ಕಂಟೈನರ್ ಢಿಕ್ಕಿ: ವಾಕಿಂಗ್ ಮಾಡುತ್ತಿದ್ದ ವ್ಯಕ್ತಿ ಮೃತ್ಯು

ಉಡುಪಿ : ಕಂಟೈನರ್ ಢಿಕ್ಕಿ ಹೊಡೆದ ಪರಿಣಾಮ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಂತೆಕಟ್ಟೆ ಕ್ಲಾಸಿಕ್ ಸರ್ವಿಸ್ ಸೆಂಟರ್ ಬಳಿ ನ.1ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಸಂಜೀವ (61) ಎಂದು ಗುರುತಿಸಲಾಗಿದೆ. ಹೆದ್ದಾರಿ ಸಮೀಪದ ರಸ್ತೆಯ ಬದಿಯಲ್ಲಿರುವ ಮಣ್ಣು ರಸ್ತೆಯಲ್ಲಿ ವಾಕಿಂಕ್ ಮಾಡುತ್ತಿದ್ದ ಸಂಜೀವ ಅವರಿಗೆ ಉಡುಪಿ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದ ಕಂಟೈನರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





