Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಗಣೇಶ...

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಗಣೇಶ ಹಬ್ಬ ಆಚರಣೆ

ವಾರ್ತಾಭಾರತಿವಾರ್ತಾಭಾರತಿ19 Sept 2023 7:43 PM IST
share
ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಗಣೇಶ ಹಬ್ಬ ಆಚರಣೆ

ಉಡುಪಿ, ಸೆ.19: ಉಡುಪಿ ಜಿಲ್ಲೆಯಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಇಂದು ಆಚರಿಸಲಾಯಿತು.

ಉಡುಪಿಯ ಕಡಿಯಾಳಿ, ಅಲೆವೂರು, ಅಂಬಲಪಾಡಿ, ಮಣಿಪಾಲ, ಮಲ್ಪೆ, ಹಿರಿಯಡ್ಕ, ಕಾಪು, ಬ್ರಹ್ಮಾವರ, ಕಾರ್ಕಳ, ಹೆಬ್ರಿ, ಕುಂದಾಪುರ, ಬೈಂದೂರು ಸೇರಿದಂತೆ ಜಿಲ್ಲೆಯ 470 ಕಡೆಗಳಲ್ಲಿ ಸಾರ್ವಜನಿಕವಾಗಿ ಗಣೇಶೋತ್ಸವವನ್ನು ಆಚರಿಸಲಾಯಿತು.

ಕುಂದಾಪುರದ ಕೆಲವು ಕಡೆಗಳಲ್ಲಿ ಸೋಮವಾರವೇ ಗಣೇಶ ಹಬ್ಬವನ್ನು ಆಚರಿಸಿ ಸಾರ್ವಜನಿಕ ಗಣೇಶೋತ್ಸವದಲ್ಲಿನ ಗಣೇಶನ ಮೂರ್ತಿಯನ್ನು ಸಂಜೆಯೇ ವಿಸರ್ಜನೆ ಮಾಡಲಾಯಿತು. ಉಡುಪಿಯಲ್ಲಿ ಕೆಲವು ಕಡೆ ಇಂದು ಸಂಜೆ ಗಣೇಶನ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ವಿಸರ್ಜಿಸ ಲಾಯಿತು. ಚೌತಿ ಪ್ರಯುಕ್ತ ಭಕ್ತರು ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು.

ಉಡುಪಿ ಶ್ರೀಕೃಷ್ಣಮಠದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಮಂಟಪದಲ್ಲಿ ಗಣೇಶ ಮೂರ್ತಿಯನ್ನಿರಿಸಿ, ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾ ಸಾಗರತೀರ್ಥ ಸ್ವಾಮೀಜಿ ಹಾಗೂ ಶೀರೂರು ಮಠಾಧೀಶ ಶ್ರೀವೇದವರ್ಧನ ತೀರ್ಥ ಸ್ವಾಮೀಜಿ ಉಪಸ್ಥಿತಿಯಲ್ಲಿ ಪರ್ಯಾಯ ಮಠದ ಪುರೋಹಿತ ಶ್ರೀನಿವಾಸ ಉಪಾಧ್ಯಾಯರು ಗಣಹೋಮ ಮಾಡಿ ವಿಶೇಷ ಪೂಜೆಯನ್ನು ನೆರವೇರಿಸಿದರು.

ಬೆಲ್ಲದ ಗಣಪತಿ ಪ್ರದರ್ಶನ: ಉಡುಪಿ ನಾಗರಿಕ ಸಮಿತಿಯ ವತಿಯಿಂದ ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ನಗರದ ಮಾರುಥಿ ವೀಥಿಕಾದಲ್ಲಿ ಆಚರಿಸಲಾಯಿತು.

ಶುದ್ಧ ಬೆಲ್ಲದಿಂದ ತಯಾರಿಸುವ ಗಣಪತಿಯನ್ನು ಪ್ರದರ್ಶನ ಮಂಟಪದಲ್ಲಿ ಸ್ಥಾಪಿಸಿ ಪ್ರದರ್ಶಿಸಲಾಯಿತು. ಮಂಡ್ಯದ ಆಲೆಮನೆಯಲ್ಲಿ ನುರಿತ ಕಲಾವಿದ ರಿಂದ ಎರಡಡಿ ಚೌಕಾಕೃತಿಯ ಬೆಲ್ಲದ ಗಟ್ಟಿಯಲ್ಲಿ ಗಣಪತಿಯನ್ನು ನಾಜೂಕಿ ನಿಂದ ಕೆತ್ತಿಸಿ, ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡುವರು ಉಡುಪಿಗೆ ತರಿಸಿದ್ದರು. ವಿನೂತನ ರೀತಿಯ ಗಣಪತಿಯನ್ನು ಗುರುವಾರದವರೆಗೆ ವಿಕ್ಷಣೆಗೆ ಇಡಲು ತಿರ್ಮಾನಿಸಲಾಗಿದೆ.

ಪ್ರದರ್ಶನವನ್ನು ಪರಿಸರ ತಜ್ಞ, ಡಾ.ಸತೀಶ್ ನಾಯ್ಕ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಭಾಸ್ಕರ್ ಶೇರಿಗಾರ್, ಜೋಸ್ ಆಲುಕಾಸ್ ಆಭರಣ ಮಳಿಗೆಯ ವ್ಯವಸ್ಥಾಪಕ ರಾಜೇಶ್ ಎನ್.ಆರ್, ಗೋಪಾಲ್, ಭೀಮಾ ಆಭರಣ ಮಳಿಗೆಯ ಅಷ್ಮತ್ ರಾವ್, ಶ್ರೀನಿಧಿ ಭಟ್, ಕೊಟೆಕ್ ಮಹೇಂದ್ರ ಬ್ಯಾಂಕಿನ ಸಿಬಂದಿ, ನಾಗರಿಕ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಿಗಿ ಪೊಲೀಸ್ ಭದ್ರತೆ: ಗಣೇಶ ಚತುರ್ಥಿ ಪ್ರಯುಕ್ತ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಮಾರ್ಗ ದರ್ಶನದಲ್ಲಿ ಉಡುಪಿ ನಗರ ಹಾಗೂ ಗಂಗೊಳ್ಳಿ ಪ್ರದೇಶಗಳಲ್ಲಿ ನೂರಾರು ಪೊಲೀಸರಿಂದ ಪಥ ಸಂಚಲನವನ್ನು ನಡೆಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X