Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ರಾಜಕೀಯ ಪಕ್ಷದವರಿಗೆ ಕರಡು...

ಉಡುಪಿ: ರಾಜಕೀಯ ಪಕ್ಷದವರಿಗೆ ಕರಡು ಮತದಾರರ ಪಟ್ಟಿ ವಿತರಣೆ

ವಾರ್ತಾಭಾರತಿವಾರ್ತಾಭಾರತಿ23 Nov 2023 9:00 PM IST
share
ಉಡುಪಿ: ರಾಜಕೀಯ ಪಕ್ಷದವರಿಗೆ ಕರಡು ಮತದಾರರ ಪಟ್ಟಿ ವಿತರಣೆ

ಉಡುಪಿ: ಕರ್ನಾಟಕ ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದ ಕರಡು ಮತದಾರರ ಪಟ್ಟಿ ಹಾಗೂ ಅವುಗಳ ಸಿಡಿ ಪ್ರತಿಯನ್ನು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳಿಗೆ ವಿತರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ತಾಲೂಕು ಕಚೇರಿ ಹಾಗೂ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿ ಸೂಚನಾ ಫಲಕಗಳಲ್ಲಿ ಪ್ರಚಾರ ಪಡಿಸಲಾಗಿದೆ ಎಂದರು.

ಚುನಾವಣಾ ಆಯೋಗದ ನಿರ್ದೇಶನದಂತೆ ಇದೇ ಸೆಪ್ಟಂಬರ್ 30ರಿಂದ ನವೆಂಬರ್ 6ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿತ್ತು. ಪದವೀಧರರ ಕ್ಷೇತ್ರಕ್ಕೆ ಒಟ್ಟು16,478 ಅರ್ಜಿಗಳು ಬಂದಿದ್ದು, ಅವುಗಳಲ್ಲಿ 2402 ಬೇರೆ ಜಿಲ್ಲೆಗೆ ವರ್ಗಾವಣೆಯಾಗಿ, 95 ತಿರಸ್ಕೃತಗೊಂಡು, ಜಿಲ್ಲೆಯಲ್ಲಿ 13981 ಅಧಿಕೃತವಾಗಿ ನೋಂದಣಿಯಾಗಿವೆ. ಶಿಕ್ಷಕರ ಕ್ಷೇತ್ರಕ್ಕೆ 3014 ಅರ್ಜಿಗಳು ಬಂದಿದ್ದು, ಅವುಗಳಲ್ಲಿ 337 ಇತರೆ ಜಿಲ್ಲೆಗೆ ವರ್ಗಾವಣೆ ಯಾಗಿ, 45ತಿರಸ್ಕೃತಗೊಂಡು 2677 ಮತದಾರರ ಹೆಸರು ನೋಂದಣಿ ಯಾಗಿದೆ ಎಂದರು.

ನವೆಂಬರ್ 23ರಿಂದ ಡಿಸೆಂಬರ್ 9ರವರೆಗೆ ಈ ಮತದಾರರ ಪಟ್ಟಿಗೆ ಯಾವುದೇ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದ್ದು, ಬಂದಂತಹ ಹಕ್ಕು ಮತ್ತು ಆಕ್ಷೇಪಣೆಗಳನ್ನು ಡಿಸೆಂಬರ್ 25ರಂದು ವಿಲೇವಾರಿ ಮಾಡುವುದರೊಂದಿಗೆ ಅಂತಿಮ ಮತದಾರರ ಪಟ್ಟಿಯನ್ನು ಇದೇ ಡಿಸೆಂಬರ್ 30ರಂದು ಪ್ರಕಟಿಸಲಾಗುವುದು ಎಂದರು.

ಈಗಲೂ ಭಾರತೀಯ ಪ್ರಜೆಯಾಗಿ, ಸಾಮಾನ್ಯವಾಗಿ ವಾಸಿಸುವ ಇದೇ ನವೆಂಬರ್ 1ಕ್ಕೆ ಮುಂಚೆ ಕನಿಷ್ಠ 3 ವರ್ಷಗಳ ಮೊದಲು ದೇಶದ ವಿಶ್ವ ವಿದ್ಯಾಲಯದ ಪದವೀಧರನಾಗಿರುವ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಪ್ರತಿ ಯೊಬ್ಬ ವ್ಯಕ್ತಿಯು ತನ್ನ ಹೆಸರನ್ನು ಪದವೀದರರ ಮತದಾರರ ಪಟ್ಟಿಗೆ ಹಾಗೂ ಚುನಾವಣಾ ಕ್ಷೇತ್ರದ ಸಾಮಾನ್ಯ ಕ್ಷೇತ್ರದಲ್ಲಿ ನಿವಾಸಿಯಾಗಿರುವ ಇದೇ ನವೆಂಬರ್ 1ಕ್ಕೆ ಹಿಂದಿನ 6 ವರ್ಷಗಳಲ್ಲಿ 3 ವರ್ಷವಾದರೂ ರಾಜ್ಯ ಸರಕಾರದ ನಿರ್ಧಿಷ್ಟ ಪಡಿಸಿದ ಪ್ರೌಢಶಾಲೆ ಹಾಗೂ ಅದಕ್ಕಿಂತ ಮೇಲ್ಪಟ್ಟ ಶಿಕ್ಷಣ ಸಂಸ್ಥೆಗಳಲ್ಲಿ ಭೋಧನೆಯಲ್ಲಿ ತೊಡಗಿರುವ ಶಿಕ್ಷಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳೀಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಕಾಂಗ್ರೆಸ್‌ನ ಹಬೀಬ್ ಅಲಿ ಹಾಗೂ ಶೃದೀಪ, ಬಿಜೆಪಿಯ ಚಂದ್ರಶೇಖರ ಪ್ರಭು, ಜೆ.ಡಿ.ಎಸ್ ನ ಜಯ ಕುಮಾರ್ ಪರ್ಕಳ, ಸಿ.ಪಿ.ಐ.ಎಂನ ಮನೋಹರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X