ಕೆಳಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಹದಗೆಟ್ಟ ರಸ್ತೆ: ಪರಿಶೀಲನೆ

ಉಡುಪಿ, ಆ.28: ರಾಷ್ಟೀಯ ಹೆದ್ದಾರಿ 169 ಅ ಮಣಿಪಾಲ ಕೆಳ ಪರ್ಕಳ ಭಾಗದಲ್ಲಿ ನ್ಯಾಯಾಲಯದ ತಡೆಯಾಜ್ಞೆಯಿಂದ ರಾಷ್ಟೀಯ ಹೆದ್ದಾರಿ ಕಾಮಗಾರಿ ಬಾಕಿ ಇರುವ ಸ್ಥಳದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟು ದಿನನಿತ್ಯ ಅಪಘಾತಗಳು ನಡೆಯು ತ್ತಿರುವ ಹಿನ್ನಲೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರಸಭೆ ಅಧಿಕಾರಿಗಳಿಗೆ ತಕ್ಷಣ ತುರ್ತು ಕಾಮಗಾರಿ ನಡೆಸಿ ಸುಗಮ ಸಂಚಾರಕ್ಕೆ ಕ್ರಮ ವಹಿಸುವಂತೆ ಶಾಸಕರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ನಗರಸಭೆ ವತಿಯಿಂದ ಕಾಂಕ್ರೀಟ್ ಹಾಕಿ ಗುಂಡಿ ಮುಚ್ಚುವ ಕಾರ್ಯ ಆರಂಭಿಸಲಾಗಿದೆ. ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ನಿಕಟಪೂರ್ವ ಅಧ್ಯಕ್ಷ ಸುಮಿತ್ರಾ ನಾಯಕ್ ಹಾಗೂ ನಗರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story





