Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪರಶುರಾಮ ಥೀಮ್‌ ಪಾರ್ಕ್ ಸ್ವಚ್ಛತೆ,...

ಪರಶುರಾಮ ಥೀಮ್‌ ಪಾರ್ಕ್ ಸ್ವಚ್ಛತೆ, ಸುರಕ್ಷತೆ ನಿರ್ಮಿತಿ ಕೇಂದ್ರದ ಜವಾಬ್ದಾರಿ: ತಕ್ಷಣ ಕಾರ್ಯಪ್ರವೃತ್ತವಾಗಲು ಉಡುಪಿ ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ9 Jan 2026 7:35 PM IST
share
ಪರಶುರಾಮ ಥೀಮ್‌ ಪಾರ್ಕ್ ಸ್ವಚ್ಛತೆ, ಸುರಕ್ಷತೆ ನಿರ್ಮಿತಿ ಕೇಂದ್ರದ ಜವಾಬ್ದಾರಿ: ತಕ್ಷಣ ಕಾರ್ಯಪ್ರವೃತ್ತವಾಗಲು ಉಡುಪಿ ಡಿಸಿ ಸೂಚನೆ

ಉಡುಪಿ, ಜ.9: ಕಾರ್ಕಳ ತಾಲೂಕು ಬೈಲೂರು ಗ್ರಾಮದ ಯರ್ಲಪಾಡಿ ಉಮಿಕಲ್‌ಬೆಟ್ಟದ ಮೇಲೆ ನಿರ್ಮಾಣ ಗೊಂಡು ಈಗ ವಿವಾದದ ಕೇಂದ್ರ ಬಿಂದುವಾಗಿರುವ ಪರಶುರಾಮ ಥೀಮ್‌ಪಾರ್ಕ್‌ನ ಕಾಮಗಾರಿ ಮುಕ್ತಾಯ ಗೊಳ್ಳುವವರೆಗೂ ಇದರ ನಿರ್ವಹಣೆ ಹಾಗೂ ಸುರಕ್ಷತೆ ಅನುಷ್ಠಾನ ಸಂಸ್ಥೆ ಯಾದ ನಿರ್ಮಿತಿ ಕೇಂದ್ರದ್ದಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸ್ಪಷ್ಟಪಡಿಸಿದ್ದಾರೆ.

ಥೀಮ್ ಪಾರ್ಕ್‌ನ ಸ್ವಚ್ಛತೆ ಹಾಗೂ ಸುರಕ್ಷತೆ ಉಡುಪಿಯ ನಿರ್ಮಿತಿ ಕೇಂದ್ರದ ಜವಾಬ್ದಾರಿಯಾಗಿದ್ದು, ಕಾಮಗಾರಿ ಪೂರ್ಣಗೊಂಡು ಹಸ್ತಾಂತರ ವಾಗುವವರೆಗೆ ಥೀಮ್ ಪಾರ್ಕ್‌ನಲ್ಲಿರುವ ಬೆಲೆಬಾಳುವ ಎಲೆಕ್ಟ್ರಾನಿಕ್ಸ್ ಉಪಕರಣ ಗಳು, ಸಾಮಗ್ರಿಗಳು ಹಾಗೂ ಇತರೆಲ್ಲಾ ವಸ್ತುಗಳ ಸುರಕ್ಷತೆ ಸೇರಿದಂತೆ ಪಾರ್ಕ್‌ನ ನಿರ್ವಹಣೆಯನ್ನು ಸಂಸ್ಥೆಯೇ ಅದನ್ನು ಸರಿಯಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಈ ವಿಷಯದಲ್ಲಿ ಯಾವುದೇ ಸಮಸ್ಯೆಗಳಿಗೆ ಆಸ್ಪದ ನೀಡದೇ ನಿರ್ವಹಣೆ ಮಾಡಬೇಕು. ಜೊತೆಗೆ ಈ ಕೆಳಕಂಡ ಅಂಶಗಳನ್ನು ಪಾಲಿಸುವಂತೆ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚಿಸಿದ್ದಾರೆ.

ಪ್ರಮುಖ ನಿರ್ದೇಶನ: ಪರಶುರಾಮ ಥೀಮ್ ಪಾರ್ಕ್‌ನ ಆವರಣದಲ್ಲಿ ಸ್ವಚ್ಛತಾ ಕಾರ್ಯ, ಗಿಡಗಂಟಿ ತೆರವು ಹಾಗೂ ಕಸ ವಿಲೇವಾರಿ ಕಾರ್ಯಗಳನ್ನು ಕೂಡಲೇ ಕೈಗೊಳ್ಳಬೇಕು. ಥೀಮ್ ಪಾರ್ಕ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಪಾರ್ಕ್ ಆವರಣದಲ್ಲಿ ಕೂಡಲೇ ಸಿಸಿ ಕ್ಯಾಮೆರಾ ಅಳವಡಿಸಬೇಕು. ಈ ಸ್ಥಳದಲ್ಲಿ ಭದ್ರತಾ ದೃಷ್ಟಿಯಿಂದ ದಿನದ 24 ಗಂಟೆಯೂ ಕಾವಲುಗಾರರನ್ನು ನಿಯೋಜಿಸಲು ಕ್ರಮಕೈಗೊಳ್ಳಬೇಕು.

ಸಾರ್ವಜನಿಕ ಪ್ರವೇಶ ನಿರ್ಬಂಧ: ಅಧಿಕೃತ ವ್ಯಕ್ತಿಗಳನ್ನು ಹೊರತುಪಡಿಸಿ, ಥೀಮ್‌ಪಾರ್ಕ್‌ಗೆ ಸಾರ್ವಜನಿಕರು ಸೇರಿದಂತೆ ಯಾರೊಬ್ಬರೂ ಪ್ರವೇಶಿಸ ದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ತನಿಖೆ ನಡೆಯುತ್ತಿರುವುದರಿಂದ ಇಲ್ಲಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಥೀಮ್ ಪಾರ್ಕ್ ಪ್ರದೇಶಕ್ಕೆ ಯಾರಾದರೂ ಅತಿಕ್ರಮಣ ಪ್ರವೇಶ ಮಾಡಿದರೆ ಅವರ ವಿರುದ್ಧ ಎಫ್‌ಐಆರ್ ಅಥವಾ ಬಿಎನ್‌ಎಸ್‌ಎಸ್ 2023ರ ಅಡಿಯಲ್ಲಿ ಮೊಕ್ಕದ್ದಮೆ ದಾಖಲಿಸಬೇಕು ಹಾಗೂ ಥೀಮ್ ಪಾರ್ಕ್‌ನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕ್ರಮವಹಿಸಬೇಕು.

ಥೀಮ್ ಪಾರ್ಕ್ ಸ್ಥಳದಲ್ಲಿರುವ ಅಮೂಲ್ಯ ವಸ್ತುಗಳು, ನಿರ್ಮಾಣ ಸಾಮಾಗ್ರಿಗಳು ಸುಸ್ಥಿತಿಯಲ್ಲಿರುವಂತೆ ನೋಡಿ ಕೊಳ್ಳಬೇಕು. ಥೀಮ್ ಪಾರ್ಕ್ ಕಾಮಗಾರಿ ಮುಕ್ತಾಯಗೊಳ್ಳುವವರೆಗೂ ಥೀಮ್ ಪಾರ್ಕ್‌ನ ಸಂಪೂರ್ಣ ಜವಾಬ್ದಾರಿ ಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಗಳು ನಿರ್ಮಿತಿ ಕೇಂದ್ರಕ್ಕೆ ಸೂಚನೆಗಳನ್ನು ನೀಡಿದ್ದಾರೆ.

ಮೇಲಿನ ಈ ಎಲ್ಲಾ ವಿಷಯಗಳ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ಅನುಪಾಲನ ವರದಿಯನ್ನು ಜನವರಿ 10ರೊಳಗೆ ಜಿಲ್ಲಾಧಿಕಾರಿಗಳ ಕಚೇರಿಗೆ ನೀಡಬೇಕು. ಅಲ್ಲದೇ ಪ್ರತಿ ವಾರ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಸ್ವಚ್ಛತೆಯ ಮೇಲುಸ್ತು ವಾರಿ ವಹಿಸಿಕೊಂಡು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಜಿ.ಪಿ.ಎಸ್ ಫೋಟೋದೊಂದಿಗೆ ವರದಿ ನೀಡುವಂತೆ ಸೂಚಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶದಲ್ಲಿ ತಿಳಿಸಿದ್ದಾರೆ.

ಸ್ವಚ್ಛತಾ ಕಾರ್ಯ ಆರಂಭ: ಜಿಲ್ಲಾಧಿಕಾರಿಗಳ ಸೂಚನೆಯಂತೆ ನಿರ್ಮಿತಿ ಕೇಂದ್ರ ಪರಶುರಾಮ ಥೀಮ್ ಪಾರ್ಕ್ ಪರಿಸರದ ಸ್ವಚ್ಛತಾ ಕಾರ್ಯವನ್ನು ಪ್ರಾರಂಭಿಸಿದೆ. ಸಾರ್ವಜನಿಕರಿಗೆ ಅವಕಾಶ ನೀಡದೇ ಇಲಾಖೆಯ ಮೂಲಕವೇ ಇದನ್ನು ನಡೆಸಲು ತೀರ್ಮಾನಿಸಲಾಗಿದೆ.

ಈಗಾಗಲೇ ಸ್ವಚ್ಛತಾ ಸಿಬ್ಬಂದಿಗಳು ಬೆಟ್ಟದ ಬುಡದಿಂದ ತುದಿಯಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ವರೆಗಿನ ಸಂಪರ್ಕ ರಸ್ತೆಯ ಆಸುಪಾಸಿನಲ್ಲಿ ಆಳೆತ್ತರಕ್ಕೆ ಬೆಳೆದು ನಿಂತಿರುವ ಹುಲ್ಲು, ಗಿಡಗಂಟಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡುತಿದ್ದಾರೆ.

ಪರಶುರಾಮ ಮೂರ್ತಿಯ ವಿವಾದದ ಕುರಿತು ಈಗಾಗಲೇ ಹೈಕೋರ್ಟ್ ನಲ್ಲಿ ಹಾಗೂ ಸಿಐಡಿಯಿಂದ ತನಿಖೆ ನಡೆಯುತ್ತಿರುವುದರಿಂದ ಇಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಜನಪ್ರತಿನಿಧಿಗಳ ಕೋರಿಕೆಗೆ ಹಸಿರು ನಿಶಾನೆ ದೊರೆಯುವ ಸಾದ್ಯತೆ ಇಲ್ಲ ಎನ್ನಲಾಗಿದೆ.

ಕಳೆದ ಜ.4ರಂದು ಥೀಮ್‌ಪಾರ್ಕ್‌ನ ತಾಮ್ರದ ಹೊದಿಕೆಯ ಕೆಲವು ಶೀಟುಗಳು ಕಳ್ಳತನವಾಗಿರುವ ವಿಷಯವನ್ನು ಕಾರ್ಕಳ ಶಾಸಕರಾದ ಸುನಿಲ್ ಕುಮಾರ್ ಅವರು ಬಹಿರಂಗಪಡಿಸಿದ ಬಳಿಕ ಬೂದಿಮುಚ್ಚಿದ ಕೆಂಡದಂತಿದ್ದ ಈ ವಿವಾದ ಮತ್ತೊಮ್ಮೆ ಸ್ಫೋಟಗೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಟಾಪಟಿಗೆ ಕಾರಣವಾಗಿತ್ತು.







Tags

ParashuramaTheme Park
share
ವಾರ್ತಾಭಾರತಿ
ವಾರ್ತಾಭಾರತಿ
Next Story
X