ಕಲಾವಿದರಿಂದ ಅರ್ಜಿ ಆಹ್ವಾನ

ಉಡುಪಿ, ಆ.21: ಕಲಾವಿದರ ವಿವರಗಳನ್ನು ಕ್ರೋಢಿಕರಿಸುವ ದೃಷ್ಟಿಯಿಂದ ಜಿಲ್ಲೆಯಲ್ಲಿರುವ ಕಲಾವಿದರ, ಕಲಾ ತಂಡಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಸೂಕ್ತ ಕಾರ್ಯಕ್ರಮಗಳನ್ನು ನೀಡಲು ಹಾಗೂ ನೈಜ ಕಲಾವಿದರ ಪಟ್ಟಿಯನ್ನು ತಯಾರಿಸಿ ಗುರುತಿನ ಚೀಟಿ ನೀಡಲು ಅರ್ಹ ಕಲಾವಿದರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕಲಾವಿದರು, ಕಲಾತಂಡದವರು ಹಾಗೂ ಸಾಹಿತಿಗಳು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಸ್ವ-ವಿವರದ ಮಾಹಿತಿಯೊಂದಿಗೆ ತಮ್ಮ ಆಧಾರ್ ಗುರುತಿನ ಚೀಟಿ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಪ್ರತಿಷ್ಠಿತ ಸಂಘ ಸಂಸ್ಥೆಗಳಿಂದ ಪಡೆದ ಪ್ರಶಸ್ತಿ ಪುರಸ್ಕಾರಗಳ ವಿವರ, ಪ್ರಮುಖ ಪ್ರದರ್ಶನಗಳ ವಿವರ, ಶಿಲ್ಪಾ ಚಿತ್ರಕಲೆಗಳ ಕಲಾ ಪ್ರದರ್ಶನಗಳ ಛಾಯಾಚಿತ್ರಗಳನ್ನು ಲಗತ್ತಿಸಿ, ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟಂಬರ್ 30ರ ಒಳಗೆ ಸಹಾಯಕ ನಿರ್ದೇಶಕರ ಕಛೇರಿ, ಡಾ. ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಅಲೆವೂರು ಗ್ರಾಮ, ಮಣಿಪಾಲ ಅಂಚೆ, ಉಡುಪಿ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ:0820-2986168 ಅನ್ನು ಸಂಪರ್ಕಿಸು ವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.




