Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಲ್ಲೆ ನಡೆಸಿ ಚಿನ್ನಾಭರಣ ಸುಲಿಗೆ...

ಹಲ್ಲೆ ನಡೆಸಿ ಚಿನ್ನಾಭರಣ ಸುಲಿಗೆ ಪ್ರಕರಣ: ಆರೋಪಿ ಸೆರೆ

ವಾರ್ತಾಭಾರತಿವಾರ್ತಾಭಾರತಿ25 Nov 2026 8:58 PM IST
share
ಹಲ್ಲೆ ನಡೆಸಿ ಚಿನ್ನಾಭರಣ ಸುಲಿಗೆ ಪ್ರಕರಣ: ಆರೋಪಿ ಸೆರೆ

ಶಿರ್ವ, ನ.25: ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.

ಪಡುಬೆಳ್ಳೆ ನಿವಾಸಿ ಮುರಳಿಕೃಷ್ಣ ಉಪಾಧ್ಯಾಯ (47) ಬಂಧಿತ ಆರೋಪಿಗಳು. ಈತ ನ.24ರಂದು ರಾತ್ರಿ ಕುಂಜಾರುಗಿರಿ ದುರ್ಗಾದೇವಿ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮಕ್ಕೆ ಹೋಗಿದ್ದ ರಾಜಮೂರ್ತಿ ಭಟ್(68) ಎಂಬವರನ್ನು ಮಾತನಾಡಲು ಇದೆ ಎಂದು ಹೇಳಿ, ದೇವಳದ ಹೊರಗೆ ಕರೆದುಕೊಂಡು ಹೋಗಿದ್ದನು.

ಬಳಿಕ ಆತನ ಕಾರಿನಲ್ಲಿ ಕುಳ್ಳಿರಿಸಿ ಭತ್ತದ ಬೇಸಾಯ 200 ಎಕರೆಗೆ ವಿಸ್ತರಿಸಲು 25 ಲಕ್ಷ ರೂ. ಹಣದ ಅವಶ್ಯಕತೆ ಇದ್ದು, ಸಹಾಯ ಮಾಡು ವಂತೆ ಕೇಳಿದನು. ಇದಕ್ಕೆ ರಾಜಮೂರ್ತಿ ಭಟ್ ಅವರನ್ನು ಒಪ್ಪಲಿಲ್ಲ. ಅದಕ್ಕೆ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರಗಳನ್ನು ದೋಚುವ ಉದ್ದೇಶದಿಂದ ಸುತ್ತಿಗೆಯಿಂದ ಹಲ್ಲೆ ಮಾಡಿ ಗಾಯಗೊಳಿಸಿದನು.

ಆಗ ರಾಜಮೂರ್ತಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಅವರನ್ನು ಬೆನ್ನಟ್ಟಿ ದೂಡಿ 4,50,000ರೂ. ಮೌಲ್ಯದ ಸುಮಾರು 20 ಗ್ರಾಂ ತೂಕದ ಚಿನ್ನದ ಸರ ಮತ್ತು 28 ಗ್ರಾಂ ತೂಕದ ತುಳಸಿ ಮಣಿ ಚಿನ್ನದ ಸರವನ್ನು ಕಿತ್ತು ಕಾರು ಸಮೇತ ಪರಾರಿಯಾದನು ಎಂದು ದೂರಲಾಗಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ನ.25ರಂದು ಬಂಧಿಸಿ, ತುಳಸಿ ಮಣಿಗಳು ಇರುವ ತುಂಡಾದ ಚಿನ್ನದ ಸರ ಮತ್ತು ತುಂಡಾದ ಹವಳದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ಕಾರನ್ನು ವಶ ಪಡಿಸಿ ಕೊಂಡಿದ್ದಾರೆ. ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Tags

Caseassaultrobberygold ornamentsAccusearrest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X