ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯಸ್ಮರಣೆ

ಉಡುಪಿ, ಜ.27: ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ- ಉಡುಪಿ ಜಿಲ್ಲಾ ನೇತೃತ್ವದಲ್ಲಿ ಆಂಗ್ಲರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಕ್ರಾಂತಿಕಾರಿ, ನಾಡಿನ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗೈದ ಕಿತ್ತೂರಿನ ವೀರ ಸೇನಾನಿ, ಕನ್ನಡಾಂಬೆಯ ಹೆಮ್ಮೆಯ ಪುತ್ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯಸ್ಮರಣೆಯಂದು ಗೌರವ ನುಡಿ ನಮನವನ್ನು ಸೋಮವಾರ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಸಲ್ಲಿಸಲಾಯಿತು.
ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ರಾಯಣ್ಣರ ಯಶೋಗಾಥೆ ಮತ್ತು ಅಭಿಮಾನಿ ಬಳಗದಿಂದ ನಡೆಯುವ ಹುತಾತ್ಮ ಮಾಲಾ ಅಭಿಯಾನದ ಕುರಿತು ಮಾತನಾಡಿದರು.
ಡಾ.ಶಿವರಾಮ ಕಾರಂತ ಟ್ರಸ್ಟ್‌ನ ಅಧ್ಯಕ್ಷ ಗಣನಾಥ ಎಕ್ಕಾರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಭಿಮಾನಿ ಬಳಗದ ಗೌರವಾಧ್ಯಕ್ಷ ಜನಾರ್ದನ ಕೊಡವೂರು, ಡಯಟ್‌ನ ಜಿಲ್ಲಾ ಪ್ರಾಂಶುಪಾಲ ಅಶೋಕ್ ಕಾಮತ್, ಜೇಸಿಐ ರಾಷ್ಟ್ರೀಯ ತರಬೇತಿದಾರ, ಸಂಪನ್ಮೂಲ ವ್ಯಕ್ತಿ ರಾಜೇಂದ್ರ ಭಟ್ ಕೆ., ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷ ಉಡುಪಿ ವಿಶ್ವನಾಥ್ ಶೆಣೈ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ., ಪೂರ್ಣಿಮಾ ಜನಾರ್ದನ, ವಸಂತ್ ಆರ್., ರಾಜೇಶ್ ಭಟ್ ಪಣಿಯಾಡಿ, ರಾಘವೇಂದ್ರ ಪ್ರಭು ಕರ್ವಾಲು, ಶಿಲ್ಪಾ ಜೋಶಿ, ರಂಜನಿ ವಸಂತ್, ದೀಪಾ ಕರ್ಕಿ, ಪ್ರಶಾಂತ್ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.







