Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದೇವರಾಜ ಅರಸು, ಬ್ರಹ್ಮಶ್ರೀ ನಾರಾಯಣ ಗುರು...

ದೇವರಾಜ ಅರಸು, ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಪೂರ್ವಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ11 Aug 2023 6:58 PM IST
share
ದೇವರಾಜ ಅರಸು, ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಪೂರ್ವಭಾವಿ ಸಭೆ

ಉಡುಪಿ, ಆ.11: ಆ.20ರಂದು ಹಿಂದುಳಿದ ವರ್ಗಗಳ ಧೀಮಂತ ನಾಯಕ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 108ನೇ ಜನ್ಮ ದಿನಾಚರಣೆ ಹಾಗೂ ಆ.31ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ವ್ಯವಸ್ಥಿತ ರೀತಿಯಲ್ಲಿ ಆಯೋಜಿಸುವ ಕುರಿತಂತೆ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಡಿ.ದೇವರಾಜು ಅರಸು ಜಯಂತಿ ಕಾರ್ಯಕ್ರಮವನ್ನು ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಚರಿ ಸಲು ಅಗತ್ಯ ಸಿದ್ಧತೆ ಗಳನ್ನು ಕೈಗೊಳ್ಳುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚಿ ಸಿದ ಜಿಲ್ಲಾಧಿಕಾರಿ, ಕಾರ್ಯಕ್ರಮದಲ್ಲಿ ಎಸೆಸೆಲ್ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಅತೀ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಹಿಂದುಳಿದ ವರ್ಗಗಳ ಇಲಾಖೆಯ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು.

ಡಿ.ದೇವರಾಜು ಅರಸು ಅವರ ಜೀವನ, ಸಾಧನೆ ಕುರಿತಂತೆ ವಿದ್ಯಾರ್ಥಿ ಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಿ, ಬಹುಮಾನ ವಿತರಿಸುವಂತೆ ಮತ್ತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸು ವಂತೆ ನಿರ್ದೇಶನ ನೀಡಿದರು.

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಬನ್ನಂಜೆಯ ನಾರಾಯಣ ಗುರು ಸಭಾಂಗಣದಲ್ಲಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕಾರ್ಯಕ್ರಮ ನಡೆಯುವ ದಿನದಂದು ನಾರಾಯಣ ಗುರುಗಳ ಕುರಿತು ಗೀತ ಗಾಯನ ಕಾರ್ಯಕ್ರಮ ಆಯೋಜಿಸಿ, ನಾರಾಯಣ ಗುರುಗಳ ಜೀವನ, ತತ್ವ, ಆದರ್ಶಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯ ಕ್ರಮ ಏರ್ಪಡಿಸುವಂತೆ ನಿರ್ದೇಶನ ನೀಡಿದರು.

ಬ್ರಹ್ಮಶ್ರೀ ನಾರಾಯಣ ಗುರು ಸಂದೇಶಗಳನ್ನು ಯುವ ಜನತೆಗೆ ತಿಳಿಸುವ ಉದ್ದೇಶದಿಂದ ಜಿಲ್ಲೆಯ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಿ ಬಹುಮಾನ ವಿತರಿ ಸುವಂತೆ ತಿಳಿಸಿದರು.

ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಬ್ರಹಶ್ರೀ ನಾರಾಯಣ ಗುರುಗಳು ಯಾವುದೇ ನಿರ್ದಿಷ್ಟ ಧರ್ಮ, ವರ್ಗಕ್ಕೆ ಸೀಮಿತರಾಗದೇ ಇಡೀ ಮಾನವ ಸಮಾಜದ ಅಭಿವೃದ್ಧಿಗೆ ಶ್ರಮಿಸಿದ್ದರು. ಅವರ ಜಯಂತಿಯನ್ನು ಮಾದರಿ ಕಾರ್ಯಕ್ರಮ ವನ್ನಾಗಿ ಆಚರಿಸಬೇಕಿದ್ದು, ಇದಕ್ಕೆ ವಿವಿಧ ಸಮುದಾಯಗಳ ಸಂಘ ಸಂಸ್ಥೆಗಳು ಅಗತ್ಯ ಸಹಕಾರ ನೀಡಬೇಕು ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಸಹ ವ್ಯವಸ್ಥಿತ ರೀತಿಯಲ್ಲಿ ಆಚರಣೆ ನಡೆಯಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಲಮಾಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಶಂಕರ ಪೂಜಾರಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X