Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮುಖ್ಯಮಂತ್ರಿಗಳು ಕೆಆರ್‌ಎಸ್ ಡ್ಯಾಮ್...

ಮುಖ್ಯಮಂತ್ರಿಗಳು ಕೆಆರ್‌ಎಸ್ ಡ್ಯಾಮ್ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಲಿ: ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ1 Sept 2023 6:21 PM IST
share
ಮುಖ್ಯಮಂತ್ರಿಗಳು ಕೆಆರ್‌ಎಸ್ ಡ್ಯಾಮ್ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಲಿ: ಶೋಭಾ ಕರಂದ್ಲಾಜೆ

ಉಡುಪಿ, ಸೆ.1: ಕಾವೇರಿ ವಿಚಾರದಲ್ಲಿ ರಾಜ್ಯ ಸರಕಾರ ತಮಿಳುನಾಡು ಸರಕಾರದ ಮನವೊಲಿಸಬೇಕು. ಕಳೆದ ಬಾರಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ನೀರು ಬಿಡುಗಡೆ ಮಾಡಲಾಗಿದೆ. ಈ ಬಾರಿ ರಾಜ್ಯ ಸರಕಾರ ತಪ್ಪು ಮಾಡುತ್ತಿದೆ. ಮುಖ್ಯಮಂತ್ರಿಗಳು ಕೆಆರ್‌ಎಸ್ ಡ್ಯಾಮ್‌ನ ಪರಿಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರ್ಷ ಮಳೆಯ ಪ್ರಮಾಣ ಕಡಿಮೆ ಯಾಗಿದೆ. ರಾಜ್ಯದ ಯಾವುದೇ ಡ್ಯಾಮ್‌ಗಳು ತುಂಬಿಲ್ಲ. ಕೆಆರ್‌ಎಸ್ ಡ್ಯಾಂ ಕರ್ನಾಟಕದ ದಕ್ಷಿಣ ಭಾಗಕ್ಕೆ ಮತ್ತು ಕಾವೇರಿ ನದಿ ಬೆಂಗಳೂರು, ಕೋಲಾರ, ಮೈಸೂರಿಗೆ, ಮಂಡ್ಯ, ತುಮಕೂರಿಗೆ ನೀರು ಕೊಡುತ್ತದೆ. ನಮ್ಮ ಡ್ಯಾಮ್‌ನ ನೀರು ಬಿಟ್ಟರೆ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಎಲ್ಲಿಗೆ ಹೋಗುವುದು. ಇಂಡಿಯಾ ಟೀಮ್‌ನ್ನು ಖುಷಿ ಪಡಿಸಲು ನೀರು ಬಿಡುತ್ತಿದ್ದಾರೆ ಎಂದು ಟೀಕಿಸಿದರು.

ಗ್ಯಾರೆಂಟಿ ಯೋಜನೆಗಳಿಂದ ಖಾಸಗಿ ವಲಯಕ್ಕೆ ಹೊಡೆತದ ಬಗ್ಗೆ ಉತ್ತರಿಸಿದ ಅವರು, ಕಾಂಗ್ರೆಸ್ಸಿನ ಉಚಿತ ಯೋಜನೆ ಗಳಿಂದ ಹಲವಾರು ಅವಾಂತರವಾಗಿದೆ. ಎಲ್ಲವನ್ನು ಉಚಿತವಾಗಿ ಕೊಟ್ಟರೆ ಜನರಿಗೆ ಸಂತೋಷ ಆಗುತ್ತದೆ. ಕಳೆದ ತಿಂಗಳು ಈ ರಾಜ್ಯದ ನ್ಯಾಯಾಧೀಶರಿಗೆ, ಶಿಕ್ಷಕರಿಗೆ ಮತ್ತೆಲ್ಲರಿಗೂ ಒಂದು ವಾರ ತಡವಾಗಿ ಸಂಬಳವಾಗಿದೆ. ಹಲವಾರು ಯೋಜನೆಗಳಿಗೆ ಸರಿಯಾಗಿ ಹಣ ಸಿಗುತ್ತಿಲ್ಲ. ಸಾಮಾಜಿಕ ಭದ್ರತಾ ಯೋಜನೆಗೆ ಹಣ ಇಲ್ಲ. ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯ ಸರಕಾರದ ಕೊಡುಗೆ ನಿಲ್ಲಿಸಿದೆ ಎಂದು ಶೋಭಾ ಕರಂದ್ಲಾಜೆ ದೂರಿದರು.

ಸರಕಾರ ಇವತ್ತು ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ. ಶೇ.50ರಷ್ಟು ರೂಟ್ ಬಸ್‌ಗಳನ್ನು ಕಡಿತ ಮಾಡಲಾಗಿದೆ. ಸಾರಿಗೆ ಇಲಾಖೆಯ ಸಂಸ್ಥೆಗಳು ನಷ್ಟಕ್ಕೆ ಹೋಗುತ್ತಿವೆ. ಎಲ್ಲದಕ್ಕೂ ಮುಖ್ಯಮಂತ್ರಿಗಳು ಉತ್ತರ ನೀಡಬೇಕು. ಚೀಪ್ ರಾಜಕಾರಣ ದಿಂದ ಅವಾಂತರ ಮಾಡಿದ್ದಾರೆ. ಫ್ರೀ ಅಂತ ಇನ್ನೊಬ್ಬರಿಂದ ಕಿತ್ತುಕೊಳ್ಳುತ್ತಿದ್ದಾರೆ ಮತ್ತು ದರೋಡೆ ಮಾಡುತ್ತಿದ್ದಾರೆ. ಖಾಸಗಿಯವನು ಸಾಲ ಹೇಗೆ ಕಟ್ಟಬೇಕು. ಜೀವನ ಹೇಗೆ ಮಾಡಬೇಕು ಎಂದು ಅವರು ಪ್ರಶ್ನಿಸಿದರು.

ಚುನಾವಣೆಗಳಿಂದ ಅಭಿವೃದ್ಧಿ ಕುಂಠಿತ

ಭಾರತದಲ್ಲಿ ವರ್ಷದ 3-4 ತಿಂಗಳು ಚುನಾವಣೆ ನಡೆಯುತ್ತದೆ. ಇದರಿಂದ ಟೆಂಡರ್ ಕರೆಯಲು ಆಗದೆ ಅಭಿವೃದ್ಧಿ ಕೆಲಸ ಗಳು ಕುಂಠಿತವಾಗುತ್ತದೆ. ಅದಕ್ಕಾಗಿ ಒಂದು ದೇಶ ಒಂದು ಚುನಾವಣೆ ಏಕಕಾಲದಲ್ಲಿ ಎಲ್ಲ ಚುನಾವಣೆಗಳು ಆಗಬೇಕು ಎಂಬುದು ನಮ್ಮ ಅಪೇಕ್ಷೆ. ಕೇರಳದಲ್ಲಿ ಜಿಪಂ, ಗ್ರಾಪಂ, ನಗರಸಭೆ ಚುನಾವಣೆಗಳು ಒಟ್ಟಿಗೆ ನಡೆಯುತ್ತವೆ. ಇದೇ ರೀತಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಒಟ್ಟಿಗೆ ನಡೆಯಬಹುದು ಎಂದು ಅವರು ತಿಳಿಸಿದರು.

ಚಿಹ್ನೆಯಲ್ಲಿ ನಡೆಯುವ ಚುನಾವಣೆ ಒಟ್ಟಿಗೆ ನಡೆಸಬಹುದು. ಇದರಿಂದ ಸಮಯ, ಶ್ರಮ, ಹಣ ಉಳಿಸಬಹುದು. ಪ್ರಚಾರದ ಖರ್ಚು ಕೂಡ ಉಳಿಯುತ್ತದೆ. ಅಭಿವೃದ್ಧಿ ಕೆಲಸಗಳು ವೇಗ ಪಡೆಯುತ್ತವೆ. ಈ ವಿಚಾರದಲ್ಲಿ ವಿಪಕ್ಷ ಯಾಕೆ ಹೆದರಬೇಕು ಮತ್ತು ಯಾಕೆ ವಿರೋಧ ಮಾಡಬೇಕು. ಚುನಾವಣೆಯಲ್ಲಿ ಎಲ್ಲಾ ಪಕ್ಷಗಳು ಕೆಲಸ ಮಾಡುತ್ತಾರೆ ಎಂದರು.

ಏಕಪಕ್ಷೀಯ ನಿರ್ಧಾರ ಅಲ್ಲ

ಅವಧಿಗೂ ಮುನ್ನ ಅದಿವೇಶನ ವಿರೋಧ ಪಕ್ಷಗಳ ವಿರೋಧ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಲಕಾಲಕ್ಕೆ ಸರಕಾರ ತೀರ್ಮಾನ ಮಾಡಿ ಅಧಿವೇಶನ ಕರೆಯಬಹುದಾಗಿದೆ. ಪ್ರಮುಖ ವಿಚಾರದ ಕುರಿತು ಚರ್ಚೆ ಮಾಡಲು ಸರಕಾರ ಅಥವಾ ಮಂತ್ರಿಮಂಡಲ ಈ ರೀತಿ ಅವಧಿಗೂ ಮುನ್ನ ಅದಿವೇಶನ ಕರೆಯುವುದು ಸಾಮಾನ್ಯವಾಗಿದೆ ಎಂದು ಅವರು ಹೇಳಿದರು.

ಮುಂಗಾರು ಅಧಿವೇಶನದಲ್ಲಿ ವಿಪಕ್ಷ ಸದನ ನಡೆಯದಂತೆ ಮಾಡಿದ್ದವು. ಅದರಲ್ಲಿ ಮಹತ್ವದ ವಿಚಾರಗಳು ಚರ್ಚೆಗೆ ಬರಲಿಲ್ಲ. ಅಧಿವೇಶನದಲ್ಲಿ ಭಾಗವಹಿಸದೆ ಜನರ ನಮ್ಮನ್ನು ಆಯ್ಕೆ ಮಾಡಿದ ಉದ್ದೇಶವನ್ನು ಹಾಳು ಮಾಡಿದರು. ಸೆ.17ರಂದು ನಡೆಯುವ ಅಧಿವೇಶನ ಖಂಡಿತವಾಗಿಯೂ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡ ಲಾಗುವುದು ಎಂದು ತಿಳಿಸಿದರು.

ನಮಗೆ ಬಹುಮತ ಇದ್ದರೂ ಏಕಪಕ್ಷೀಯ ನಿರ್ಧಾರ ಮಾಡಿಲ್ಲ. ರಾಜ್ಯ, ದೇಶ ಎಲ್ಲಿಯೂ ನಾವು ಏಕ ಪಕ್ಷವಾಗಿ ನಡೆದು ಕೊಂಡಿಲ್ಲ. ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆದು ಕೆಲಸ ಮಾಡುವುದು ನಮ್ಮ ತೀರ್ಮಾನ. ಎಲ್ಲಾ ಪಕ್ಷಗಳು ಅಧಿವೇಶನ ದಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯ ತಿಳಿಸಬೇಕು. ತಮ್ಮ ಕ್ಷೇತ್ರದ ಜನರ ಅಭಿಪ್ರಾಯವನ್ನು ಮಂಡಿಸಬೇಕು ಎಂದು ಅವರು ಹೇಳಿದರು.

‘ಯಾರು ಕೂಡ ಬಿಜೆಪಿ ಬಿಡಲ್ಲ’

ಬಿಜೆಪಿ ಇವತ್ತು ಕರ್ನಾಟಕದಲ್ಲಿ ಸಂಕಷ್ಟದಲ್ಲಿ ಇರಬಹುದು. ಅಧಿಕಾರ ಅನುಭವಿಸುವ ಸಂದರ್ಭದಲ್ಲಿ ಎಲ್ಲರೂ ಬಂದಿದ್ದೀರಿ. ನಿಮಗೆ ಒಳ್ಳೆಯ ಅಧಿಕಾರ ಕೊಟ್ಟು ಒಳ್ಳೆಯ ಮಂತ್ರಿ ಗಿರಿ ಕೊಟ್ಟಿದ್ದೇವೆ. ಇಲ್ಲಿ ಬಂದರು, ಅಧಿಕಾರ ಇಲ್ಲದಾಗ ಹೋದರು ಎಂಬ ಕೆಟ್ಟ ಹೆಸರು ಬೇಡ. ಇದೇ ಕಾರಣಕ್ಕೆ ಯಾರು ಕೂಡ ಬಿಜೆಪಿ ಬಿಡಲ್ಲ, ಬಿಡಲು ಬಾರದು ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಕಾಂಗ್ರೆಸ್ ನಾಯಕರನ್ನು ಬಿಜೆಪಿಗೆ ಕರೆತರುವ ಯಾವುದೇ ಯೋಚನೆ ಆಗಿಲ್ಲ. ರಾಜ್ಯ ಸರಕಾರ ಈಗಷ್ಟೇ ನೂರು ದಿನ ಪೂರೈಸಿದೆ. ಸರಕಾರದಲ್ಲಿ ಅಸಮಾಧಾನ ಇದೆ. ಬಿಜೆಪಿ ಎಂದೂ ಶಾಸಕರನ್ನು ಸೆಳೆಯುವ ಯೋಚನೆ ಮಾಡಿಲ್ಲ. ಆದರೆ ಕಾಂಗ್ರೆಸ್ ಈ ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್‌ನೊಳಗೆ ಆಪರೇಷನ್ ಸ್ಪರ್ಧೆ ಮಾಡುತ್ತಿದೆ. ಯಾರು ಹೆಚ್ಚು ಜನರನ್ನು ತಮ್ಮ ಪಕ್ಷಕ್ಕೆ ಕರೆ ತರುವುದು ಎಂಬ ಪೈಪೋಟಿ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಆರಂಭವಾಗಿದೆ ಎಂದು ಸಚಿವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X