ಗುಲ್ವಾಡಿ ಗ್ರಾಪಂನ ಸಿಪಿಎಂ ಸದಸ್ಯೆ ವನಜ ನಿಧನ

ಉಡುಪಿ, ಡಿ.24: ಕುಂದಾಪುರ ತಾಲೂಕು ಗುಲ್ವಾಡಿ ಗ್ರಾಮ ಪಂಚಾಯತ್‌ನ ಸಿಪಿಎಂ ಬೆಂಬಲಿತ ಸದಸ್ಯೆ ವನಜ ಅನಾರೋಗ್ಯದಿಂದ ಇಂದು ಸ್ವಗೃಹದಲ್ಲಿ ನಿಧನರಾದರು.
ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸಿಪಿಎಂ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅವರು ಗೆಲುವು ಸಾಧಿಸಿದ್ದರು. ವನಜ ಅವರಿಗೆ ಸಿಪಿಎಂ ಜಿಲ್ಲಾ ಸಮಿತಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ. ಮೃತರ ಅಂತಿಮಕ್ರಿಯೆ ಗುರುವಾರ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ.
Next Story





