ಬಿಎಸ್‌ಡಬ್ಲ್ಯುಟಿ ವರ್ಷದ ವ್ಯಕ್ತಿ ಪ್ರಶಸ್ತಿಗೆ ದಿನೇಶ್ ಪೈ ಆಯ್ಕೆ

ಉಡುಪಿ, ಜ.7: ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು ಇದರ 2025ನೇ ಸಾಲಿನ ಬಿಎಸ್‌ಡಬ್ಲ್ಯುಟಿ ವರ್ಷದ ವ್ಯಕ್ತಿ ಪ್ರಶಸ್ತಿಗೆ ಹಿರಿಯ ಸಮಾಜ ಸೇವಕ ಉಡುಪಿ ಮೂಲದ ದಿನೇಶ್ ಪೈ ಆಯ್ಕೆಯಾಗಿದ್ದಾರೆ.
ಸಮಾಜ ಸೇವಕ ದಿನೇಶ್ ಪೈ ಸರಕಾರದ ಸಹಾಯಧನ ಮತ್ತು ದಾನಿಗಳ ನೆರವಿನಿಂದ ಗ್ರಾಮಾಂತರ ಪ್ರದೇಶ ದಲ್ಲಿ ಹಾಗೂ ನಗರಸಭಾ ವ್ಯಾಪ್ತಿಯಲ್ಲಿ ಬಡವರಿಗೆ ಮನೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ. 18 ವರ್ಷಗಳಿಂದ ಸುಮಾರು 700ಕ್ಕೂ ಹೆಚ್ಚು ಮಕ್ಕಳಿಗೆ ಪುಸ್ತಕಗಳನ್ನು ವಿತರಿಸುತ್ತಿದ್ದಾರೆ. ಕಡುಬಡವರಿಗೆ, ವಿಶಿಷ್ಟ ಚೇತನರಿಗೆ, ವೃದ್ಧರಿಗೆ ಸಹಾಯ ಮಾಡುವುದು ಅಪಘಾತಗೊಂಡ ಬಡ / ನಿರುದ್ಯೋಗಿಗಳಿಗೆ 15 ದಿನಗಳವರೆಗೆ ಆಹಾರ ಸಾಮಗ್ರಿಗಳನ್ನು ವಿತರಿಸುತ್ತಾರೆ ಮತ್ತು ಬೇಸಿಗೆಯ ಸಮಯದಲ್ಲಿ ನೀರಿನ ಸೌಲಭ್ಯವನ್ನು ಒದಗಿಸುವ ಕಾರ್ಯವನ್ನು ಮಾಡಿದ್ದಾರೆ.
ಕೊರೋನಾ ಸಂದರ್ಭ ಅರ್ಹ ಕುಟುಂಬಗಳಿಗೆ ದಾನಿಗಳಿಂದ ಹಣ ಸಂಗ್ರಹಿಸಿ ಆಹಾರ ಕಿಟ್ ವಿತರಿಸಿದ್ದಾರೆ. ತನ್ನ ವ್ಯಾಪ್ತಿಯಲ್ಲಿ ಈವರೆಗೆ 400ಕ್ಕೂ ಅಧಿಕ ಅರ್ಹರಿಗೆ ಬಿಪಿಎಲ್ ಕಾರ್ಡ್ ವಿತರಿಸುವ ಕೆಲಸ ಮಾಡಿದ್ದಾರೆ. ಇವರ ಸೇವೆಯನ್ನು ಪರಿಗಣಿಸಿ ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ 2025ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ 25 ಸಾವಿರ ರೂ ನಗದು ಮತ್ತು ಸನ್ಮಾನ ಪತ್ರ, ಫಲಕವನ್ನು ಒಳಗೊಂಡಿದೆ. ಜ.24ರಂದು ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆಯುವ ದಶಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಕಾರ್ಯದರ್ಶಿ ಆಕಿಫ್ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







