Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮನರೇಗಾ ವಾಪಸತ್ತಿಗೆ ಆಗ್ರಹಿಸಿ...

ಮನರೇಗಾ ವಾಪಸತ್ತಿಗೆ ಆಗ್ರಹಿಸಿ ಪೆರ್ಡೂರಿನಲ್ಲಿ ಕಾಂಗ್ರೆಸ್ ಧರಣಿ

ವಾರ್ತಾಭಾರತಿವಾರ್ತಾಭಾರತಿ28 Jan 2026 8:25 PM IST
share
ಮನರೇಗಾ ವಾಪಸತ್ತಿಗೆ ಆಗ್ರಹಿಸಿ ಪೆರ್ಡೂರಿನಲ್ಲಿ ಕಾಂಗ್ರೆಸ್ ಧರಣಿ

ಪೆರ್ಡೂರು, ಜ.28: ಯು.ಪಿ.ಎ ಸರಕಾರದ ಮಹತ್ವಾಕಾಂಕ್ಷೆಯ ಉದ್ಯೋಗ ಖಾತ್ರಿ ಯೋಜನೆಯಾದ ಮನರೇಗಾ ಯೋಜನೆಯ ಹೆಸರು ಹಾಗೂ ಮೂಲ ಸ್ವರೂಪವನ್ನು ಬದಲಾಯಿಸಿ, ಯೋಜನೆಯನ್ನು ದುರ್ಬಲಗೊಳಿಸುವ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ವತಿ ಯಿಂದ ಪೆರ್ಡೂರು ಪಂಚಾಯತ್ ಮುಂಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕೃಷಿಕರು ತಮ್ಮ ಸ್ವಂತ ಜಮೀನಿನಲ್ಲಿ ಬಾವಿ, ಹೈನುಗಾರಿಕೆ, ತೋಟ ನಿರ್ಮಾಣ, ಎಡೆಸಸಿ ಮುಂತಾದ ಕೆಲಸಗಳ ಮೂಲಕ ಸ್ವತಃ ಉದ್ಯೋಗ ನಿರ್ಮಿಸಿಕೊಂಡು ಆದಾಯ ಗಳಿಸುವ ಅವಕಾಶ ನೀಡಿದ ಏಕೈಕ ಯೋಜನೆ ಉದ್ಯೋಗ ಖಾತ್ರಿ ಯೋಜನೆ ಎಂದು ಹೇಳಿದರು.

ಇಂತಹ ಜನಪರ ಹಾಗೂ ಬಡವರ ಬದುಕಿಗೆ ಆಸರೆಯಾದ ಯೋಜನೆಯನ್ನು ರದ್ದುಪಡಿಸುವ ಉದ್ದೇಶ ಕೇಂದ್ರ ಸರಕಾರಕ್ಕೆ ನಾಚಿಕೆಯಾಗಬೇಕು. ಯು.ಪಿ.ಎ ಸರಕಾರ ಬಡವರಿಗೆ 100 ದಿನಗಳ ಕೆಲಸ ನೀಡಿ ಜನಸ್ನೇಹಿ ಸರಕಾರವಾಗಿತ್ತು ಎಂದು ಅವರು ತಿಳಿಸಿದರು.

ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ನೀರೆ ಕೃಷ್ಣ ಶೆಟ್ಟಿ ಮಾತನಾಡಿ, ದೇಶದ ಹಳ್ಳಿಗಳ ಸಮಗ್ರ ಅಭಿವೃದ್ಧಿಗೆ, ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ಹಾಗೂ ಕೃಷಿಕರಿಗೆ ನೇರವಾಗಿ ಲಕ್ಷಾಂತರ ರೂಪಾಯಿ ಆದಾಯ ತರುವ ಶಕ್ತಿ ಹೊಂದಿರುವ ಯೋಜನೆ ಎಂದರೆ ಅದು ಉದ್ಯೋಗ ಖಾತ್ರಿ ಯೋಜನೆ ಮಾತ್ರ. ಹಳ್ಳಿಗಳ ರಸ್ತೆ, ನೀರು ಸಂರಕ್ಷಣೆ, ಕೃಷಿ ಆಧಾರಿತ ಉದ್ಯೋಗ, ಸ್ವಂತ ಜಮೀನಿನಲ್ಲಿ ಅಭಿವೃದ್ಧಿ ಕಾರ್ಯಗಳು-ಎಲ್ಲವೂ ಈ ಯೋಜನೆಯ ಫಲವಾಗಿ ಸಾಧ್ಯವಾಗಿದೆ ಎಂದು ಹೇಳಿದರು.

ಬಡವರ ಬದುಕಿಗೆ ಆಸರೆಯಾದ ಉದ್ಯೋಗ ಖಾತ್ರಿ ಯೋಜನೆಯನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನ ಗಳನ್ನು ದೇಶದ ಜನತೆ ಒಪ್ಪುವುದಿಲ್ಲ ಎಂದು ಅವರು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಮಾಜಿ ಮಂಡಲ ಪ್ರಧಾನ ಶಾಂತಾರಾಮ ಸೂಡರು, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತ ರೈ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಪೂಜಾರಿ, ಪೆರ್ಡೂರು ಗ್ರಾಪಂ ಸದಸ್ಯರಾದ ನವೀನ್ ಸಾಲಿಯಾನ್, ದಯಾನಂದ್ ಶೆಟ್ಟಿ, ಶೋಭಾ ಗಾಮ್ಸ್, ಲಕ್ಷ್ಮಿ, ಉದಯ್ ಕುಲಾಲ, ರಾಘವೇಂದ್ರ, ಗಾಯತ್ರಿ, ಜಯಶ್ರೀ ಕುಲಾಲ್, ಎಸ್ಟಿ ಘಟಕದ ಬ್ಲಾಕ್ ಅಧ್ಯಕ್ಷ ರಾಮದಾಸ್ ನಾಯ್ಕ್, ರಾಜು ಸುವರ್ಣ, ಕಾರ್ತಿಕ್ ಆಚಾರ್ಯ, ಶಿವು ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Tags

CongressprotestPerdoordemandingreturn
share
ವಾರ್ತಾಭಾರತಿ
ವಾರ್ತಾಭಾರತಿ
Next Story
X