Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಮೊಂತಿ...

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಮೊಂತಿ ಫೆಸ್ತ್ ಆಚರಣೆ

ವಾರ್ತಾಭಾರತಿವಾರ್ತಾಭಾರತಿ8 Sept 2024 7:12 PM IST
share
ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಮೊಂತಿ ಫೆಸ್ತ್ ಆಚರಣೆ

ಉಡುಪಿ: ಜಿಲ್ಲಾದ್ಯಂತ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ಟ್‌ನ್ನು ಕ್ರೆಸ್ತರು ರವಿವಾರ ಸಂಭ್ರಮದಿಂದ ಆಚರಿಸಿದರು.

ಧರ್ಮಗುರುಗಳು ಸಾರ್ವಜನಿಕ ಸ್ಥಳಗಳಲ್ಲಿ ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು. ಪುಟ್ಟ ಮಕ್ಕಳು ಕನ್ಯಾ ಮರಿಯಮ್ಮನವರ ಮೂರ್ತಿಗೆ ಹೂಗಳನ್ನು ಸಮರ್ಪಿಸಿದ ಬಳಿಕ ಜಿಲ್ಲೆಯ ಎಲ್ಲ ಚರ್ಚ್‌ಗಳಲ್ಲಿ ಧರ್ಮ ಗುರುಗಳು ಭತ್ತದ ತೆನೆಯನ್ನು ಆಶೀರ್ವದಿಸಿ ಪವಿತ್ರ ಬಲಿಪೂಜೆಯಲ್ಲಿ ಪಾಲ್ಗೊಂಡರು. ಪವಿತ್ರ ಬಲಿಪೂಜೆಯಲ್ಲಿ ಧರ್ಮಗುರುಗಳು ಕುಟುಂಬ ಜೀವನ ಹಾಗೂ ಸಮಾಜದಲ್ಲಿ ಮಹಿಳೆಯ ಸ್ಥಾನ ಮಾನದ ಕುರಿತು ಪ್ರವಚನ ನೀಡಿದರು.

ಉಡುಪಿಯ ಶೋಕ ಮಾತಾ ಇಗರ್ಜಿಯಲ್ಲಿ ಜರಗಿದ ಧಾರ್ಮಿಕ ಕಾರ್ಯ ಕ್ರಮದಲ್ಲಿ ಚರ್ಚಿನ ಪ್ರಧಾನ ಧರ್ಮಗುರು ವಂದನೀಯ ಚಾರ್ಲ್ಸ್ ಮಿನೇಜಸ್ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು. ತೊಟ್ಟಂ ಸಂತ ಅನ್ನಮ್ಮ ದೇವಾಲಯ ದಲ್ಲಿ ಪ್ರಧಾನ ಧರ್ಮಗುರು ವಂ.ಡೆನಿಸ್ ಡೆಸಾ, ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನಲ್ಲಿ ಧರ್ಮಪ್ರಾಂತ್ಯದ ಪ್ರಧಾನ ಧರ್ಮಗುರು ವಂ.ಫರ್ಡಿನಾಂಡ್ ಗೊನ್ಸಾಲ್ವಿಸ್, ಶಿರ್ವ ಆರೋಗ್ಯ ಮಾತಾ ಇಗರ್ಜಿಯಲ್ಲಿ ವಂ.ಲೆಸ್ಲಿ ಡಿಸೋಜ, ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದಲ್ಲಿ ವಂ.ಆಲ್ಬನ್ ಡಿಸೋಜ, ಸಾಸ್ತಾನ ಸಂತ ಅಂತೋನಿ ದೇವಾಲಯದಲ್ಲಿ ವಂ.ಸುನೀಲ್ ಡಿಸಿಲ್ವ ನೇತೃತ್ವದಲ್ಲಿ ಹಬ್ಬದ ಪ್ರಯುಕ್ತ ಬಲಿಪೂಜೆ ನಡೆದವು.

ಇದಲ್ಲದೆ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ಸಹ ಹಬ್ಬದ ಬಲಿಪೂಜೆಯನ್ನು ಆಯಾ ಚರ್ಚುಗಳ ಧರ್ಮಗುರುಗಳ ನೇತೃತ್ವದಲ್ಲಿ ಹಬ್ಬದ ಆಚರಣೆಗಳು ನಡೆದವು. ಬಲಿಪೂಜೆಯ ಬಳಿಕ ಧರ್ಮಗುರುಗಳು ಪ್ರತಿ ಕುಟುಂಬಕ್ಕೆ ಆಶೀರ್ವದಿಸಿದ ಹೊಸ ಭತ್ತದ ತೆನೆಯನ್ನು ನೀಡಿ ಹರಸಿದರು. ಇದೇ ವೇಳೆ ಚಿಕ್ಕ ಮಕ್ಕಳಿಗೆ ಸಿಹಿತಿಂಡಿ, ಕಬ್ಬುಗಳನ್ನು ಸಹ ವಿತರಿಸಲಾಯಿತು.

ಇಗರ್ಜಿಯಿಂದ ಭಕ್ತಿಯಿಂದ ಕೊಂಡು ಬಂದ ಭತ್ತದ ತೆನೆಯನ್ನು ಕುಟುಂಬದ ಹಿರಿಯರು ಮನೆಗೆ ತಂದು ದೇವರ ಪೀಠದ ಮೇಲಿಟ್ಟು ಪ್ರಾರ್ಥನೆ ಸಲ್ಲಿಸಿ, ಹೊಸ ಭತ್ತದ ತೆನೆಗಳನ್ನು ಸುಲಿದು ಕುಟುಂಬದ ಸದಸ್ಯರೊಂದಿಗೆ ಪಾಯಸ ಅಥವಾ ಹಾಲಿನೊಂದಿಗೆ ಸೇವಿಸಿದರು. ಅಲ್ಲದೆ ಮನೆಗಳಲ್ಲಿ ಸಂಪೂರ್ಣ ಸಸ್ಯಹಾರದ ಭೋಜನವನ್ನು ತಯಾರಿಸಿ ಕುಟುಂಬದ ಎಲ್ಲಾ ಸದಸ್ಯರು ನೆಲದ ಮೇಲೆ ಕುಳಿತು ಬಾಳೆ ಎಲೆಯಲ್ಲಿ ಸೇವಿಸಿದರು.

ಹಬ್ಬಕ್ಕೆ ಮುಂಚಿತವಾಗಿ 9 ದಿನ ಮಾತೆ ಮೇರಿಯ ಕೃಪೆಯನ್ನು ಬೇಡಿಕೊಂಡು ವಿಶೇಷ ಪ್ರಾರ್ಥನೆ(ನವೇನಾ) ಎಲ್ಲ ಚರ್ಚ್‌ ಗಳಲ್ಲಿ ನಡೆಯುತ್ತದೆ. 9ನೇ ದಿನವನ್ನು ಮೊಂತಿ ಹಬ್ಬವಾಗಿ ಕರಾವಳಿಯ ಕ್ರೆಸ್ತ ಬಂಧುಗಳು ಆಚರಣೆ ಮಾಡಿದ್ದು ಹಬ್ಬದ ದಿನದಂದು ಕನ್ಯಾ ಮರಿಯಮ್ಮ ಅವರ ಮೂರ್ತಿಯನ್ನು ಚರ್ಚ್‌ಗಳ ಮುಂಭಾಗದಲ್ಲಿಟ್ಟು ಕ್ರೆಸ್ತ ಹಾಡುಗಳ ಮೂಲಕ ಪುಟಾಣಿ ಮಕ್ಕಳು ಕನ್ಯಾ ಮರಿಯಮ್ಮರಿಗೆ ಪುಷ್ಪಾರ್ಪಣೆ ಮಾಡಿದ ನಂತರ ಚರ್ಚ್‌ಗಳಲ್ಲಿ ಮೊಂತಿ ಹಬ್ಬಕ್ಕಾಗಿ ವಿಶೇಷ ವಾದ ಪ್ರಾರ್ಥನೆ, ಬಲಿಪೂಜೆಗಳು ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X