Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯ ಕುಡಿಯುವ ನೀರಿನ ಗುಣಮಟ್ಟ...

ಉಡುಪಿ ಜಿಲ್ಲೆಯ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಿಸಿ: ಸಿಇಓ ಪ್ರಸನ್ನ

ವಾರ್ತಾಭಾರತಿವಾರ್ತಾಭಾರತಿ9 Aug 2023 7:06 PM IST
share
ಉಡುಪಿ ಜಿಲ್ಲೆಯ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಿಸಿ: ಸಿಇಓ ಪ್ರಸನ್ನ

ಉಡುಪಿ, ಆ.9: ಜಿಲ್ಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಕುಡಿಯುವ ನೀರಿನ ಮೂಲಗಳ ನೀರು ಯಾವುದೇ ರೀತಿಯಲ್ಲಿ ಕಲುಷಿತ ವಾಗಿರದೇ, ಸಾರ್ವಜನಿಕರ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಬೀರದೇ, ಕುಡಿಯಲು ಯೋಗ್ಯವಾಗಿರುವ ಕುರಿತಂತೆ ಪರಿಶೀಲಿಸಿ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಸೂಚನೆ ನೀಡಿದ್ದಾರೆ.

ಬುಧವಾರ ನೀರಿನಿಂದ ಹರಡುವ ರೋಗಗಳನ್ನು ತಡೆಗಟ್ಟುವ ಬಗ್ಗೆ ಆಯೋಜಿಸಲಾದ ವೀಡಿಯೋ ಸಂವಾದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಕುಡಿಯುವ ನೀರಿನ ಮೂಲಗಳು ಕಲುಷಿತಗೊಂಡಲ್ಲಿ ಆ ನೀರನ್ನು ಸೇವಿಸುವ ಸಾರ್ವಜನಿಕರು ಸಾಂಕ್ರಾಮಿಕ ರೋಗ ಗಳಿಗೆ ತುತ್ತಾಗುವ ಸಾಧ್ಯತೆಗಳಿದ್ದು, ಜಿಲ್ಲೆಯಲ್ಲಿರುವ ಎಲ್ಲಾ ಕುಡಿಯುವ ನೀರಿನ ಸರಬರಾಜು ಮೂಲಗಳಲ್ಲಿರುವ ನೀರನ್ನು ಪರೀಕ್ಷೆಗೆ ಒಳಪಡಿಸುವಂತೆ ಮತ್ತು ಆ ಪ್ರದೇಶದಲ್ಲಿ ಯಾವುದೇ ಕಲುಷಿತ ಪದಾರ್ಥ ಅಥವಾ ನೀರು ಕುಡಿಯುವ ನೀರಿಗೆ ಸೇರ್ಪಡೆಯಾಗದಂತೆ ಎಚ್ಚರವಹಿಸುವಂತೆ ಕರೆ ನೀಡಿದ ಪ್ರಸನ್ನ, ಆ ಪ್ರದೇಶವನ್ನು ಕಸಕಡ್ಡಿ ಇಲ್ಲದಂತೆ ಹಾಗೂ ಪೊದೆಗಳು ಬೆಳೆಯದಂತೆ ಸೂಕ್ತ ರೀತಿಯಲ್ಲಿ ಸ್ವಚ್ಛಗೊಳಿಸುವಂತೆ ಸೂಚನೆ ನೀಡಿದರು.

ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ 15ನೇ ಹಣಕಾಸು ಯೋಜನೆಯಡಿ ಲಭ್ಯವಿರುವ ಅನುದಾನದ ಬಳಕೆ ಮಾಡಿಕೊಂಡು ಓವರ್‌ಹೆಡ್ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸುವಂತೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಕ್ಲೋರಿನೇಶನ್ ಮಾಡಿಸು ವಂತೆ ಸಿಇಓ ನಿರ್ದೇಶನ ನೀಡಿದರು.

ಎಲ್ಲಾ ಪಂಚಾಯತ್‌ಗಳಲ್ಲಿ ಫಾಗಿಂಗ್ ಮೆಷಿನ್‌ಗಳನ್ನು ಶೀಘ್ರದಲ್ಲಿ ಖರೀದಿಸಿ, ಕೀಟಜನ್ಯ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದ ಅವರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್‌ಗಳು ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ, ಕುಡಿಯುವ ನೀರಿನ ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸುವಂತೆ ತಿಳಿಸಿದರು.

ಮಕ್ಕಳಲ್ಲಿ ಸಾಂಕ್ರಾಮಿಕ ರೋಗಗಳು, ಅದರಲ್ಲೂ ಡಯಾರಿಯಾ ರೋಗವು ಬೇಗನೇ ಹರಡುವುದರಿಂದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ನೀರು ಶುದ್ಧೀಕರಣ ಫಿಲ್ಟರ್‌ಗಳನ್ನು ಲಭ್ಯವಿರುವ ಅನುದಾನದಲ್ಲಿ ಖರೀದಿಸಿ, ಅಳವಡಿಸು ವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಾಂಕ್ರಾಮಿಕ ರೋಗಗಳ ಹರಡುವಿಕೆ ಮತ್ತು ನಿಯಂತ್ರಣಕ್ಕೆ ಕೈಗೊಳ್ಳ ಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಜಿಂಗಲ್ಸ್ ಸಿದ್ಧಪಡಿಸಿ, ಅದನ್ನು ಘನ ಮತ್ತು ದ್ರವ ತ್ಯಾಜ್ಯ ಸಂಗ್ರಹಣಾ ವಾಹನಗಳ ಮೂಲಕ ವ್ಯಾಪಕ ಜಾಗೃತಿ ಮೂಡಿಸುವಂತೆ ತಿಳಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ (ಪ್ರಭಾರ) ಡಾ.ವಾಸುದೇವ ಉಪಾಧ್ಯಾಯ ಅವರು ಶುದ್ದ ಕುಡಿಯುವ ನೀರಿನ ಪ್ರಾಮುಖ್ಯತೆ, ಕಲುಷಿತ ನೀರು ಮತ್ತು ಆಹಾರದಿಂದ ಹರಡುವ ಕಾಯಿಲೆಗಳ ಬಗ್ಗೆ ಮತ್ತು ಅವುಗಳನ್ನು ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ವೈಯಕ್ತಿಕ ಶುಚಿತ್ವ ಮತ್ತು ಕೈಗಳ ಶುಚಿತ್ವ ಹಾಗೂ ಕ್ಲೋರಿನೇಷನ್ ವಿಧಾನದ ಬಗ್ಗೆ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಪ್ರಶಾಂತ್ ಭಟ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿ ಕಾರಿ ಶ್ರೀನಿವಾಸ ರಾವ್, ಜಿಲ್ಲೆಯ ಆರೋಗ್ಯ ಇಲಾಖೆಯ ಎಲ್ಲಾ ವೈದ್ಯಾಧಿಕಾರಿಗಳು, ಎಲ್ಲಾ ತಾಲೂಕು ಪಂಚಾಯತ್‌ಗಳ ಕಾರ್ಯ ನಿರ್ವಹಣಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ವಿಭಾಗದ ಇಂಜಿನಿಯರ್‌ಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವೀಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X