Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಭಿವೃದ್ಧಿ ಕಾಮಗಾರಿಗಳಲ್ಲಿ ವಿಳಂಬ ಧೋರಣೆ...

ಅಭಿವೃದ್ಧಿ ಕಾಮಗಾರಿಗಳಲ್ಲಿ ವಿಳಂಬ ಧೋರಣೆ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ24 Nov 2023 8:28 PM IST
share
ಅಭಿವೃದ್ಧಿ ಕಾಮಗಾರಿಗಳಲ್ಲಿ ವಿಳಂಬ ಧೋರಣೆ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ, ನ.24: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾಮಗಾರಿಗಳ ಕುರಿತು ವಿಳಂಬ ಧೋರಣೆ ಯನ್ನು ತಾಳದೆ, ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ(ಕೆಡಿಪಿ)ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಬೈಂದೂರು ತಾಲೂಕಿನ ಮರವಂತೆಯಲ್ಲಿ ಹೊರ ಬಂದರು, ಗಂಗೊಳ್ಳಿ ಮೀನುಗಾರಿಕೆ ಬಂದರಿನ ಮರು ನಿರ್ಮಾಣ ಹಾಗೂ ಗಂಗೊಳ್ಳಿ ಮೀನುಗಾರಿಕಾ ಬಂದರು ಹಾಗೂ ಕೋಡಿ ಜೆಟ್ಟಿಯ ನ್ಯಾವಿಗೇಷನ್ ಚಾನೆಲ್‌ನಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ತಾಂತ್ರಿಕ ಸಮಸ್ಯೆಗಳಿಂದಾಗಿ ಕೈಗೊಳ್ಳದೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಬಂದರು ಇಲಾಖೆ ಹಾಗೂ ಸಿಆರ್‌ಝ್ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಕಾಮಗಾರಿಗಳನ್ನು ತ್ವರಿತವಾಗಿ ಉತ್ತಮ ಗುಣಮಟ್ಟದೊಂದಿಗೆ ಕೈಗೊಳ್ಳುವು ದರೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.

ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಮಳೆ, ಬೆಳೆ, ರಸಗೊಬ್ಬರಗಳ ದಾಸ್ತಾನುಗಳ ಬಗ್ಗೆ ಮಾತನಾಡಿದ ಅವರು, ಈ ಬಾರಿ ಭತ್ತದ ಇಳುವರಿ ಶೇ.50ರಷ್ಟು ಕಡಿಮೆಯಾಗಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ತಾಲೂಕುವಾರು ವಿವರವನ್ನು ಸಂಗ್ರಹಿಸುವಂತೆ ಸೂಚಿಸಿದರು.

ಸಮರ್ಥ ಬರ ನಿರ್ವಹಣೆಗೆ ಕರೆ: ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.22 ರಷ್ಟು ಕಡಿಮೆ ಮಳೆಯಾಗಿದ್ದು, ಅಂತರ್ಜಲ ಮಟ್ಟವೂ ಶೇ.24ರಷ್ಟು ಕುಸಿದಿದೆ. ಮುಂಬರುವ ಬೇಸಿಗೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗ ದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಬಾಕಿ ಉಳಿದಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣ ಗೊಳಿಸುವಂತೆ ನಿರ್ದೇಶನ ನೀಡಿದರು.

ಅಣೆಕಟ್ಟುಗಳಿಗೆ ಹಲಗೆ ಅಳವಡಿಸಿ: ಉಡುಪಿ ಜಿಲ್ಲೆಯಲ್ಲಿ 604 ಕಿಂಡಿ ಅಣೆಕಟ್ಟುಗಳಿದ್ದು, ಅವುಗಳಲ್ಲಿ 357 ಕಿಂಡಿ ಅಣೆಕಟ್ಟುಗಳಿಗೆ ತಡೆ ಹಲಗೆಗಳನ್ನು ಅಳವಡಿಸಲಾಗಿದೆ. ಬಾಕಿ ಉಳಿದಿರುವ 343 ಕಿಂಡಿ ಅಣೆಕಟ್ಟುಗಳಿಗೆ ತಡೆ ಹಲಗೆಗಳನ್ನು ಈ ಕೂಡಲೇ ಅಳವಡಿಸಬೇಕೆಂದು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿ ದರು. ಇದರೊಂದಿಗೆ ಉಡುಪಿ ನಗರಕ್ಕೆ ವಾರಾಹಿ ಕುಡಿಯುವ ನೀರಿನ ಯೋಜನೆಯನ್ನು ಫೆಬ್ರವರಿಯಲ್ಲಿ ಪೂರ್ಣ ಗೊಳಿಸುವಂತೆ ತಿಳಿಸಿದರು.

ಉಪ್ಪು ನೀರು, ಸಿಹಿ ನೀರಿಗೆ ಬೆರೆಯುವುದನ್ನು ತಡೆಯುವ ಖಾರ್ ಲ್ಯಾಂಡ್ ನಿರ್ಮಾಣದ 11 ಕಾಮಗಾರಿ ವರದಿಗೆ ಪ್ರಾದೇಶಿಕ ನಿರ್ದೇಶಕ ರಿಂದ (ಪರಿಸರ) ಅನುಮೋದನೆ ಪಡೆದು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಸಚಿವೆ ಆದೇಶಿಸಿದರು.

ನಗರೋತ್ಥಾನ ನಾಲ್ಕನೇ ಹಂತದ ಕಾಮಗಾರಿಗಳಲ್ಲಿ, ಅನುಮೋದನೆಯಾದ 71 ಕಾಮಗಾರಿಗಳಲ್ಲಿ 32 ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಉಳಿದಿರುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.

ಡೀಮ್ಡ್ ಫಾರೆಸ್ಟ್ ಪ್ರಕರಣಗಳ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು. ಜೊತೆಗೆ ಕುಮ್ಕಿ ಜಾಗದಲ್ಲಿ ಮನೆಕಟ್ಟಿರುವವರು 94 ಸಿಸಿಯಡಿಯಲ್ಲಿ ಅರ್ಜಿ ಹಾಕಿರುವ ಬಗ್ಗೆಯೂ ಚರ್ಚೆ ನಡೆಯಿತು. ಅರ್ಜಿಗಳನ್ನು ಯಾವುದೇ ಕಾರಣಕ್ಕೂ ತಿರಸ್ಕಾರ ಮಾಡಬಾರದು. ಅವುಗಳನ್ನು ನಿಯಾನುಸಾರವಾಗಿ ವಿಲೇವಾರಿ ಮಾಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಗಂಗೊಳ್ಳಿ ದುರಂತಕ್ಕೆ ಶೀಘ್ರ ಪರಿಹಾರ: ಇತ್ತೀಚೆಗೆ ಗಂಗೊಳ್ಳಿ ಬಂದರಿನ ಮ್ಯಾಂಗನೀಸ್ ವಾರ್ಪ್ ಪ್ರದೇಶದಲ್ಲಿ ಸಂಭವಿ ಸಿದ ದೋಣಿ ಅಗ್ನಿ ದುರಂತದಲ್ಲಿ ಸಂತ್ರಸ್ಥರಾಗಿರುವ ಬೋಟು ಹಾಗೂ ದೋಣಿಗಳ ಮಾಲಕರಿಗೆ ಶೀಘ್ರವೇ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಸಭೆಯಲ್ಲಿ ಜಿಲ್ಲೆಯ ಶಾಸಕರಾದ ಯಶ್ಪಾಲ್ ಎ ಸುವರ್ಣ, ವಿ. ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ.ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಡಿಎಫ್‌ಒ ಗಣಪತಿ ಸೇರಿದಂತೆ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ಗೃಹಲಕ್ಷ್ಮೀ ಯೋಜನೆ ಪೂರ್ಣ ಪ್ರಮಾಣದಲ್ಲಿ ಜಾರಿ

ಜಿಲ್ಲೆಯಲ್ಲಿ 3.12 ಲಕ್ಷ ಕುಟುಂಬಗಳಿದ್ದು, ಈ ಪೈಕಿ 1,83,072 ಕುಟುಂಬದ ಯಜಮಾನಿಯರು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಅಲ್ಲದೆ, ಜಿಲ್ಲೆಯಲ್ಲಿರುವ ಕೊರಗ ಹಾಗೂ ಮಲೆಕುಡಿಯ ಜನಾಂಗ ದವರಿಗೂ ಗೃಹಲಕ್ಷ್ಮಿ ಯೋಜನೆ ತಲುಪುವ ದೃಷ್ಟಿಯಿಂದ ವಿಶೇಷ ಅಭಿಯಾನ ಕೈಗೊಳ್ಳಬೇಕು. ಯಾವುದೇ ಕುಟುಂಬಕ್ಕೂ ಈ ಯೋಜನೆ ಕೈತಪ್ಪದಂತೆ ನೋಡಿಕೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಕೋಳಿ ಅಂಕಕ್ಕೆ ಅನುಮತಿ

ಕರಾವಳಿಯ ಪಾರಂಪರಿಕ ಕ್ರೀಡೆಯಾದ ಕೋಳಿ ಅಂಕಕ್ಕೆ ಅನುಮತಿ ನೀಡಬೇಕೆಂದು ಪೊಲೀಸ್ ವರಿಷ್ಠಾಧಿಕಾರಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದರು.

ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಸಭೆಯಲ್ಲಿ ಸಲ್ಲಿಸಿದ ಮನವಿಯನ್ನು ಆಲಿಸಿದ ಸಚಿವೆ, ಆದರೆ ಕೋಳಿ ಅಂಕದ ವೇಳೆ ಯಾವುದೇ ರೀತಿಯಲ್ಲಿ ಜೂಜು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಎಸ್ಪಿ ಅವರಿಗೆ ಸೂಚಿಸಿದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X