ಜ.24ರಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿಗೆ ಭೇಟಿ

ಉಡುಪಿ, ಜ.23: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳ್ಕರ್ ಜ.24ರ ಶನಿವಾರ ಸಂಜೆ 7:00ಗಂಟೆಗೆ ಉಡುಪಿಗೆ ಆಗಮಿಸಿ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಅವರು ನಾಲ್ಕು ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಜ.25ರಂದು ಅಪರಾಹ್ನ 1:00ಗಂಟೆಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವ ಸಚಿವರು, ಸಂಜೆ 4ಗಂಟೆಗೆ ಕಾರ್ಕಳ ಮತ್ತು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ಸ್ವರಾಜ್ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಕ್ರೀಡೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂಜೆ 7:00ಕ್ಕೆ ಬೈಂದೂರಿನ ಗಾಂಧಿ ಮೈದಾನದಲ್ಲಿ ನಡೆಯುವ ಬೈಂದೂರು ಉತ್ಸವ-2026ರಲ್ಲಿ ಭಾಗವಹಿಸುವರು.
ಜ.26ರಂದು ಬೆಳಗ್ಗೆ 8:30ಕ್ಕೆ ದೊಡ್ಡಣಗುಡ್ಡೆ ತೋಟಗಾರಿಕಾ ಇಲಾಖೆಯ ಪುಷ್ಪ ಹರಾಜು ಕೇಂದ್ರದಲ್ಲಿ ಮೂರು ದಿನಗಳ ಕಾಲ ನಡೆಯುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. 9:00ಗಂಟೆಗೆ ಅಜ್ಜರಕಾಡು ಮಹಾತ್ಮ ಗಾಂಧಿ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸ ಲಾಗುವ ಉಡುಪಿ ಜಿಲ್ಲಾ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಭಾಗವಹಿಸಿ ಗಣರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ.
ಅಪರಾಹ್ನ 1:30ಕ್ಕೆ ಚಿಕ್ಕಮಗಳೂರಿನ ಹೊರನಾಡು ದೇವಸ್ಥಾನಕ್ಕೆ ಭೇಟಿ ನೀಡಿ ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಡಿ.27ರಂದು ಬೆಳಗ್ಗೆ 7:00ಗಂಟೆಗೆ ಬಜ್ಪೆ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.







