Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅತ್ಯಾಚಾರಕ್ಕೆ ಜಾತಿಯಾಧರಿತ,...

ಅತ್ಯಾಚಾರಕ್ಕೆ ಜಾತಿಯಾಧರಿತ, ಧರ್ಮಾಧಾರಿತ, ಪುರುಷಾಧಿಪತ್ಯ ಮನಸ್ಥಿತಿ ಕಾರಣ: ಉಪನ್ಯಾಸಕಿ ಶಾರದಾ ಆರೋಪ

ವಾರ್ತಾಭಾರತಿವಾರ್ತಾಭಾರತಿ24 Aug 2024 8:43 PM IST
share
ಅತ್ಯಾಚಾರಕ್ಕೆ ಜಾತಿಯಾಧರಿತ, ಧರ್ಮಾಧಾರಿತ, ಪುರುಷಾಧಿಪತ್ಯ ಮನಸ್ಥಿತಿ ಕಾರಣ: ಉಪನ್ಯಾಸಕಿ ಶಾರದಾ ಆರೋಪ

ಉಡುಪಿ, ಆ.24: ಮಹಿಳೆಯರ ಮೇಲಿನ ಅತ್ಯಾಚಾರಕ್ಕೆ ಜಾತಿಯಾಧರಿತ, ಧರ್ಮಾಧಾರಿತ ಹಾಗೂ ಪುರುಷಾಧಿಪತ್ಯದ ಮನಸ್ಥಿತಿಯೇ ಕಾರಣವಾಗಿದೆ. ಸಂತ್ರಸ್ಥರಿಗೆ ನ್ಯಾಯ ಸಿಗುವುದೇ ಜಾತಿ, ಧರ್ಮಧಾರಿತವಾಗಿ ಎಂಬ ವಾತಾವರಣ ಸೃಷ್ಟಿಯಾಗಿದೆ. ನ್ಯಾಯ ಎಲ್ಲರಿಗೂ ಸಮಾನವಾಗಿಲ್ಲ ಎಂದು ಉಪನ್ಯಾಸಕಿ ಶಾರದಾ ಆರೋಪಿಸಿದ್ದಾರೆ.

ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ವತಿಯಿಂದ ಶನಿವಾರ ಸಂತೆಕಟ್ಟೆಯ ಮೌಂಟ್ ರೋಝರಿ ಚರ್ಚ್ ಸಮೀಪದ ಮೈದಾನದಲ್ಲಿ ಆಯೋಜಿಸಲಾದ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ಮಹಿಳೆಯರು ದೈಹಿಕವಾಗಿಯೂ ನಮ್ಮ ಪುರುಷರಷ್ಟೇ ಸಮಾನರು. ಯಾವ ಕಾರಣಕ್ಕೂ ನಾವು ಅಸಮಾನರು ಅಲ್ಲ. ನಾವು ಸಮಾನರಾಗಿ ಶಕ್ತಿಯುತರು. ಹೆಣ್ಣುಮಕ್ಕಳು ಮೊಂಬತ್ತಿಗಳ ರೂಪಕವಾಗುವುದು ಬೇಡ. ಹೆಣ್ಣು ಮಕ್ಕಳಿಗೆ ಶಕ್ತಿಯಿದೆ. ನಮ್ಮ ಬಟ್ಟೆ ಸರಿಯಿಲ್ಲ, ನಡವಳಿಕೆ ಸರಿಯಿಲ್ಲ ಎನ್ನುವ ಮನಸ್ಥಿತಿ ವಿರುದ್ಧ ಮಾತನಾಡಬೇಕು. ಅವರನ್ನು ಸಮಾಜದಲ್ಲಿ ಸರಿಯಾದ ರೀತಿಯಲ್ಲಿ ಪ್ರಶ್ನಿಸುವಂತವರಾಗಿ ಬೆಳೆಸಬೇಕು ಎಂದು ಅವರು ಹೇಳಿದರು.

ಹಿರಿಯ ಮನೋ ವೈದ್ಯ ಡಾ.ಪಿ.ವಿ.ಭಂಡಾರಿ ಮಾತನಾಡಿ, ಸರಕಾರ ಮಹಿಳೆಯರ ರಕ್ಷಣೆಯ ಜವಾಬ್ದಾರಿಯನ್ನು ಸರಿ ಯಾಗಿ ಮಾಡುತ್ತಿಲ್ಲ. ಎಲ್ಲ ಸರಕಾರಗಳ ಸಮಾನವಾಗಿ ನಿಷ್ಕ್ರಿಯವಾಗಿದೆ. ಹಲವು ಪ್ರಕರಣದಲ್ಲಿ ಮಹಿಳೆಯರು ಪ್ರಕರಣ ದಾಖಲಿಸಲು ಹಿಂಜರಿಯಬೇಕಾದ ವಾತಾವರಣ ಸೃಷ್ಟಿಯಾಗಿದೆ. ಆದುದರಿಂದ ಕಾನೂನು ವ್ಯವಸ್ಥೆಯನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕಾದ ಅವಶ್ಯಕತೆ ಇದೆ ಎಂದು ತಿಳಿಸಿದರು.

ವೈದ್ಯರ ರಕ್ಷಣೆಗೆ ಸೂಕ್ತವಾದ ಕಾನೂನು ರಚಿಸುವಲ್ಲಿ ಸರಕಾರಗಳು ವಿಫಲವಾಗಿದೆ. ಸರಕಾರಗಳು ಈ ಕುರಿತು ಗಂಭೀರ ವಾಗಿ ಚಿಂತಿಸಬೇಕು. ಮಾಧ್ಯಮಗಳು ಸಂತ್ರಸ್ತರ ವಿವರಗಳನ್ನು ಪ್ರಕಟಿಸಬಾರದು. ಇದರಿಂದ ಸಂತ್ರಸ್ಥರಿಗೆ ಮತ್ತಷ್ಟು ಘಾಸಿಯಾಗುತ್ತದೆ. ಯಾವುದೇ ಕಾರಣಕ್ಕೂ ಇಂತಹ ಕೃತ್ಯವನ್ನು ಧರ್ಮಾಧರಿತವಾಗಿ ನೋಡಬಾರದು. ಎಲ್ಲ ಧರ್ಮ ಜಾತಿಗಳಲ್ಲೂ ಇಂತಹ ಜನರು ಇರುತ್ತಾರೆ ಎಂದು ತಿಳಿಸಿದರು.

ದಸಂಸ ಮುಖಂಡ ಸುಂದರ್ ಮಾಸ್ತರ್ ಮಾತನಾಡಿದರು. ಸಮೀರ್ ತೀರ್ಥಹಳ್ಳಿ ಪ್ರಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ವೆರೋನಿಕಾ ಕರ್ನೆಲಿಯೋ, ಅಝೀಜ್ ಉದ್ಯಾವರ, ಝೀರ್ ನೇಜಾರು, ಸಾದೀಕ್ ಉಸ್ತಾದ್ ಹೂಡೆ, ಹುಸೇನ್ ಕೋಡಿಬೆಂಗ್ರೆ, ಫಾ.ವಿಲಿಯಂ ಮಾರ್ಟಿಸ್, ಸಂತೋಷ್ ಕರ್ನೆಲಿಯೋ ಮೊದಲಾದವರು ಉಪಸ್ಥಿತರಿದ್ದರು.

ಅಲ್ವಿನ್ ದಾಂತಿ ಕಾರ್ಯಕ್ರಮ ನಿರೂಪಿಸಿದರು. ಗಾಡ್ವಿನ್ ಮಸ್ಕರೇನಸ್ ವಂದಿಸಿದರು. ಇದಕ್ಕೂ ಮುನ್ನಾ ಮೌಂಟ್ ರೋಝರಿ ಚರ್ಚ್‌ನಿಂದ ಪ್ರತಿಭಟನಾ ಸ್ಥಳದವರೆಗೆ ಮೆರವಣಿಗೆ ನಡೆಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X