Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದೇವರ ಆರಾಧನೆ ಬಿಟ್ಟು ಬುದ್ಧ ಚಿಂತನೆ...

ದೇವರ ಆರಾಧನೆ ಬಿಟ್ಟು ಬುದ್ಧ ಚಿಂತನೆ ಮಾಡಿದರೆ ದಲಿತರ ಅಭಿವೃದ್ಧಿ: ಜಯನ್ ಮಲ್ಪೆ

ಮಲ್ಪೆಯಲ್ಲಿ ಅಂಬೇಡ್ಕರ್ ರ 67ನೇ ಮಹಾ ಪರಿನಿಬ್ಬಾಣ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ6 Dec 2023 12:46 PM IST
share
ದೇವರ ಆರಾಧನೆ ಬಿಟ್ಟು ಬುದ್ಧ ಚಿಂತನೆ ಮಾಡಿದರೆ ದಲಿತರ ಅಭಿವೃದ್ಧಿ: ಜಯನ್ ಮಲ್ಪೆ

ಮಲ್ಪೆ, ಡಿ.6: ದಲಿತರು ಹಿಂದೆಯೂ ಹಿಂದೂಗಳಾಗಿರಲಿಲ್ಲ ಮತ್ತು ಮುಂದೆಯೂ ಹಿಂದೂಗಳಾಗಿರುವುದಿಲ್ಲ. ದಲಿತರು ತಮ್ಮ ಮನೆಗಳಲ್ಲಿರುವ ದೇವರ ಫೋಟೋಗಳನ್ನು ತೆಗೆದು ಬುದ್ಧ ಚಿಂತನೆ ಮಾಡಿದರೆ ಮಾತ್ರ ಸಮಾಜ ಪರಿವರ್ತನೆಯಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ.

ಅಂಬೇಡ್ಕರ್ ಯುವಸೇನೆಯ ಮಲ್ಪೆ ನಗರ ಶಾಖೆ ವತಿಯಿಂದ ಬುಧವಾರ ಮಲ್ಪೆಯ ಸರಸ್ವತಿ ಬಯಲು ರಂಗಮಂದಿರದಲ್ಲಿ ಆಯೋಜಿಸಿದ್ದ ಸಂವಿಧಾನಶಿಲ್ಪಿಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 67ನೇ ಮಹಾ ಪರಿನಿಬ್ಬಾಣ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಶತಶತಮಾನಗಳಿಂದ ದಲಿತರು ತಮ್ಮ ಮನೆಗಳಲ್ಲಿ ದೇವರ ಪೋಟೋಗೆ ಪೂಜೆ ಮಾಡಿದರೂ, ಅವರ ಮೇಲಿನ ದೌರ್ಜನ್ಯ, ಅಸ್ಪೃಶ್ಯತೆ, ಕೊಲೆ, ಸುಲಿಗೆ, ಅತ್ಯಾಚಾರ, ಸಾವು, ನೋವುಗಳನ್ನು ತಡೆಗಟ್ಟಲು ಸಾಧ್ಯವಾಗಿಲ್ಲ. ಅಂಬೇಡ್ಕರ್ ಎಲ್ಲ ದೇವಾಧಿದೇವತೆಗಳ ಸಂಹಾರಕರಾಗಿ ಮುನ್ನಡೆಯುತ್ತಾರೆ. ವೈದಿಕರು ದಲಿತರ ರಾಜಕೀಯ ಅಧಿಕಾರವನ್ನು ಕಬಳಿಸಿ, ಅವರನ್ನು ಶಾಶ್ವತ ಗುಲಾಮರನ್ನಾಗಿಸಲೆಂದೇ ದೇವರನ್ನು ಸೃಷ್ಟಿಸಿದ್ದಾರೆ ಎಂದರು.

ಹೋರಾಟಗಾರ ಸುರೇಶ್ ಪಾಲನ್ ಮಾತನಾಡಿ, ಬದಲಾಗುತ್ತಿರುವ ಸಾಮಾಜಿಕ ಮೌಲ್ಯಗಳು, ಮರೆಯಾಗುತ್ತಿರುವ ಜೀವನಕ್ರಮಗಳು, ತಲ್ಲಣಗೊಳ್ಳುತ್ತಿರುವ ಸಿದ್ಧಾಂತಗಳ ರೋಗಕ್ಕೆ ಅಂಬೇಡ್ಕರ್ ವಿಚಾರಧಾರೆಯೇ ಮದ್ದಾಗಿದೆ. ಜನರ ಬದುಕನ್ನು ಹಸನು ಮಾಡಲು ಪ್ರಯತ್ನಿಸಿದ ಭಾರತದ ಏಕೈಕ ಭಾಗ್ಯವಿಧಾತ ಅಂಬೇಡ್ಕರ್ ಎಂದು ಹೇಳಿದರು.

ಹಿರಿಯ ದಲಿತ ಮುಖಂಡ ಗಣೇಶ್ ನೆರ್ಗಿ ಮಾತನಾಡಿದರು.

ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಹರೀಶ್ ಸಾಲ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯುವ ನಾಯಕರಾದ ಸಂತೋಷ್ ಕಪ್ಪೆಟ್ಟು, ಕೃಷ್ಣ ಶ್ರೀಯಾನ್, ಪ್ರಸಾದ್ ಮಲ್ಪೆ, ಅರುಣ್ ಸಾಲ್ಯಾನ್, ದೀಪಕ್ ಕೊಡವೂರು, ಶಂಕರ್ ನೆರ್ಗಿ, ವಿನಯ ಬಲರಾಮ ನಗರ, ಭಗವಾನ್ ಮಲ್ಪೆ, ಶಶಿಕಲಾ ತೊಟ್ಟಂ, ಪ್ರಮೀಳಾ ಹರೀಶ್, ಕಲಾವತಿ, ಸಂಕಿ ತೊಟ್ಟಂ, ವಿನೋದ ಜಯರಾಜ್, ಸಂಧ್ಯಾ ನೆರ್ಗಿ, ಶಶಿ ತೊಟ್ಟಂ, ಗ್ಯಾಬ್ರಿಯಲ್, ಹರ್ಷಿಲ್ ಉಪಸ್ಥಿತರಿದ್ದರು. ಬಿ.ಎನ್.ಪ್ರಶಾಂತ್ ಸ್ವಾಗತಿಸಿದರು.

ಸುಶೀಲ್ ಕುಮಾರ್ ಕೊಡವೂರು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X