ದೆಹಲಿ ಕಾರು ಸ್ಪೋಟ: ಉಡುಪಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ

ಉಡುಪಿ, ನ.11: ದೆಹಲಿಯಲ್ಲಿ ನಡೆದ ಕಾರು ಸ್ಪೋಟ ಪ್ರಕರಣದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಕರಾವಳಿ ಕಾವಲು ಪೊಲೀಸರು ಸಮುದ್ರ ತೀರದಲ್ಲಿ ಹೆಚ್ಚಿನ ನಿಗಾ ವಹಿಸಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ರಾತ್ರಿ ಗಸ್ತಿನಲ್ಲಿದ್ದ ಅಕಾರಿಗಳಿಗೆ ಎಲ್ಲ ರೀತಿಯ ಮಾಹಿತಿಯನ್ನು ಪಡೆದುಕೊಳ್ಳಲಾಗುತ್ತಿದೆ. ಸಮುದ್ರ ತೀರದಲ್ಲಿ ಯಾವುದೇ ಸಂದೇಹಾಸ್ಪದ ಚಟುವಟಿಕೆಗಳ ಕುರಿತು ಕರಾವಳಿ ಕಾವಲು ಪೊಲೀಸರ ಮೂಲಕ ಸಮನ್ವಯತೆ ಸಾಸಲಾಗುತ್ತಿದೆ ಎಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಮಲ್ಪೆ ಸೇರಿದಂತೆ ಜಿಲ್ಲೆಯ ಕರಾವಳಿ ತೀರದಲ್ಲಿ ಕರಾವಳಿ ಕಾವಲು ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಅನುಮಾನಾಸ್ಪದ ಬೋಟುಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಅಳ ಸಮುದ್ರದಲ್ಲಿ ಅಪರಿಚಿತ ಬೋಟುಗಳ ಬಗ್ಗೆ ನಿಗಾ ವಹಿಸಲಾಗಿದೆ. ನಿರಂತರ ಸಮುದ್ರದಲ್ಲಿ ಗಸ್ತು ತಿರುಗುವ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
Next Story





