Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಸ್ವಚ್ಛ ಕಡಲತೀರ ಹಸಿರು ಕೋಡಿ’ ಅಭಿಯಾನ |...

‘ಸ್ವಚ್ಛ ಕಡಲತೀರ ಹಸಿರು ಕೋಡಿ’ ಅಭಿಯಾನ | ಅ.31ರಂದು 50ನೇ ತಿಂಗಳ ಕೋಡಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 Oct 2026 8:01 PM IST
share
‘ಸ್ವಚ್ಛ ಕಡಲತೀರ ಹಸಿರು ಕೋಡಿ’ ಅಭಿಯಾನ | ಅ.31ರಂದು 50ನೇ ತಿಂಗಳ ಕೋಡಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಕುಂದಾಪುರ: ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಪರಿಸರ ಸಂರಕ್ಷಣೆ ಮತ್ತು ನೈರ್ಮಲ್ಯ ಜಾಗೃತಿಯ ಉದ್ದೇಶದಿಂದ ಸತತವಾಗಿ ನಡೆಸಿಕೊಂಡು ಬರಲಾಗುತ್ತಿರುವ ‘ಸ್ವಚ್ಛ ಕಡಲತೀರ ಹಸಿರು ಕೋಡಿ’ ಅಭಿಯಾನವು ಈಗ ಮಹತ್ವದ ಮೈಲಿಗಲ್ಲನ್ನು ತಲುಪಿದ್ದು, ಅ.31ರಂದು ಬೆಳಗ್ಗೆ 7ರಿಂದ ಬೆಳಗ್ಗೆ 10ರವರೆಗೆ 50ನೇ ತಿಂಗಳ ಕೋಡಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.

ಕುಂದಾಪುರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ಡಾ.ಆಸಿಫ್ ಬ್ಯಾರಿ ಮಾತನಾಡಿ, 2021ರ ಸೆ.29ರಂದು ‘ವಿಶ್ವ ಹಸಿರು ಕಟ್ಟಡಗಳ ಸಪ್ತಾಹ’ದ ಅಂಗವಾಗಿ ಆರಂಭಗೊಂಡ ‘ಸ್ವಚ್ಛ ಕಡಲ ತೀರ-ಹಸಿರು ಕೋಡಿ’ ಅಭಿಯಾನವು 49 ತಿಂಗಳುಗಳನ್ನು ಪೂರ್ಣಗೊಳಿಸಿದ್ದು, ಈಗ ಸ್ವಚ್ಛತಾ ಕಾಯಕದ 50ನೇ ಆವೃತ್ತಿಯ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ವಿದ್ಯಾರ್ಥಿಗಳು, ಸಾರ್ವಜನಿಕರಲ್ಲಿ ಪರಿಸರ ಪ್ರಜ್ಞೆ, ಸೇವಾ ಮನೋ ಭಾವದ ಜೊತೆಗೆ ಸ್ವಚ್ಛತೆಯ ಬಗ್ಗೆ ಜವಾಬ್ದಾರಿ ಹಾಗೂ ಹೊಣೆಗಾರಿಕೆಯನ್ನು ಮೂಡಿಸುವ ನಿಟ್ಟಿನಲ್ಲಿ 6 ವರ್ಷಗಳ ಹಿಂದೆ ಈ ಅಭಿಯಾನ ಆರಂಭಿಸಲಾಗಿತ್ತು ಎಂದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಅಬ್ದುಲ್ ರಹ್ಮಾನ್ ಬ್ಯಾರಿ ಮಾತನಾಡಿ, ಕಡಲತೀರ ಸುಂದರೀಕರಣ, ಕಡಲಾಮೆಯಂತಹ ಜಲಚರ ಜೀವಿಗಳಿಗೆ ಕಸಮುಕ್ತ ಹಾಗೂ ಮಾಲಿನ್ಯ ಮುಕ್ತ ಪರಿಸರ ಒದಗಿಸುವುದು ಮತ್ತು ಪ್ರವಾಸಿಗರಿಗೆ ಶುಚಿತ್ವ ಪೂರ್ಣ ವಾತಾವರಣ ನಿರ್ಮಿಸುವುದು ಈ ಅಭಿಯಾನದ ಪ್ರಮುಖ ಗುರಿಯಾಗಿದೆ. ಅದಲ್ಲದೆ, ಈ ಪರಿಸರದ ಸಂರಕ್ಷಣೆಯ ಮಹತ್ಕಾರ್ಯವನ್ನು ರಾಷ್ಟ್ರಮಟ್ಟದ ಚಳವಳಿಯನ್ನಾಗಿ ಉತ್ತೇಜಿಸುತ್ತಾ, ಮುಂದಿನ ಪೀಳಿಗೆಯನ್ನು ‘ಸ್ವಚ್ಛ ಹಸಿರು ಭಾರತ’ದತ್ತ ಪ್ರೇರೇಪಿಸಲು ಹಾಗೂ ಕೇಂದ್ರ ಸರಕಾರದ ‘ಸ್ವಚ್ಛ ಭಾರತ್’, ‘ಮಿಷನ್ ಲೈಫ್’ ಮತ್ತು ‘ಜನ್ ಭಾಗಿದಾರಿ’ ಯೋಜನೆಗಳಿಗೆ ಬೆಂಬಲ ಸೂಚಿಸಲು ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿದೆ ಎಂದು ಅಭಿಯಾನದ ಬಗ್ಗೆ ಮಾಹಿತಿ ನೀಡಿದರು.

ಈ ಸ್ವಚ್ಛತಾ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮತ್ತಿತರ ಗಣ್ಯರು ಭಾಗವಹಿಸಲಿದ್ದು, ಸರಕಾರಿ ಹಾಗೂ ಖಾಸಗಿ ಇಲಾಖೆಗಳು, ವಿವಿಧ ಸಂಘ-ಸಂಸ್ಥೆಗಳು, ಎನ್‌ಜಿಒ ಸದಸ್ಯರು, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಕ ರಕ್ಷಕ ಸಂಘದ ಸದಸ್ಯರು, ಊರ ನಾಗರಿಕ ವೃಂದ, ವಿವಿಧ ಶಾಲಾ-ಕಾಲೇಜುಗಳ ಇಕೋ ಕ್ಲಬ್, ಎನ್‌ಸಿಸಿ, ಎನ್ನೆಸ್ಸೆಸ್, ಸ್ಕೌಟ್ ಗೈಡ್ಸ್, ರೇಂಜರ್ಸ್ ಮತ್ತು ರೋವರ್ಸ್ ಹಾಗೂ ವಿದ್ಯಾರ್ಥಿಗಳು, ಪೋಷಕರು ಹಾಗೂ ಪರಿಸರ ಪ್ರೇಮಿಗಳು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬ್ಯಾರಿಸ್ ಪದವಿ ಪೂರ್ವ ಕಾಲೇಜಿನ ಅಕಾಡಮಿಕ್ ಡೀನ್ ಡಾ.ಪೂರ್ಣಿಮಾ ಶೆಟ್ಟಿ ತಿಳಿಸಿದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕಿ ಅಶ್ವಿನಿ ಶೆಟ್ಟಿ ಮಾತನಾಡಿ, ಬೃಹತ್ ಜಾಗೃತಿ ಅಭಿಯಾನ ದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದು, ನಮ್ಮ ಶಿಕ್ಷಣ ಸಂಸ್ಥೆಯ 800ಕ್ಕೂ ಮಿಕ್ಕಿ ವಿದ್ಯಾರ್ಥಿಗಳೊಂದಿಗೆ ಅಂದಾಜು ಸಾವಿರಕ್ಕೂ ಹೆಚ್ಚು ಮಂದಿ ಈ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಹಳವಳ್ಳಿಯಿಂದ ಕೋಡಿಯ ಸೀವಾಕ್ ವರೆಗಿನ 4 ಕಿ.ಮೀ. ವ್ಯಾಪ್ತಿಯ ಬೀಚ್‌ನಲ್ಲಿ ಸ್ವಚ್ಛತೆ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬ್ಯಾರಿಸ್ ಬಿ.ಎಡ್ ಹಾಗೂ ಡಿ.ಎಡ್ ಪ್ರಾಂಶುಪಾಲೆ ಡಾ.ಫಿರ್ದೌಸ್ ಉಪಸ್ಥಿತರಿದ್ದರು.

Tags

CleanBeachCampaign
share
ವಾರ್ತಾಭಾರತಿ
ವಾರ್ತಾಭಾರತಿ
Next Story
X