Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದೇಶದ ಆರ್ಥಿಕ ಅಭಿವೃದ್ಧಿಗೆ ಕರಾವಳಿ...

ದೇಶದ ಆರ್ಥಿಕ ಅಭಿವೃದ್ಧಿಗೆ ಕರಾವಳಿ ಪ್ರದೇಶ ಎಂಜಿನ್: ರೋಹಿತ್ ಭಟ್

ನಝೀರ್ ಪೊಲ್ಯ/ವಾರ್ತಾಭಾರತಿನಝೀರ್ ಪೊಲ್ಯ/ವಾರ್ತಾಭಾರತಿ16 Nov 2026 6:59 PM IST
share
ದೇಶದ ಆರ್ಥಿಕ ಅಭಿವೃದ್ಧಿಗೆ ಕರಾವಳಿ ಪ್ರದೇಶ ಎಂಜಿನ್: ರೋಹಿತ್ ಭಟ್

ಉಡುಪಿ, ನ.16: ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಇಡೀ ಕರಾವಳಿ ಪ್ರದೇಶವು ಮುಂದಿನ ದಿನಗಳಲ್ಲಿ ದೇಶದ ಆರ್ಥಿಕ ಅಭಿವೃದ್ಧಿಗೆ ಎಂಜಿನ್ ಆಗಬಲ್ಲದು ಎಂದು ರೋಬೋಸಾಫ್ಟ್ ಸ್ಥಾಪಕ ರೋಹಿತ್ ಭಟ್ ಅಬಿಪ್ರಾಯ ಪಟ್ಟಿದ್ದಾರೆ.

ಉಡುಪಿ ಛೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ವತಿಯಿಂದ ಕಿದಿಯೂರು ಹೋಟೆಲಿನ ಮಾಧವ ಸಭಾಂಗಣದಲ್ಲಿ ರವಿವಾರ ಆಯೋಜಿಸಲಾದ ಯುಸಿಸಿಐ ಸ್ಟಾರ್ಟ್‌ಅಫ್ ಆ್ಯಂಡ್ ಇಂಟರ್ ಪ್ರೆನರ್‌ಶಿಫ್-2026 ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕರಾವಳಿಯಲ್ಲಿ ಅತ್ಯುತ್ತಮ ಶೈಕ್ಷಣಿಕ ಮೂಲ ಸೌಕರ್ಯ ಇದೆ. ಉತ್ತಮ ಶಿಕ್ಷಣ ವ್ಯವಸ್ಥೆಯ ಜತೆಗೆ ಸಾಕ್ಷರತೆಯ ಪ್ರಮಾಣವೂ ಉನ್ನತ ಮಟ್ಟದಲ್ಲಿದೆ. ಇಲ್ಲಿ 25ಕ್ಕೂ ಅಧಿಕ ಎಂಜಿನಿಯರಿಂಗ್, 10ಕ್ಕೂ ಅಧಿಕ ವೈದ್ಯಕೀಯ ಕಾಲೇಜು ಹಾಗೂ 150ಕ್ಕೂ ಅಧಿಕ ಪದವಿ ಕಾಲೇಜುಗಳಿವೆ. ಪ್ರತಿಭಾವಂತ ಯುವಜನರ ದೊಡ್ಡ ಸಮೂಹವೇ ನಮ್ಮಲ್ಲಿದೆ. ಈ ಎಲ್ಲಾ ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಉತ್ತಮ ವೇದಿಕೆಯನ್ನು ಕಲ್ಪಿಸಬೇಕಾಗಿದೆ ಎಂದರು.

ಡಾ.ಎ.ಪಿ.ಆಚಾರ್ಯ ಮಾತನಾಡಿ, ಪ್ರಸ್ತುತ ಕಂಪನಿಗಳು ಕೇವಲ ಪದವೀಧರರನ್ನು ನೇಮಿಸಿಕೊಳ್ಳುವುದಕ್ಕಿಂತ ಹೊಸಜ್ಞಾನ ಮತ್ತು ತಂತ್ರಜ್ಞಾನ ವನ್ನು ಸೃಷ್ಟಿಸಬಲ್ಲ ಪ್ರತಿಭಾವಂತರನ್ನು ಹುಡುಕುತ್ತಿವೆ. ಅಂತಹ ಪರಿಶ್ರಮ, ಬದ್ಧತೆ ಮತ್ತು ಸಾಧಿಸುವ ಹಂಬಲ ನಿಮ್ಮಲ್ಲಿದ್ದರೆ ಮಾತ್ರ ಉದ್ಯಮದಲ್ಲಿ ಯಶಸ್ಸು ಗಳಿಸಲು ಸಾಧ್ಯ. ಉದ್ಯಮ ಆರಂಭಿಸುವ ಆಸಕ್ತಿ, ಹೊಸತನ್ನು ಪ್ರಯತ್ನಿಸುವ ಧೈರ್ಯ ಮತ್ತು ನಿರಂತರ ಪರಿಶ್ರಮ ಇದ್ದರೆ ಉತ್ತಮ ಉದ್ಯೋಗಾವಕಾಶಗಳು ಪಡೆಯಬಹುದು ಎಂದು ತಿಳಿಸಿದರು.

ಸರಕಾರದ ಅನುದಾನ ಮತ್ತು ಇತರ ಸೌಲಭ್ಯಗಳನ್ನು ಪಡೆಯಲು ಅರ್ಹ ಉದ್ಯಮಿಗಳು ಮುಂದೆ ಬರಬೇಕು. ಉದ್ಯಮಶೀಲತೆಯ ಸಾಮರ್ಥ್ಯವನ್ನು ಗುರುತಿಸಿ, ಈ ಪ್ರದೇಶವನ್ನು ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಆಧಾರಿತ ಸ್ಟಾರ್ಟ್‌ಅಪ್‌ಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುವ ದೃಷ್ಟಿಕೋನದೊಂದಿಗೆ ಕೆಲಸ ಮಾಡಬೇಕು ಎಂದರು.

ಯುಸಿಸಿಐ ಉಪಾಧ್ಯಕ್ಷ ಡಾ.ವಿಜಯೇಂದ್ರ ವಸಂತ್ ರಾವ್, ಜತೆ ಕಾರ್ಯದರ್ಶಿ ಅನೀಶ್ ಪೈ, ಕೋಶಾಧಿಕಾರಿ ಕೆ.ವಿನೋದ್ ಪೈ ಉಪಸ್ಥಿತರಿದ್ದರು.

ಯುಸಿಸಿಐ ಅಧ್ಯಕ್ಷ ನಟರಾಜ್ ಪ್ರಭು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ಸಂಯೋಜಕರಾದ ಅತುಲ್ ಭಕ್ತ, ಶ್ರುತಿ ಜಿ.ಶೆಣೈ ಅತಿಥಿಗಳನ್ನು ಪರಿಚಯಿಸಿದರು. ಗೌರವ ಕಾರ್ಯದರ್ಶಿ ಸಮೀರ್ ಮೊಹಮ್ಮದ್ ವಂದಿಸಿದರು. ಜತೆ ಕಾರ್ಯದರ್ಶಿ ಅವಿನಾಶ್ ಪೂಜಾರಿ ನಿರೂಪಿಸಿದರು.

Tags

Coastalregionengineeconomicdevelopment
share
ನಝೀರ್ ಪೊಲ್ಯ/ವಾರ್ತಾಭಾರತಿ
ನಝೀರ್ ಪೊಲ್ಯ/ವಾರ್ತಾಭಾರತಿ
Next Story
X