Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಸಿರು ಪಟಾಕಿಯೊಂದಿಗೆ ಬೆಳಕಿನ ಹಬ್ಬ...

ಹಸಿರು ಪಟಾಕಿಯೊಂದಿಗೆ ಬೆಳಕಿನ ಹಬ್ಬ ಆಚರಿಸಿ: ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ7 Nov 2023 8:04 PM IST
share
ಹಸಿರು ಪಟಾಕಿಯೊಂದಿಗೆ ಬೆಳಕಿನ ಹಬ್ಬ ಆಚರಿಸಿ: ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ : ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿ ಬಳಕೆಯೊಂದಿಗೆ ಆಚರಿಸಿ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯಲ್ಲಿ ಪಟಾಕಿಗಳ ಮಾರಾಟ ಮತ್ತು ನಿಯಂತ್ರಿಸುವ ಕುರಿತು ಮಾತನಾಡಿದ ಅವರು, ಈ ಬಾರಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೇಟ್ ಮೇಲೆ ಹಸಿರು ಪಟಾಕಿಯ ಚಿಹ್ನೆಯಿದ್ದು, ಕ್ಯೂಆರ್ ಕೋಡ್ ಇರುವ ಪಟಾಕಿಗಳನ್ನೇ ಎಲ್ಲರೂ ಉಪಯೋಗಿಸಬೇಕು ಎಂದು ಮನವಿ ಮಾಡಿದರು.

ಈ ಬಾರಿ ನವೆಂಬರ್ 12ರಿಂದ 15ರವರೆಗೆ ದೀಪಾವಳಿ ಹಬ್ಬವನ್ನು ಎಲ್ಲೆಡೆ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಉಳಿದ ಯಾವುದೇ ಪಟಾಕಿಗಳನ್ನು ಬಳಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ಮಾಡಿದೆ. ರಾತ್ರಿ 8ರಿಂದ ರಾತ್ರಿ 11 ಗಂಟೆಯವರೆಗೆ ಮಾತ್ರ ಪಟಾಕಿಯನ್ನು ಸಿಡಿಸಲು ಅವಕಾಶ ನೀಡಲಾಗುವುದು ಎಂದರು.

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗೂ ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು. ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಹಾಗೂ ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸುಡುಮದ್ದುಗಳನ್ನು ಸ್ಪೋಟಿಸು ವಂತಿಲ್ಲ ಎಂದರು.

ತಹಶೀಲ್ದಾರರು, ವೃತ್ತ ನಿರೀಕ್ಷಕರು, ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಎಲ್ಲಾ ಪಟಾಕಿ ಮಾರಾಟ ಗಾರರ ಗೋದಾಮುಗಳನ್ನು ಪರಿಶೀಲಿಸಿ, ಅಲ್ಲಿ ಹಸಿರು ಪಟಾಕಿಯಲ್ಲದೆ, ಇನ್ನಾವುದಾದರೂ ನಿಷೇದಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಿತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ತಾತ್ಕಾಲಿಕ ಪಟಾಕಿ ಮಾರಾಟ ಮಳಿಗೆ ತೆರೆಯುವ ಮಾಲಕರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಮಳಿಗೆ ಗಳನ್ನು ತೆರೆಯಬೇಕು. ಅನುಮತಿ ನೀಡುವಾಗ ಸೂಚಿಸಿರುವ ಎಲ್ಲಾ ಷರತ್ತುಗಳನ್ನು ತಪ್ಪದೇ ಪಾಲಿಸಬೇಕು ಎಂದು ನುಡಿದರು.

ಸಾರ್ವಜನಿಕರಿಗೆ ಹಾಗೂ ಮಕ್ಕಳಲ್ಲಿ ಅರಿವು ಮೂಡಿಸಲು ಪರಿಣಾಮಕಾರಿ ಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಬೇಕು. ಪರಿಸರ ಸ್ನೇಹಿ ದೀಪಾವಳಿ ಹಬ್ಬದ ಕುರಿತು ಸಾರ್ವಜನಿಕ ಸ್ಥಳಗಳಾದ ಮೆಟ್ರೊ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಮಾಲ್‌ಗಳಲ್ಲಿ ಕರಪತ್ರ/ ಭಿತ್ತಿಪತ್ರಗಳನ್ನು ಹಂಚುವ ಮೂಲಕ ಹಾಗೂ ಟಿವಿ ಮತ್ತು ರೇಡಿಯೋಗಳಲ್ಲಿ ಪ್ರಚಾರ ಪಡಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಬೇಕು.

ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಟ ಮಾಡುವ ನಿರೀಕ್ಷೆ ಇದ್ದು, ದೀಪಾವಳಿ ಹಬ್ಬ ಮುಗಿಯುವವರೆಗೂ ಜಿಲ್ಲೆಯ ಎಲ್ಲಾ ಗಡಿಭಾಗಗಳ ಚೆಕ್ ಪೋಸ್ಟ್‌ಗಳನ್ನು ವಾಣಿಜ್ಯ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಿ, ನಿಷೇಧಿತ ಪಟಾಕಿಗಳು ಇದ್ದಲ್ಲಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದರು.

ದೀಪಾವಳಿ ಸಮಯದಲ್ಲಿ ಉತ್ಪಾದನೆಯಾಗುವ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿಯ ಕುರಿತು ಸ್ಥಳೀಯ ಸಂಸ್ಥೆಗಳು ಕ್ರಮ ವಹಿಸಬೇಕು ಎಂದು ಡಾ.ವಿದ್ಯಾಕುಮಾರಿ ಸಂಬಂಧಿತ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X