Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಖಾಸಗಿ ಆಸ್ಪತ್ರೆಗಳ ಲಾಬಿಯಿಂದ ಇಎಸ್‌ಐ...

ಖಾಸಗಿ ಆಸ್ಪತ್ರೆಗಳ ಲಾಬಿಯಿಂದ ಇಎಸ್‌ಐ ಆಸ್ಪತ್ರೆ ನಿರ್ಮಾಣ ವಿಳಂಬ: ಜಿ.ಎ.ಕೋಟೆಯಾರ್ ಆರೋಪ

ಉಡುಪಿ ಜಿಲ್ಲೆಯಲ್ಲಿ ಇಎಸ್‌ಐ ಆಸ್ಪತ್ರೆಗಾಗಿ ಉಪವಾಸ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ16 Sept 2023 7:32 PM IST
share
ಖಾಸಗಿ ಆಸ್ಪತ್ರೆಗಳ ಲಾಬಿಯಿಂದ ಇಎಸ್‌ಐ ಆಸ್ಪತ್ರೆ ನಿರ್ಮಾಣ ವಿಳಂಬ: ಜಿ.ಎ.ಕೋಟೆಯಾರ್ ಆರೋಪ

ಉಡುಪಿ, ಸೆ.16: ಕೇಂದ್ರ ಸರಕಾರವು ಕಾರ್ಮಿಕ ವಿಮಾ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ ನೂರು ಹಾಸಿಗೆಯ ಸೂಪರ್ ಸ್ಪೆಶಾಲಿಟಿ ಇಎಸ್‌ಐ ಆಸ್ಪತ್ರೆ ನಿರ್ಮಿಸಲು ಕಾನೂನುನಾತ್ಮಕ ಒಪ್ಪಿಗೆಯನ್ನು ನೀಡಿ ಹಣದ ವ್ಯವಸ್ಥೆಯನ್ನು ಮಾಡಿದೆ. ಆದರೆ ಇದೆಲ್ಲ ನಡೆದು ಇಂದಿಗೆ ಮೂರು ವರ್ಷ ಕಳೆದರೂ ಖಾಸಗಿ ಆಸ್ಪತ್ರೆಗಳ ಲಾಬಿ ಹಾಗೂ ರಾಜಕಾರಣಿಗಳ ಪ್ರಭಾವದಿಂದ ಈವರೆಗೆ ಯಾವುದೇ ರೀತಿಯಲ್ಲೂ ಆಸ್ಪತ್ರೆಗೆ ಅಡಿಪಾಯ ಹಾಕಿಲ್ಲ ಎಂದು ದಿ ಕಾಮನ್ ಪೀಪಲ್ಸ್ ವೆಲ್‌ ಫೇರ್ ಫೌಂಡೇಶನ್‌ನ ರಾಷ್ಟ್ರೀಯ ಅಧ್ಯಕ್ಷ ಜಿ.ಎ.ಕೋಟೆಯಾರ್ ಆರೋಪಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಿಸುವಂತೆ ಆಗ್ರಹಿಸಿ ದಿ ಕಾಮನ್ ಪೀಪಲ್ಸ್ ವೆಲ್‌ಪೇರ್ ಫೌಂಡೇಶನ್ ನೇತೃತ್ವ ದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಹಮ್ಮಿಕೊಳ್ಳಲಾದ ಒಂದು ದಿನದ ಉಪವಾಸ ಸತ್ಯಾಗ್ರಹದಲ್ಲಿ ಅವರು ಮಾತನಾಡುತಿದ್ದರು.

ಉಡುಪಿ ಜಿಲ್ಲೆಗೆ ಮಂಜೂರಾಗಿರುವ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯನ್ನು ಕೂಡಲೇ ಪ್ರಾರಂಭಿಸಬೇಕು. ಕಾರ್ಮಿಕ ವಿಮಾ ಯೋಜನೆಯಲ್ಲಿ ಹಣದ ಕೊರತೆ ಇಲ್ಲ. ಈಗಾಗಲೇ ಶೇ.40ಗಿಂತ ಹೆಚ್ಚು ಹಣ ಇಎಸ್‌ಐ ಕಾರ್ಪೊ ರೇಶನ್‌ನಲ್ಲಿ ಕೊಳೆಯು ತ್ತಿದೆ. ಆದುದರಿಂದ ಈ ಆಸ್ಪತ್ರೆಗೆ ಸರಕಾರ ಅನುದಾನ ಬಿಡುಗಡೆ ಮಾಡಬೇಕಾಗಿಲ್ಲ ಎಂದು ಅವರು ತಿಳಿಸಿದರು.

ಇಎಸ್‌ಐ ಕಾನೂನಿನ ಪ್ರಕಾರ 60ಸಾವಿರಕ್ಕಿಂತ ಹೆಚ್ಚು ಇಎಸ್‌ಐ ಸದಸ್ಯರಿದ್ದ ಜಿಲ್ಲೆಯಲ್ಲಿ ಆಸ್ಪತ್ರೆ ನಿರ್ಮಿಸಲೇ ಬೇಕು. ಆದರೆ ಉಡುಪಿ ಜಿಲ್ಲೆಯಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಕಾರ್ಮಿಕರು ವಿಮಾ ಯೋಜನೆಯ ಸದಸ್ಯರಾಗಿದ್ದಾರೆ. ಅದೇ ರೀತಿ ಸುಮಾರು 5ಲಕ್ಷದವರೆಗೆ ಫಲಾನುಭವಿಗಳಿದ್ದಾರೆ. ಆದುದರಿಂದ ಕಾನೂನಾತ್ಮಕವಾಗಿ ಉಡುಪಿ ಜಿಲ್ಲೆಯಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಾಣ ಆಗಲೇ ಬೇಕು. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಬಳಿಕ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಧರಣಿ ನಿರತ ರಿಂದ ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು ಈ ಸಂಬಂಧ ಈಗಾಗಲೇ ಜಾಗವನ್ನು ಗುರುತಿಸಲಾಗಿದೆ. ದೆಹಲಿಯಿಂದ ಇಎಸ್‌ಐ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿ ಶೀಘ್ರವೇ ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ ನೀಡಲಿರುವರು ಎಂದು ಭರವಸೆ ನೀಡಿದರು.

ಧರಣಿಯಲ್ಲಿ ಸಂಘಟನೆಯ ಮಹಿಳಾ ಅಧ್ಯಕ್ಷೆ ಗೀತಾ ಪೂಜಾರಿ, ಪ್ರಮುಖ ರಾದ ಪ್ರವೀಣ್ ಕುಮಾರ್, ಮುಹಮ್ಮದ್, ಕಮಲಾಕ್ಷ, ಸುರೇಶ್ ಭಂಡಾರಿ, ಅಶೋಕ್ ತೋನ್ಸೆ, ಜಯ ಪೂಜಾರಿ, ಪವಿತ್ರಾ, ಸರಿತಾ, ಜ್ಯೋತಿ, ಲಕ್ಷ್ಮೀ ಮೊದಲಾ ದವರು ಉಪಸ್ಥಿತರಿದ್ದರು.

‘ಉಡುಪಿ ಜಿಲ್ಲೆಯ ಕಾರ್ಕಳ, ಮಣಿಪಾಲ, ಕುಂದಾಪುರ ಹಾಗೂ ಉಡುಪಿಯಲ್ಲಿ ನಾಲ್ಕು ಇಎಸ್‌ಐ ಡಿಸ್ಪೆನ್ಸರಿಗಳನ್ನು ಸ್ಥಾಪಿಸಬೇಕು. ಅಲ್ಲದೆ ಇದಕ್ಕೆ ಬೇಕಾದ ವೈದ್ಯರನ್ನು ನೇಮಕ ಮಾಡಬೇಕು. ಅಲ್ಲದೆ ಅವರಿಗೆ ಕಾನೂನಾತ್ಮಕವಾದ ವೇತನವನ್ನು ಕೊಡಬೇಕು ಮತ್ತು ಅವರಿಗೆ ಖಾಸಗಿ ಕ್ಲಿನಿಕ್ ತೆರೆಯಲು ಅವಕಾಶ ನೀಡಬಾರದು. ಗುತ್ತಿಗೆ ಆಧಾರದಲ್ಲಿ ವೈದ್ಯರನ್ನು ನೇಮಕ ಮಾಡಬಾರದು’

-ಜಿ.ಎ.ಕೋಟೆಯಾರ್, ರಾಷ್ಟ್ರೀಯ ಅಧ್ಯಕ್ಷರು, ದಿ ಕಾಮನ್ ಪೀಪಲ್ಸ್ ವೆಲ್‌ಫೇರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X