Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್...

ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಆಗ್ರಹಿಸಿ ಸಿಪಿಎಂ ಧರಣಿ

ವಾರ್ತಾಭಾರತಿವಾರ್ತಾಭಾರತಿ9 Dec 2025 8:15 PM IST
share
ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಆಗ್ರಹಿಸಿ ಸಿಪಿಎಂ ಧರಣಿ

ಬ್ರಹ್ಮಾವರ, ಡಿ.9: ಬೆಳಗಾವಿ ಅಧಿವೇಶನದಲ್ಲಿ ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲು ಜಿಲ್ಲೆಯ ಶಾಸಕರು ಮುಂದಾಗಬೇಕು ಎಂದು ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಆಗ್ರಹಿಸಿದ್ದಾರೆ.

ಬ್ರಹ್ಮಾವರ ತಹಶೀಲ್ದಾರ್ ಕಚೇರಿ ಎದುರು ಮಂಗಳವಾರ ನಡೆದ ಈ ಕುರಿತ ಪ್ರಚಾರಾಂದೋಲನಾದಲ್ಲಿ ಅವರು ಮಾತನಾಡುತ್ತಿದ್ದರು. ಬ್ರಹ್ಮಾವರ ಇಎಸ್ಐ ಆಸ್ಪತ್ರೆ ಮಂಜೂರಾಗಿ ವರ್ಷಗಳೇ ಕಳೆದರೂ, ಕಾಮಗಾರಿ ಆರಂಭಿಸಲು ಮುತುವರ್ಜಿ ವಹಿಸದೇ ಇರುವುದರಿಂದ ಜಿಲ್ಲೆಯ ಸಾವಿರಾರು ಕಾರ್ಮಿಕರಿಗೆ ತೊಂದರೆಯಾಗಿದೆ. ಆದುದರಿಂದ ಇದರ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಬೇಕು ಎಂದು ಅವರು ದೂರಿದರು.

ಉಡುಪಿ ಸಿಪಿಎಂ ವಲಯ ಸಮಿತಿ ಕಾರ್ಯದರ್ಶಿ ಶಶಿರ್ಧ ಗೊಲ್ಲ ಮಾತನಾಡಿ, ಬ್ರಹ್ಮಾವರ ತಾಲೂಕು ರಚನೆ ಆಗಿದ್ದರೂ, ತಾಲೂಕು ಅಭಿವೃದ್ಧಿ ಕುಂಠಿತಗೊಂಡಿದೆ. ತಾಲೂಕು ಜನರ ಸಮಸ್ಯೆಗಳು ಬೆಳೆಯುತ್ತಿವೆ. ತಾಲೂಕು ಆಡಳಿತ ಗಮನಹರಿಸಬೇಕು ಎಂದು ಆಗ್ರಹಿಸಿದರು.

ಈ ಕುರಿತ ಮನವಿಯನ್ನು ಬ್ರಹ್ಮಾವರ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸಿಪಿಎಂ ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ಸುಭಾಶ್ಚಂದ್ರ ನಾಯಕ್, ಕವಿರಾಜ್ ಎಸ್.ಕಾಂಚನ್, ಬ್ರಹ್ಮಾವರ ಶಾಖಾ ಕಾರ್ಯದರ್ಶಿ ರಮೇಶ್ ಪೂಜಾರಿ, ಪ್ರಮುಖರಾದ ಮುರುಳಿ, ನಳಿನಿ, ಅರವಿಂದ, ಶ್ರೀಧರ ಶೆಟ್ಟಿ, ಕೃಷ್ಣ್ಣಾನಂದ ನಾಯಕ್, ಕರುಣಾಕರ, ವೆಂಕಟೇಶ್, ರಿಕ್ಷಾ ಚಾಲಕರ ಸಂಘದ ಗೌರವಾಧ್ಯಕ್ಷ ರಾಜು ಪೂಜಾರಿ ಉಪಸ್ಥಿತರಿದ್ದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ :

ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಸರಕಾರಿ ಆಸ್ಪತ್ರೆಯಾಗಿ ಮಾಡಬೇಕು. ಬ್ರಹ್ಮಾವರದ ಮಟಪಾಡಿ, ನೀಲಾವರ ಮಾರ್ಗದಲ್ಲಿ ಸರಕಾರಿ ಬಸ್ಸು ಓಡಿಸಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಶಕ್ತಿ ಯೋಜನೆ ಸಿಗುವಂತೆ ಮಾಡಬೇಕು. ಬ್ರಹ್ಮಾವರದಲ್ಲಿ ಪ್ಲೇಓವರ್ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕು.

ಹಂದಾಡಿ, ಮಟಪಾಡಿಗಳಲ್ಲಿ ಮಳೆಗಾಲದಲ್ಲಿ ಕೃಷಿಗಳು ಮಳೆಯಿಂದ ಹಾನಿಗೊಳಗಾಗುವುದನ್ನು ತಪ್ಪಿಸಲು ಸರಿಯಾದ ಚರಂಡಿಗಳನ್ನು ಸಂಕಗಳನ್ನು ಮಾಡಬೇಕು. ಬ್ರಹ್ಮಾವರ ಬಸ್ ನಿಲ್ದಾಣ ವಿಸ್ತಾರವಾಗಿ ಸರಕಾರಿ ಜಾಗದಲ್ಲಿ ಮಾಡಲು ಕ್ರಮ ವಹಿಸಬೇಕು. ಬ್ರಹ್ಮಾವರದಲ್ಲಿ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಮಂಜೂರು ಮಾಡಿ ಖಾಯಂ ನಿರೀಕ್ಷಕರನ್ನು ನೇಮಕ ಮಾಡಬೇಕು.

ಬ್ರಹ್ಮಾವರ ಕ್ರಷಿ ಕಾಲೇಜು ಮೇಲ್ದರ್ಜೆಗೇರಿಸಬೇಕು. ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನರ್‌ ಆರಂಭಿಸಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಬೇಕು. ಕೊಳಲಗಿರಿಯಲ್ಲಿ ಜನರ ರಕ್ಷಣೆಗೆ ಗ್ರಾಮಾಂತರ ಪೋಲೀಸ್ ಠಾಣೆ ಸ್ಥಾಪಿಸಬೇಕು. ಬೆಂಗಳೂರಿಗೆ ಮತ್ತೊಂದು ರಾತ್ರಿ ರೈಲು ಓಡಿಸಬೇಕು. ಬಾರಕೂರು ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್ ಫಾರ್ಮ್ ಅಭಿವೃದ್ಧಿ ಮಾಡಬೇಕು. ಹಂದಾಡಿ, ಮಟಪಾಡಿ, ನೀಲಾವರ ಗ್ರಾಪಂ ವ್ಯಾಪ್ತಿಯಲ್ಲಿ ಹಿಂದೂ ರುದ್ರ ಭೂಮಿ ಮಾಡಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X