Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪರಶುರಾಮ ಪ್ರತಿಮೆ ಅಸಲಿತನ ತನಿಖೆಗೆ ಸಿಎಂ...

ಪರಶುರಾಮ ಪ್ರತಿಮೆ ಅಸಲಿತನ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ: ಮಂಜುನಾಥ ಭಂಡಾರಿ

ವಾರ್ತಾಭಾರತಿವಾರ್ತಾಭಾರತಿ20 Nov 2023 9:27 PM IST
share
ಪರಶುರಾಮ ಪ್ರತಿಮೆ ಅಸಲಿತನ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ: ಮಂಜುನಾಥ ಭಂಡಾರಿ

ಉಡುಪಿ: ಕರಾವಳಿಯಲ್ಲಿ ಭಾರೀ ವಾದ-ವಿವಾದಕ್ಕೆ ಕಾರಣವಾದ, ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನಿರ್ಮಾಣ ಗೊಂಡು ಅಂದಿನ ಮುಖ್ಯಮಂತ್ರಿಗಳಿಂದ ಉದ್ಘಾಟನೆಗೊಂಡ ಕಾರ್ಕಳ ತಾಲೂಕಿನ ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಪತ್ರಿಮೆಯ ಅಸಲಿತನ ಹಾಗೂ ಪರಶುರಾಮ ಪಾರ್ಕ್‌ನ ಅಕ್ರಮ-ಅವ್ಯವಹಾರದ ಕುರಿತು ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಂದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಆದೇಶಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ದೇವಾಡಿಗರು, ಪರಶುರಾಮ ಥೀಮ್ ಪಾರ್ಕ್ ಅಕ್ರಮದ ಕುರಿತು ಗಮನ ಸೆಳೆದು, ಈ ಬಗ್ಗೆ ತನಿಖೆ ನಡೆಸುವಂತೆ ಪಕ್ಷದ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳು ಹಾಗೂ ವಿಧಾನಪರಿಷತ್ ಸದಸ್ಯನಾದ ತನಗೆ ಪತ್ರ ಬರೆದಿದ್ದರು ಎಂದು ಅವರು ತಿಳಿಸಿದರು.

ಈ ಪರಶುರಾಮ ಥೀಮ್ ಪಾರ್ಕ್‌ಗೆ ಸಂಬಂಧಪಟ್ಟಂತೆ ಸರ್ವಜನಿಕರಲ್ಲಿ ಹಲವು ಊಹಾಪೋಹಗಳು ಕೇಳಿಬಂದಿದ್ದು, ಪತ್ರಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪರಶುರಾಮ ಪ್ರತಿಮೆಯ ಸಾಚಾತನದ ಬಗ್ಗೆ ಅನುಮಾನಗಳು ವ್ಯಕ್ತವಾಗಿ ದ್ದವು ಎಂದರು. ಈ ಬಗ್ಗೆ ತನಿಖೆ ನಡೆಸುವಂತೆ ಪ್ರವಾಸೋದ್ಯಮ ಇಲಾಖೆ ಹಾಗೂ ಸರಕಾರದ ಮೇಲೆ ಕಾರ್ಕಳದ ಕಾಂಗ್ರೆಸ್ ಪಕ್ಷ ಸೇರಿದಂತೆ ಸ್ಥಳೀಯ ವಿವಿಧ ಸಂಘಟನೆಗಳು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದವು ಎಂದರು.

ಇದನ್ನೆಲ್ಲಾ ಗಂಭೀರವಾಗಿ ಪರಿಗಣಿಸಿದ ಸರಕಾರ ಮತ್ತು ಪಕ್ಷ ಇದರ ಬಗ್ಗೆ ವಿವರವಾದ ವರದಿಯೊಂದನ್ನು ಸಲ್ಲಿಸುವಂತೆ ತನಗೆ ಸೂಚಿಸಿತ್ತು ಎಂದು ಮಂಜುನಾಥ ಭಂಡಾರಿ ತಿಳಿಸಿದರು. ಇದರಂತೆ ತಾನು ಅ.19ರಂದು ಸ್ಥಳೀಯ ನಾಯಕ ರೊಂದಿಗೆ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷರಿಗೆ ವಿವರವಾದ ವರದಿ ಸಲ್ಲಿಸಿದ್ದಾಗಿ ಭಂಡಾರಿ ತಿಳಿಸಿದರು.

ಇದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಮನವಿಯನ್ನು ಆಧರಿಸಿ ನ.15ರಂದು, ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲದ ನಿವಾರಣೆಗಾಗಿ ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳಿಗೆ ಪರಶುರಾಮ ಥೀಮ್ ಪಾರ್ಕ್ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶಿಸಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜಿಲ್ಲಾದ್ಯಕ್ಷ ಅಶೋಕಕುಮಾರ್ ಕೊಡವೂರು, ಕಾಂಗ್ರೆಸ್ ನಾಯಕರಾದ ಉದಯಕುಮಾರ್ ಶಟ್ಟಿ ಮುನಿಯಾಲು, ಪ್ರಸಾದ್‌ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಹರೀಶ್ ಕಿಣಿ, ಭಾಸ್ಕರ ರಾವ್ ಕಿದಿಯೂರು, ಅಣ್ಣಯ್ಯ ಶೇರಿಗಾರ್ ಉಪಸ್ಥಿತರಿದ್ದರು.

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಗೋಲ್‌ಮಾಲ್: ರಾಜ್ಯ ಸಕ್ಕರೆ ಕಾರ್ಯದರ್ಶಿಗಳಿಂದ ತನಿಖೆ

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ನಡೆದಿರುವ ಕೋಟ್ಯಾಂತರ ರೂ. ಅವ್ಯವಹಾರದ ಕುರಿತಂತೆ ಮುಖ್ಯಮಂತ್ರಿಗಳ ಆದೇಶದಂತೆ ರಾಜ್ಯ ಸಕ್ಕರೆ ಕಾರ್ಯದರ್ಶಿಗಳಿಂದ ತನಿಖೆ ನಡೆಯುತ್ತಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ತಿಳಿಸಿದ್ದಾರೆ.

ಸಕ್ಕರೆ ಕಾರ್ಖಾನೆಯ ಭಾರೀ ಭ್ರಷ್ಟಾಚಾರದ ಕುರಿತು ಜನರ ಗಮನ ಸೆಳೆಯಲು ಕಾಂಗ್ರೆಸ್ ಬ್ರಹ್ಮಾವರದಲ್ಲಿ ಹಮ್ಮಿಕೊಂಡ ಬೃಹತ್ ಪ್ರತಿಭಟನೆಯ ಬಳಿಕ ಕಳೆದ ತಿಂಗಳೇ ಮುಖ್ಯಮಂತ್ರಿಗಳು ಈ ಆದೇಶ ಮಾಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಸೊರಕೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X