Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬನ್ನಂಜೆ ಯೂಟರ್ನ್ ವಿಸ್ತರಿಸಲು ಡಿವೈಡರ್...

ಬನ್ನಂಜೆ ಯೂಟರ್ನ್ ವಿಸ್ತರಿಸಲು ಡಿವೈಡರ್ ಅಗೆದ ವಿವಾದ: ಉಡುಪಿ ನಗರಸಭೆಯಲ್ಲಿ ಗದ್ದಲ

ಕ್ಷಮೆಯಾಚನೆಗೆ ಪಟ್ಟು, ಸಭಾತ್ಯಾಗ

ವಾರ್ತಾಭಾರತಿವಾರ್ತಾಭಾರತಿ30 July 2025 6:09 PM IST
share
ಬನ್ನಂಜೆ ಯೂಟರ್ನ್ ವಿಸ್ತರಿಸಲು ಡಿವೈಡರ್ ಅಗೆದ ವಿವಾದ: ಉಡುಪಿ ನಗರಸಭೆಯಲ್ಲಿ ಗದ್ದಲ

ಉಡುಪಿ, ಜು.31: ನಗರದ ಬನ್ನಂಜೆ ರಾಷ್ಟ್ರೀಯ ಹೆದ್ದಾರಿ 169 ಎ ಯಲ್ಲಿನ ಯೂಟರ್ನ್ ವಿಸ್ತರಿಸಲು ಡಿವೈಡರ್ ಅಗೆದಿರುವ ವಿಚಾರವಾಗಿ ಬುಧವಾರ ನಡೆದ ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಗದ್ದಲ ಉಂಟಾಯಿತು. ನಗರಸಭೆ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವ ವಿರೋಧ ಪಕ್ಷದ ಸದಸ್ಯ ಕ್ಷಮೆ ಯಾಚಿಸುವಂತೆ ಆಡಳಿತ ಪಕ್ಷದ ಸದಸ್ಯರು ಪಟ್ಟು ಹಿಡಿದರು. ಇದಕ್ಕೆ ಒಪ್ಪದ ವಿರೋಧ ಪಕ್ಷದ ಸದಸ್ಯರು ಸಭೆಯಿಂದ ಹೊರನಡೆದರು.

ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯ ಟಿ.ಜಿ.ಹೆಗ್ಡೆ, ಬನ್ನಂಜೆ ಜಯಲಕ್ಷ್ಮೀ ಸಿಲ್ಕ್ಸ್ ಬಟ್ಟೆ ಅಂಗಡಿ ಎದುರಿನ ಡಿವೈಡರ್‌ನ್ನು ಅಗಲ ಮಾಡಿ, ಬಟ್ಟೆ ಯಂಗಡಿಯವರಿಗೆ ಅನುಕೂಲ ಮಾಡಿಕೊಡಲಾಗಿದೆ. ಇದರಲ್ಲಿ ನಗರಸಭೆ ಭ್ರಷ್ಟಾಚಾರ ಎಸಗಿದೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿನ ಹಾಗೂ ನಗರಸಭೆ ನಾಮನಿರ್ದೇಶಿತ ಸದಸ್ಯ ಸುರೇಶ್ ಶೆಟ್ಟಿ ಬನ್ನಂಜೆ ಹೇಳಿಕೆಯನ್ನು ಓದಿದರು.

ಇದಕ್ಕೆ ಧ್ವನಿಗೂಡಿಸಿದ ಬನ್ನಂಜೆ ವಾರ್ಡಿನ ಸದಸ್ಯ ಸವಿತಾ ಹರೀಶ್‌ರಾಂ, ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಕಾಮಗಾರಿಯನ್ನು ನಗರಸಭೆ ಮೇಲೆ ಹೊರಿಸಿ ಸದಸ್ಯರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ. ಈ ಬಗ್ಗೆ ಸುರೇಶ್ ಶೆಟ್ಟಿ ಬನ್ನಂಜೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಕೂಡಲೇ ಎದ್ದು ನಿಂತ ಸುರೇಶ್ ಶೆಟ್ಟಿ, ನಾನು ಯಾಕೆ ಕ್ಷಮೆಯಾಚಿಸಬೇಕೆಂದು ಸದಸ್ಯೆಯನ್ನು ದ್ದೇಶಿಸಿ ಮಾತನಾಡಿದರು.

ಪೌರಾಯುಕ್ತರಿಂದ ಸ್ಪಷ್ಟನೆ

ಸುರೇಶ್ ಶೆಟ್ಟಿ ಬನ್ನಂಜೆ ಕ್ಷಮೆಯಾಚಿಸುವಂತೆ ಆಡಳಿತ ಪಕ್ಷದ ಸದಸ್ಯರು ಆಗ್ರಹಿಸಿದರು. ಇದರಿಂದ ಸಭೆಯಲ್ಲಿ ಗದ್ದಲ ಉಂಟಾಗಿ ಕೋಲಾಹಲ ಸೃಷ್ಠಿ ಯಾಯಿತು. ಇದರಲ್ಲಿ ನಗರಸಭೆ ಪ್ರಾತ ಇದೆಯೇ ಎಂಬುದರ ಬಗ್ಗೆ ಪೌರಾಯುಕ್ತರು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ಪೌರಾಯುಕ್ತ ಮಹಾಂತೇಶ್ ಹಂಗರಗಿ ಮಾತನಾಡಿ, ಬನ್ನಂಜೆಯಲ್ಲಿ ಸಂಚಾರ ಸಮಸ್ಯೆ ಹಿನ್ನೆಲೆಯಲ್ಲಿ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕರ ಶಿಫಾರಸ್ಸಿನಂತೆ ಎಸ್ಪಿಯವರ ನಿರ್ದೇಶನದಲ್ಲಿ ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಇಂಜಿನಿಯರ್ ಡಿವೈಡರ್ ತೆರವು ಮಾಡಿದ್ದು, ಇದಕ್ಕೆ ನಗರಸಭೆ ಯಿಂದ ಯಾವುದೇ ಅನುಮತಿ ನೀಡಿಲ್ಲ. ಇದು ನಗರಸಭೆ ರಸ್ತೆ ಅಲ್ಲದೆ ಇರುವುದರಿಂದ ಇದರಲ್ಲಿ ನಗರಸಭೆಯ ಕಿಂಚಿತ್ತೂ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸದಸ್ಯರಾದ ಗಿರೀಶ್ ಅಂಚನ್ ಹಾಗೂ ಸುಮಿತ್ರಾ ಆರ್.ನಾಯಕ್ ಎಸ್ಪಿಯ ಈ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ಆರೋಪ, ಟೀಕೆ ಮಾಡುವುದು ಸಹಜ. ಅದಕ್ಕಾಗಿ ಕ್ಷಮೆಯಾಚನೆಗೆ ಪಟ್ಟು ಹಿಡಿಯುವುದು ಸರಿಯಲ್ಲ ಎಂದರು. ಆದರೆ ಪಟ್ಟು ಬಿಡದ ಆಡಳಿತ ಪಕ್ಷದ ಸದಸ್ಯರು ಸದನದ ಬಾವಿಗೆ ಇಳಿದು ಆಕ್ರೋಶ ವ್ಯಕ್ತಪಡಿಸಿ, ಸುರೇಶ್ ಕೂಡಲೇ ಕ್ಷಮೆಯಾಚಿಸುವಂತೆ ಆಗ್ರಹಿಸಿದರು.

ವಿಪಕ್ಷ ಸದಸ್ಯರಿಂದ ಸಭಾತ್ಯಾಗ

ಸದಸ್ಯೆ ಸವಿತಾ ಹರೀಶ್‌ರಾಂ ಮಾತನಾಡುವಾಗ ಸುರೇಶ್ ಶೆಟ್ಟಿ ಬನ್ನಂಜೆ ಸದನದ ನಿಯಮ ಉಲ್ಲಂಘಿಸಿ ವರ್ತಿಸಿದ್ದರು ಎಂದು ಆರೋಪಿಸಿ ಆಡಳಿತ ಪಕ್ಷದ ಮಹಿಳಾ ಸದಸ್ಯರು ಸದನದ ಬಾವಿಗೆ ಇಳಿದು ಕ್ಷಮೆಯಾಚಿಸುವಂತೆ ಒತ್ತಾಯಿಸಿದರು.

ಬಳಿಕ ಮಾತನಾಡಿದ ರಮೇಶ್ ಕಾಂಚನ್, ನಗರಸಭೆ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವ ಸುರೇಶ್ ಶೆಟ್ಟಿ ಹೇಳಿಕೆಗೆ ನಾನು ಕ್ಷಮೆಯಾಚಿಸುತ್ತೇನೆ ಎಂದರು. ಇದಕ್ಕೆ ಒಪ್ಪದ ಆಡಳಿತ ಪಕ್ಷ ಸದಸ್ಯರು ಮತ್ತೆ ಗದ್ದಲ ಮುಂದುವ ರೆಸಿದರು. ಸುರೇಶ್ ಶೆಟ್ಟಿಯೇ ಸ್ವತಃ ಕ್ಷಮೆಯಾಚಿಸಬೇಕು ಎಂದು ತಿಳಿಸಿದರು. ಇದಕ್ಕೆ ಸ್ಪಷ್ಟನೆ ನೀಡಿದ ಸುರೇಶ್ ಶೆಟ್ಟಿ, ಸದಸ್ಯ ಟಿ.ಜಿ.ಹೆಗ್ಡೆ ಓದಿರುವ ಹೇಳಿಕೆ ಯನ್ನು ನಾನು ನೀಡಿಲ್ಲ. ನಾನು ನೀಡಿರುವ ಹೇಳಿಕೆಯೇ ಬೇರೆ. ನನಗೆ ಈ ರಸ್ತೆ ನಗರಸಭೆಗೆ ಸಂಬಂಧಿಸಿದಲ್ಲ ಎಂಬುದು ಈಗಷ್ಠೆ ತಿಳಿಯಿತು ಎಂದರು.

ಸುರೇಶ್ ಶೆಟ್ಟಿ ಹೇಳಿಕೆಯಿಂದ ನಮಗೆಲ್ಲರಿಗೂ ನೋವು ಆಗಿದೆ ಎಂದು ಅಧ್ಯಕ್ಷ ಪ್ರಭಾಕರ ಪೂಜಾಪಿ ತಿಳಿಸಿದರು. ಈ ಮಧ್ಯೆ ಆಡಳಿತ ಪಕ್ಷದ ಸದಸ್ಯರು ತಮ್ಮ ಪಟ್ಟು ಮುಂದುವರೆಸಿದರು. ಕೊನೆಗೆ ವಿರೋಧ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು. ಬಳಿಕ ಹಿರಿಯ ಸದಸ್ಯೆ ಸುಮಿತ್ರಾ ನಾಯಕ್ ಹೊರಗಡೆ ವಿರೋಧ ಪಕ್ಷದ ಸದಸ್ಯರನ್ನು ಮನವೊಲಿಸಿ ಸಭೆಗೆ ಕರೆತಂದರು. ಈ ಮೂಲಕ ಸುಮಾರು ಒಂದೂವರೆ ತಾಸು ನಡೆದ ಚರ್ಚೆ ಕೊನೆಗೊಂಡಿತು.

ಸಭೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ, ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಕಲ್ಮಾಡಿ ಉಪಸ್ಥಿತರಿದ್ದರು.

ಮಳೆ ಬಿಟ್ಟ ಕೂಡಲೇ ರಸ್ತೆ ದುರಸ್ತಿ

ಸಭೆಯಲ್ಲಿ ಮೆಸ್ಕಾಂಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸದಸ್ಯರು ಮೆಸ್ಕಾಂ ಅಧಿಕಾರಿ ಗಣರಾಜ ಭಟ್ ಅವರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸದ್ಯ ಕೆಲವು ಕಡೆಗಳಲ್ಲಿ ಸೆಕ್ಷನ್ ಆಫೀಸರ್‌ಗಳ ಕೊರತೆ ಇದ್ದು, ಕೆಲವರು ಎರಡೆರಡು ಕಡೆಗಳ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಹಾಗಾಗಿ ಎಲ್ಲ ಕಡೆಯ ದೂರು ಸ್ವೀಕರಿಸಿ ಕೂಡಲೇ ವಿಲೇವಾರಿ ಮಾಡಲು ಆಗುತ್ತಿಲ್ಲ ಎಂದರು.

ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ನಗರಸಭೆಯ 35ವಾರ್ಡ್ ಗಳನ್ನು ಮೂರು ವಿಭಾಗ ಮಾಡಿ ಪ್ರತ್ಯೇಕ ಅಧಿಕಾರಿಗಳನ್ನು ನೇಮಕ ಮಾಡಿ ಸಮಸ್ಯೆಯನ್ನು ಪರಿಹರಿಸಬೇಕು ಎಂದರು. ಮಳೆಯಿಂದ ನಗರದಲ್ಲಿನ ರಸ್ತೆ ಹಾಳಾಗಿರುವ ವಿಚಾರವನ್ನು ಸದಸ್ಯರು ಅಧ್ಯಕ್ಷರ ಗಮನಕ್ಕೆ ತಂದರು. ಮಳೆ ಬಿಟ್ಟ ಕೂಡಲೇ ಕೂಲ್ ಟಾರ್ ಹಾಕಿ ರಸ್ತೆ ದುರಸ್ತಿ ಮಾಡಲಾಗುವುದು ಎಂದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X