Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಲಕ್ರೀಡೆ ಬೋಟ್‌ಗೆ ಪರವಾನಿಗೆ ಪಡೆಯಲು...

ಜಲಕ್ರೀಡೆ ಬೋಟ್‌ಗೆ ಪರವಾನಿಗೆ ಪಡೆಯಲು ಸಿಎಸ್ಪಿ ಪೊಲೀಸರ ಆದೇಶ

ವಾರ್ತಾಭಾರತಿವಾರ್ತಾಭಾರತಿ17 July 2026 9:43 PM IST
share
ಜಲಕ್ರೀಡೆ ಬೋಟ್‌ಗೆ ಪರವಾನಿಗೆ ಪಡೆಯಲು ಸಿಎಸ್ಪಿ ಪೊಲೀಸರ ಆದೇಶ

ಉಡುಪಿ, ಜು.17: ಕರಾವಳಿ ಕಾವಲು ಪೊಲೀಸ್ ಠಾಣಾ ಸರಹದ್ದಿನಲ್ಲಿ ಜಲಕ್ರೀಡೆ (ವಾಟರ್ ಸ್ಪೋರ್ಟ್ಸ್) ನಡೆಸಲು ವಿವಿಧ ಇಲಾಖೆಗಳಿಂದ ಪರವಾನಿಗೆ ಪಡೆಯುವುದು ಅಗತ್ಯವಿದ್ದು, ಇನ್ನೂ ಪರವಾನಿಗೆ ಪಡೆಯ ದವರು ಶೀಘ್ರ ಆ ಪ್ರಕ್ರಿಯೆ ಮುಗಿಸಿಕೊಳ್ಳಲು ಕರಾವಳಿ ಕಾವಲು ಪೊಲೀಸ್ ಪ್ರಭಾರ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಈ ಹಿಂದೆ ಒಟ್ಟು 227 ಜಲಕ್ರೀಡೆ ಬೋಟ್ ಮಾಲಕರಿದ್ದು ಅವರಲ್ಲಿ 42 ಮಂದಿ ಜಲಕ್ರೀಡೆ ಬೋಟ್ ಪರವಾನಿಗೆ ಹೊಂದಿದ್ದರು. ಉಳಿದ 185 ಮಂದಿ ಮಾಲಕರು ಪರವಾನಿಗೆ ಪಡೆಯಲು ಬಾಕಿಯಿತ್ತು. ಈ ಬಗ್ಗೆ 9 ಕರಾವಳಿ ಕಾವಲು ಪೊಲೀಸ್ ಠಾಣೆಗಳಲ್ಲಿ ಬೋಟು ಮಾಲಕರ ಮತ್ತು ಚಾಲಕರ ಸಭೆಯನ್ನು ನಡೆಸಿ ಸೂಕ್ತ ಸೂಚನೆಗಳನ್ನು ನೀಡಲಾಗಿದ್ದು, ಸಭೆ ನಡೆಸಿದ ನಂತರ ಪ್ರಸ್ತುತ 227 ಬೋಟ್ ಮಾಲಕರಲ್ಲಿ 151 ಮಾಲಕರು ಪರವಾನಿಗೆಯನ್ನು ಪಡೆದುಕೊಂಡಿದ್ದಾರೆ. ಇನ್ನೂ 76 ಬೋಟ್ ಮಾಲಕರುಗಳ ಲೈಸೆನ್ಸ್ ನವೀಕರಣಕ್ಕೆ ಬಾಕಿಯಿದೆ ಎಂದು ಅವರು ತಿಳಿಸಿದರು.

ಬಾಕಿ ಇರುವ ಲೈಸೆನ್ಸ್ ನವೀಕರಣಕ್ಕೆ ಕಾಲಾವಕಾಶವನ್ನು ನೀಡಲಾಗಿದ್ದು ಈವರೆಗೆ ನವೀಕರಣ ಮಾಡಿದ ಬಗ್ಗೆ ಯಾವುದೇ ಮಾಹಿತಿಯನ್ನು ಕೆಲ ಬೋಟ್ ಮಾಲಕರು ನೀಡಿಲ್ಲ. ಆದ್ದರಿಂದ ಕರಾವಳಿ ಕಾವಲು ಪೊಲೀಸ್ ಠಾಣಾ ಸರಹದ್ದಿನಲ್ಲಿ ಜಲಕ್ರೀಡೆ ಮತ್ತು ಬೋಟಿಂಗ್ ನಡೆಸುವ ಎಲ್ಲಾ ಬೋಟ್ ಮಾಲಕರು ನಿಗದಿತ ಸಮಯದೊಳಗೆ ಜಲಕ್ರೀಡೆ ಪರವಾನಿಗೆಯನ್ನು ಪಡೆದುಕೊಂಡು ಜಲಕ್ರೀಡೆ ನಡೆಸಲು ಸೂಚಿಸಲಾಗಿದೆ. ತಪ್ಪಿದಲ್ಲಿ ಮುಂದಕ್ಕೆ ಆಗುವ ಯಾವುದೇ ಅನಾಹುತಗಳಿಗೆ ಸಂಬಂಧಪಟ್ಟ ಜಲಕ್ರೀಡೆ ಬೋಟ್ ಮಾಲಕರನ್ನು ಹೊಣೆಗಾರರನ್ನಾಗಿ ಮಾಡಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಕರಾವಳಿ ಕಾವಲು ಪಡೆ ಪೊಲೀಸರ ಪ್ರಕಟಣೆ ತಿಳಿಸಿದೆ.

2026ರ ಜ.26ರಂದು ಕೋಡಿಬೆಂಗ್ರೆ ಡೆಲ್ಟಾ ಬೀಚ್‌ನಿಂದ ಸಮುದ್ರ ವಿಹಾರಕ್ಕಾಗಿ ಸುಮಾರು 28 ಮಂದಿ ಸುಹಾಸ್ ಮತ್ತು ಸೂಫಿಯಾನ ಎಂಬವರ ಮಾಲಕತ್ವದೆರಡು ಬೋಟ್‌ಗಳಲ್ಲಿ ಪಡುಕೆರೆ ಡಾನ್ ವಿವ್ಯೆ ನೋಡಲು ತೆರಳಿ ವಾಪಾಸು ಬರುವಾಗ ಡೆಲ್ಟಾ ಬೀಚ್ ಕ್ರಾಸ್, ಕನ್ಯಾನ ಗ್ರಾಮ ಬಳಿ ಸಮುದ್ರದಲ್ಲಿ ಬೋಟ್ ನೀರಿನ ರಭಸಕ್ಕೆ ಮಗುಚಿ ಬಿದ್ದು, ಸಿಂಧೂ ಹಾಗೂ ಶಂಕರಪ್ಪ ಎಂಬವರು ಮೃತಪಟ್ಟಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X