Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರದ ಕೊರ್ಗಿ ‘ತಂಬಾಕು ಮುಕ್ತ...

ಕುಂದಾಪುರದ ಕೊರ್ಗಿ ‘ತಂಬಾಕು ಮುಕ್ತ ಗ್ರಾಮ’ ಘೋಷಣೆಗೆ ಅರ್ಹ

ಉಡುಪಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ22 Nov 2023 8:42 PM IST
share
ಕುಂದಾಪುರದ ಕೊರ್ಗಿ ‘ತಂಬಾಕು ಮುಕ್ತ ಗ್ರಾಮ’ ಘೋಷಣೆಗೆ ಅರ್ಹ

ಉಡುಪಿ : ಜಿಲ್ಲೆಯಲ್ಲಿ ಈಗಾಗಲೇ ಉಡುಪಿ ತಾಲೂಕಿನ ಕೋಡಿಬೆಂಗ್ರೆ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವಾಗಿ ಘೋಷಿಸಲಾಗಿದೆ. ಇದರಿಂದ ಅಲ್ಲಿನ ಸ್ಥಳೀಯ ಜನರಿಗೆ ಆಗಿರುವ ಲಾಭಗಳನ್ನು ಇತರೆ ಗ್ರಾಮದವರಿಗೆ ತಿಳಿಸಿ, ಅವರು ತಂಬಾಕು ಉತ್ಪನ್ನಗಳಿಂದ ದೂರ ಇರುವ ಹಾಗೆ ಉತ್ತೇಜಿಸುವ ಕೆಲಸವಾಗಬೇಕು. ಇದೀಗ ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮ ಸಹ ‘ತಂಬಾಕು ಮುಕ್ತ ಗ್ರಾಮ’ವಾಗಿ ಘೋಷಿಸಲು ಇರುವ ಎಲ್ಲಾ ಅರ್ಹತೆಗಳನ್ನು ಪಡೆದಿದೆ. ಸರಕಾರದ ಮಾನದಂಡದಂತೆ ಅದನ್ನು ತಂಬಾಕು ಮುಕ್ತ ಗ್ರಾಮ ಎಂದು ಶೀಘ್ರದಲ್ಲಿ ಘೋಷಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಎರಡನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಬಹುಮಹಡಿಗಳ ವಸತಿ ಸಮುಚ್ಚಯಗಳ ವ್ಯಾಪ್ತಿಯಲ್ಲಿ ಸಹ ತಂಬಾಕು ಉತ್ಪನ್ನಗಳ ಮುಕ್ತ ವಲಯವೆಂದು ಘೋಷಿಸಲು ಅವಕಾಶವಿದ್ದು, ಅಲ್ಲಿನ ಜನರನ್ನು ಮನವೊಲಿಸಬೇಕು ಎಂದ ಡಾ.ವಿದ್ಯಾಕುಮಾರಿ, ಕುಂದಾಪುರ ತಾಲೂಕಿನ ‘ಇಂಪಿರಿಯಲ್ ರೆಸಿಡೆನ್ಸಿ’ ಬಹುಮಹಡಿ ವಸತಿ ಸಮುಚ್ಚಯ ವನ್ನು ಸಹ ಶೀಘ್ರವೇ ತಂಬಾಕು ಮುಕ್ತ ಪ್ರದೇಶವಾಗಿ ಘೋಷಿಸಲಾಗುವುದು ಎಂದರು.

ಜಿಲ್ಲೆಯಲ್ಲಿರುವ ಬೀಡಿ ಕಟ್ಟುವ ಕಾರ್ಮಿಕರುಗಳಿಗೆ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಅವರು ಇತರೆ ಉದ್ಯೋಗಗಳನ್ನು ಕೈಗೊಳ್ಳಲು ತರಬೇತಿ ನೀಡಬೇಕು ಎಂದ ಜಿಲ್ಲಾಧಿಕಾರಿ ಸಲಹೆ ನೀಡಿದರು.

ಉಡುಪಿ ತಾಲೂಕಿನ ಅಲೆವೂರಿನ 75 ಬೀಡಿ ಕಾರ್ಮಿಕರು ಈಗಾಗಲೇ ಬೀಡಿ ಕಟ್ಟುವ ಉದ್ಯೋಗವನ್ನು ಬಿಟ್ಟು ಇತರೆ ಉದ್ಯೋಗವನ್ನು ಮಾಡಲು ಸಂಜೀವಿನಿ ಸ್ವ-ಸಹಾಯ ಸಂಘದ ಸದಸ್ಯರುಗಳಾಗಿ 42 ಮಂದಿ ಈಗಾಗಲೇ ನೋಂದಣಿಗೊಂಡಿದ್ದಾರೆ. ಇವರಿಗೆ ಗ್ರಾಮಪಂಚಾಯತ್‌ನ ಸಹಯೋಗದೊಂದಿಗೆ ಉದ್ಯೋಗ ತರಬೇತಿಯನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದರು.

ಗ್ರಾಮಗಳಲ್ಲಿ ಸಮುದಾಯದ ಸಹಭಾಗಿತ್ವದೊಂದಿಗೆ ಅಲ್ಲಿನ ಜನರ ಮನವೊಲಿಸಿ, ತಂಬಾಕು ಉತ್ಪನ್ನಗಳ ಬಳಕೆ ಹಾಗೂ ಮಾರಾಟವನ್ನು ನಿಷೇಧಿಸುವುದರೊಂದಿಗೆ ತಂಬಾಕು ಮುಕ್ತ ಗ್ರಾಮವನ್ನಾಗಿಸಲು ಪ್ರಯತ್ನ ನಡೆಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಂಬಾಕು ಉತ್ಪನ್ನಗಳ ಸೇವನೆಯಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿ ಮಾರಕ ರೋಗಗಳಾದ ಕ್ಯಾನ್ಸರ್, ಹೃದಯ ಸಂಬಂಧಿತ ರೋಗವೂ ಸೇರಿದಂತೆ ವಿವಿಧ ರೋಗಗಳು ಉಂಟಾಗುತ್ತವೆ. ಇಂತಹ ಉತ್ಪನ್ನಗಳಿಂದ ಪ್ರತಿಯೊಬ್ಬರೂ ದೂರ ಇರಬೇಕು. ಈ ಬಗ್ಗೆ ಸಾರ್ವಜನಿಕ ರಲ್ಲಿ ಅರಿವು ಮೂಡಿಸಬೇಕು ಎಂದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಕೋಟ್ಪಾ ನಿಯಂತ್ರಣ ತನಿಖಾ ದಳ ವಿವಿದೆಡೆ ದಾಳಿ ನಡೆಸಿ 297 ಪ್ರಕರಣ ದಾಖಲಿಸಿದ್ದು, ಒಟ್ಟು 42300 ರೂ. ದಂಡವನ್ನು ವಿಧಿಸಲಾಗಿದೆ ಎಂದ ಡಿಸಿ, ಕೋಟ್ಪಾ ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು ಎಂದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಢಾದ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಆರೋಗ್ಯ ಇಲಾಖೆಯ ಅಧಿಕಾರಿಗಳು ಅಲ್ಲದೇ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ತಂಬಾಕು ಹವ್ಯಾಸ ತೊರೆದವರು 107 ಮಂದಿ

ಜಿಲ್ಲೆಯಲ್ಲಿ ತಂಬಾಕು ವ್ಯಸನ ಮುಕ್ತ ಕಾರ್ಯಕ್ರಮದಡಿ 1764 ಜನರನ್ನು ಸಮಾಲೋಚನೆಗೆ ಒಳಪಡಿಸಿದ್ದು, ಇವರಲ್ಲಿ 671 ಮಂದಿ ಆಪ್ತ ಸಮಾಲೋಚನೆ ಪಡೆದಿದ್ದಾರೆ. 1093 ಮಂದಿ ಆಪ್ತ ಸಮಾಲೋಚನೆ ಹಾಗೂ ಫಾರ್ಮಾಕೋಥೆರಪಿ ಯನ್ನು ಪಡೆದರೆ, 107 ಮಂದಿ ತಂಬಾಕು ಉತ್ಪನ್ನಗಳಿಂದ ದೂರು ಉಳಿಯುವ ಸಂಕಲ್ಪ ಮಾಡಿದ್ದಾರೆ ಎಂದು ವಿವರಿಸಿದರು.

ಜಿಲ್ಲೆಯ 784 ಶಾಲೆಗಳಲ್ಲೂ ‘ತಂಬಾಕು ಮುಕ್ತ ವಲಯ’ಗಳೆಂದು ಫಲಕಗಳನ್ನು ಅಳವಡಿಸಲಾಗಿದೆ. ಶಾಲೆಯ 100 ಮೀ. ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಅಲ್ಲದೇ 18 ವರ್ಷದೊಳಗಿನವರಿಗೆ ಬೀಡಿ, ಸಿಗರೇಟ್‌ಗಳನ್ನು ಮಾರಾಟ ಮಾಡುವ ಹಾಗಿಲ್ಲ. ಒಂದೊಮ್ಮೆ ಮಾರಾಟ ಮಾಡುವುದು ಕಂಡುಬಂದಲ್ಲಿ ಅವರುಗಳ ಮೇಲೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X