ಬಾಲಗೌರವ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ, ಜ.31:ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಧಾರವಾಡ ಇವರ ವತಿಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಶೇಷ್ಠ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ ಬಾಲಗೌರವ ಪ್ರಶಸ್ತಿ ಗೆ ಅರ್ಜಿ ಆಹ್ವಾನಿಸಲಾಗಿದೆ.
ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಕ್ಕಳು ಬಾಲಗೌರವ ಪ್ರಶಸ್ತಿಗಾಗಿ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಫೆಬ್ರವರಿ 20ರ ಒಳಗೆ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ-ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ-580004 ಈ ವಿಳಾಸಕ್ಕೆ ಕಳುಹಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಒಂದನೇ ಮಹಡಿ, 204, ’ಬಿ ಬ್ಲಾಕ್’ ರಜತಾದ್ರಿ, ಉಡುಪಿ ಜಿಲ್ಲೆ ಅಥವಾ ದೂ.ಸಂಖ್ಯೆ : 0836-2465490 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.





