧನ

ಬಂಧಿತರಲ್ಲಿ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರು

ವಾರ್ತಾಭಾರತಿವಾರ್ತಾಭಾರತಿ24 Oct 2024 6:05 PM IST
share
ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಗೆ ಪಿಸ್ತೂಲ್ ತೋರಿಸಿ ಬೆದರಿಕೆ ಪ್ರಕರಣ: 13 ಮಂದಿಯ ಬಂಧನ

ಕುಂದಾಪುರ, ಅ.24: ಮನೆ ಸಮೀಪ ಸ್ನೇಹಿತರೊಂದಿಗೆ ಮಾತನಾಡುತ್ತಾ ನಿಂತಿದ್ದ ವೇಳೆ ಮಾರಕಾಯುಧಗಳೊಂದಿಗೆ ಬಂದ ದುಷ್ಕರ್ಮಿಗಳ ತಂಡವೊಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತವರ ಸ್ನೇಹಿತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸರು ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಸಚಿನ್ ಪೂಜಾರಿ ಆಲೂರು, ಶರತ್ ದೇವಾಡಿಗ ಆಲೂರು, ವಿಶ್ವನಾಥ ಪಡುಕೋಣೆ, ರೋಶನ್ ಫೆರ್ನಾಂಡೀಸ್, ಪ್ರದೀಪ್ ಪಡುಕೋಣೆ, ಕಾರ್ತಿಕ್ ಪೂಜಾರಿ, ಪ್ರಕಾಶ್ ಮೊಗವೀರ, ಕೀರ್ತಿಕ್ ಪೂಜಾರಿ, ಗಣೇಶ್ ಪೂಜಾರಿ, ವಿಶಾಲ್, ಗೌತಮ್, ರಾಹುಲ್, ಸಂತೋಷ್ ನಾಡ, ಮಹೇಂದ್ರ, ಜಗದೀಶ್ ಮೊಗವೀರ, ಸಂತೋಷ್ ಹಡವು, ಅಂಕಿತ್ ಪೂಜಾರಿ, ಸಾರ್ಥಕ್, ಶಿವರಾಜ್, ಸಾಧನ್ ಹಾಗೂ ಇತರರ ಮೇಲೆ ಪ್ರಕರಣ ದಾಖಲಾಗಿದೆ.

ಗಂಗೊಳ್ಳಿ ಪೊಲೀಸರು ಇವರಲ್ಲಿ ಆಲೂರು ಹೊಯ್ಯಾಣ ನಿವಾಸಿ ಸಚಿನ್ (24), ಆಲೂರು ರಾಮೇಶ್ವರ ನಗರ ನಿವಾಸಿ ಶರತ್ ದೇವಾಡಿಗ (24), ಕೆಂಬೈಲು ನಿವಾಸಿಗಳಾದ ಕಾರ್ತಿಕ್ (22), ಹಾಗೂ ಕೀರ್ತಿಕ್ (20), ಪಡುಕೋಣೆ ನಿವಾಸಿ ಪ್ರಕಾಶ್ (20), ಪಡುಕೋಣೆಯ ಹನುಮಂತನಗರ ನಿವಾಸಿ ಜಗದೀಶ್ (31), ಪಡುಕೋಣೆ ರಾಮಮಂದಿರ ನಿವಾಸಿ ಗೌತಮ್ (23), ಪಡುಕೋಣೆ ನಿವಾಸಿ ಮಹೇಂದ್ರ ಪೂಜಾರಿ, ಹಡವು ನಿವಾಸಿ ಸಂತೋಷ್ ಮೊಗವೀರ, ರೋಶನ್ ಫೆರ್ನಾಂಡೀಸ್, ಆಲೂರು ನಿವಾಸಿ ಪ್ರಸಾದ್ ಆಚಾರ್ಯ (30) ಸೇರಿದಂತೆ ಒಟ್ಟು 13 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರು ಸೇರಿದ್ದಾರೆ.

ಬಂಧಿತ ಆರೋಪಿಗಳಿಂದ 1 ಏರ್‌ಪಿಸ್ತೂಲ್, 4 ಬೈಕ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಪ್ರಕರಣದ ಹಿನ್ನೆಲೆ: ಐದು ದಿನಗಳ ಹಿಂದೆ ಪಡುಕೋಣೆ ನಿವಾಸಿ ಶ್ರೀಕಾಂತ ಪೂಜಾರಿ ಹಡವು ಗ್ರಾಮದ ಶ್ರೀಮಹಾವಿಷ್ಣು ದೇವಸ್ಥಾನಕ್ಕೆ ಹೋಗುವ ಕ್ರಾಸ್ ಬಳಿ ಸಂಜೆ ಸ್ನೇಹಿತರಾದ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಚಂದ್ರ ಪಡುಮನೆ, ಸುರೇಶ, ಶಿವಕುಮಾರ್ ಹೆಬ್ಬಾರ್ ಮತ್ತವರ ಮಗ ಮನು ಹೆಬ್ಬಾರ್, ಸುದೇಶ್ ಶೆಟ್ಟಿ ಜೊತೆಯಲ್ಲಿ ಮಾತನಾಡುತ್ತಾ ನಿಂತಿದ್ದ ವೇಳೆ ಆರೋಪಿಗಳು ಏಕಾಏಕಿ ಮಾರಕಾಯುಧ ಗಳೊಂದಿಗೆ ಬಂದು ಹಲ್ಲೆಗೆ ಯತ್ನಿಸಿದ್ದಾರೆ ಎಂದು ದೂರಲಾಗಿದೆ

ಆರೋಪಿ ಸಚಿನ್ ಪೂಜಾರಿ, ಶರತ್ ಸೇರಿದಂತೆ ಆರೋಪಿಗಳ ತಂಡ ಪಿಸ್ತೂಲ್, ಕಬ್ಬಿಣದ ಪೈಪ್‌ಗೆ ತುದಿಯಲ್ಲಿ ಹಲ್ಲುಗಳುಳ್ಳ ಚಕ್ರ ಇರುವ ಆಯುಧ, ಕಬ್ಬಿಣದ ರಾಡ್, ಮರದ ಸೊಂಟೆ ಇತ್ಯಾದಿ ಮಾರಕಾಯುಧಗಳನ್ನು ಹಿಡಿದು ಮಾರಕಾಯುಧಗಳನ್ನು ಬೀಸುತ್ತಾ ಬೆದರಿಸಿದ್ದಾರೆ. ಶ್ರೀಕಾಂತ ಹಾಗೂ ಸ್ನೇಹಿತರು ಅಲ್ಲೆ ಸ್ವಲ್ಪ ದೂರ ಹೋಗಿ ನಿಂತಿದ್ದು, ಶಿವಕುಮಾರ್ ಹೆಬ್ಬಾರ್ ಹಾಗೂ ಅವರ ಮಗ ಮನು ಆರೋಪಿ ಗಳನ್ನು ಎದುರಿಸಲು ಹೋದಾಗ ಅವರಿಗೆ ಆರೋಪಿ ವಿಶ್ವನಾಥ ಪಡುಕೋಣೆ, ರೋಶನ್ ಫೆರ್ನಾಂಡಿಸ್, ಪ್ರವೀಣ ಪಡುಕೋಣೆ ತಮ್ಮಲ್ಲಿದ್ದ ಮಾರಕಾಯುಧಗಳಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಪರಿಣಾಮ ಶಿವಕುಮಾರ್ ಹೆಬ್ಬಾರ್ ಕೈ ಕಾಲಿಗೆ ಹಾಗೂ ಮನು ಹೆಬ್ಬಾರ್ ತಲೆಗೆ ಗಾಯಗಳಾಗಿದೆ.

ಸುದೇಶ್ ಶೆಟ್ಟಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ ಅವರಿಗೂ ಆರೋಪಿ ಸಚಿನ್ ಪೂಜಾರಿ ನೀವು ಗಲಾಟೆ ಮಾಡಲು ಬಂದವರಾ? ಇದು ಲೈಸನ್ಸ್ ಇಲ್ಲದೇ ಇರುವ ಪಿಸ್ತೂಲ್. ನಿಮ್ಮನ್ನು ಕೊಂದು, ಪಿಸ್ತೂಲ್ ಬಿಸಾಕಿ ಹೋಗುತ್ತೇನೆ. ಯಾರಿಂದಲೂ ಏನೂ ಮಾಡಲು ಆಗೋದಿಲ್ಲ. ಗಲಾಟೆ ಮಾಡುವುದಿದ್ದರೇ ನಿಮಗೆ ಈಗಲೇ ಶೂಟ್ ಮಾಡಿ ಸಾಯಿಸುವುದಾಗಿ ಪಿಸ್ತೂಲ್ ತಲೆಗೆ ಹಿಡಿದು ಜೀವ ಬೆದರಿಕೆ ಹಾಕಿದ್ದಾನೆ. ಜೀವಭಯದಿಂದ ಶ್ರೀಕಾಂತ ಓಡಲೆತ್ನಿಸಿದಾಗ ಆರೋಪಿ ಸಚಿನ್ ಪೂಜಾರಿ ಅಡ್ಡಗಟ್ಟಿ ತನ್ನ ಕೈಯಲ್ಲಿದ್ದ ಪಿಸ್ತೂಲ್ ಅನ್ನು ಶ್ರೀಕಾಂತ್ ತಲೆಗೆ ಗುರಿ ಹಿಡಿದು ಶೂಟ್ ಮಾಡಿ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೇ ಕೈಯಿಂದ ಕೆನ್ನೆ, ತಲೆಗೆ ಹೊಡೆದು ಹಲ್ಲೆ ಮಾಡಿದ್ದಾನೆ ಎಂದು ಶ್ರೀಕಾಂತ್ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.

ಶ್ರೀಕಾಂತ್ ಹಾಗೂ ಆರೋಪಿ ವಿಶ್ವನಾಥ ಪಡುಕೋಣೆ ಹಾಗೂ ಇತರರ ಮಧ್ಯೆ ಹಳೆಯ ದ್ವೇಷವಿದ್ದು, ಅದೇ ದ್ವೇಷದಿಂದ ಈ ಕೃತ್ಯ ಎಸಗಲಾಗಿದೆ ಎಂಬ ಮಾಹಿತಿ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಗಂಗೊಳ್ಳಿ ಠಾಣಾಧಿಕಾರಿ ಹರೀಶ್ ಆರ್. ನಾಯ್ಕ್, ಅಪರಾಧ ವಿಭಾಗದ ಪಿಎಸ್‌ಐ ಬಸವರಾಜ್ ಕನಶೆಟ್ಟಿ, ಸಿಬ್ಬಂದಿ ಗಳಾದ ನಾಗರಾಜ, ಕೇಶವ, ಸಂದೀಪ, ರಾಘವೇಂದ್ರ, ರಾಷ್ಟ್ರಪತಿ, ಚಾಲಕ ಸುಧೀರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X