Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಧರ್ಮದ ಹೆಸರಿನಲ್ಲಿ ವಿಭಜಿಸಿ...

ಧರ್ಮದ ಹೆಸರಿನಲ್ಲಿ ವಿಭಜಿಸಿ ಕಾರ್ಮಿಕರಿಗೆ ಅನ್ಯಾಯ: ಬಿ.ಎಂ.ಭಟ್ ಆರೋಪ

ವಾರ್ತಾಭಾರತಿವಾರ್ತಾಭಾರತಿ12 Aug 2023 6:38 PM IST
share
ಧರ್ಮದ ಹೆಸರಿನಲ್ಲಿ ವಿಭಜಿಸಿ ಕಾರ್ಮಿಕರಿಗೆ ಅನ್ಯಾಯ: ಬಿ.ಎಂ.ಭಟ್ ಆರೋಪ

ಉಡುಪಿ, ಆ.12: ಶ್ರಮ ವಹಿಸಿ ಕೆಲಸ ಮಾಡುವವರಿಗೆ ದುಡಿಮೆಯೇ ಧರ್ಮವಾಗಿದೆ. ಆದರೆ ದುಡಿಯುವ ವರ್ಗವನ್ನು ದುಡಿಸುವ ವರ್ಗದವರು ಧರ್ಮದ ಹೆಸರಿನಲ್ಲಿ ವಿಭಜನೆ ಮಾಡಿ ಅನ್ಯಾಯ, ಮೋಸ ಮಾಡುತ್ತಿದೆ ಎಂದು ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್‌ನ ಉಪಾಧ್ಯಕ್ಷ ಬಿ.ಎಂ.ಭಟ್ ಆರೋಪಿಸಿದ್ದಾರೆ.

ಕಾರ್ಮಿಕರ ಮೂರು ವರ್ಷಗಳಿಂದ ಬಾಕಿ ಇರುವ ಕಾರ್ಮಿಕರ ಕನಿಷ್ಟ ಕೂಲಿ, ತುಟ್ಟಿಭತ್ಯೆ ನೀಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್(ಸಿಐಟಿಯು) ನೇತೃತ್ವದಲ್ಲಿ ಇಂದು ಉಡುಪಿ ಅಂಬಲಪಾಡಿಯ ಭಾರತ್ ಬೀಡಿ ಕಂಪನಿಯ ಮುಂದೆ ಹಮ್ಮಿಕೊಳ್ಳಲಾದ ಧರಣಿಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ಬೀಡಿ ಕಾರ್ಮಿಕರ ಒಕ್ಕೂಟ ಬೀಡಿ ಕಾರ್ಮಿಕರಿಗೆ ನ್ಯಾಯೋಚಿತವಾಗಿ ನೀಡಬೇಕಾದ 2015ರಿಂದ ಬಾಕಿ ಇರುವ ತುಟ್ಟಿ ಭತ್ಯೆ, 2018ರಿಂದ ಬಾಕಿ ಇರುವ ಕನಿಷ್ಠ ಕೂಲಿಯನ್ನು ನೀಡದೆ ಅನ್ಯಾಯ ಮಾಡುತ್ತಿದೆ. ಹಿಂದುಗಳಿಗೆ ಅನ್ಯ ಧರ್ಮಿಯ ರಿಂದ ಅನ್ಯಾಯವಾಗುತ್ತಿದೆ ಎಂದು ಆರೋಪ ಮಾಡುವವರಿಗೆ ಬೀಡಿ ಕಾರ್ಮಿಕರಿಗೆ ಅನ್ಯಾಯ ಎಸಗುವ ಬೀಡಿ ಮಾಲಕರು ಯಾವ ಧರ್ಮ ದವರು ಎಂಬುದು ಗೊತ್ತಿಲ್ಲವೇ ಎಂದು ಅವರು ಪ್ರಶ್ನಿಸಿದರು.

ಬೀಡಿ ಕಾರ್ಮಿಕರ ಸೆನ್ ಹಣವು ಜಿಎಸ್‌ಟಿ ಹೆಸರಿನಲ್ಲಿ ಕೇಂದ್ರ ಸರಕಾರದ ಖಜಾನೆಗೆ ಹೋಗುತ್ತಿದೆ. ಒಂದು ಪೈಸೆ ಹಣ ಕೂಡ ಬೀಡಿ ಕಟ್ಟುವ ಮಹಿಳೆಯರಿಗೆ ಸಿಗುತ್ತಿಲ್ಲ. ಈ ಸೆಸ್ ಹಣವನ್ನು ಕಲ್ಯಾಣ ಮಂಡಳಿಗೆ ಹಾಕಿದರೆ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ, ಅನಾರೋಗ್ಯ ಪೀಡಿತರಿಗೆ ನೆರವು, ಮನೆ ಕಟ್ಟಲು ಸಹಾಯಧನ ನೀಡಬಹುದು ಎಂದು ಅವರು ಹೇಳಿದರು.

ಸಿಐಟಿಯು ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ ಮಾತನಾಡಿ, ಬೀಡಿ ಕಾರ್ಮಿಕರಿಗೆ, ರಿಕ್ಷಾ ಚಾಲ ಕರು, ಬೀದಿಬದಿ ವ್ಯಾಪಾರಿ, ಗ್ಯಾರೇಜ್ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಿ ಆ ಮೂಲಕ ಅವರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಮನೆ ನಿರ್ಮಾಣ, ಮದುವೆಗೆ ಸಹಾಯಧನ ನೀಡುವಂತೆ ನಾವು ಹೋರಾಟ ಮಾಡುತ್ತಿದ್ದರೆ, ಕೇಂದ್ರ ಸರಕಾರವು ಸಂಘಟಿಕ ಕ್ಷೇತ್ರವನ್ನು ಅಸಂಘಟಿತ ಕ್ಷೇತ್ರವನ್ನಾಗಿ ಮಾಡಿ ಈ ದೇಶದಲ್ಲಿ ಯಾರಿಗೂ ಭದ್ರತೆ ಇಲ್ಲದಂತೆ ಮಾಡುತ್ತಿದೆ. ನಮ್ಮನ್ನು ಆಳುವ ಬಿಜೆಪಿ ಕಾಂಗ್ರೆಸ್ ಸರಕಾರ ಬ್ರಿಟೀಷರಿಗಿಂತ ಕ್ರೂರವಾದ ನೀತಿಗಳನ್ನು ಜಾರಿಗೆ ತರುತ್ತಿ ದ್ದಾರೆ. ಬಂಡವಾಳ ಶಾಹಿ ಪರವಾದ ಈ ಸರಕಾರಗಳು ಕಾರ್ಮಿಕರ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.

ಫೆಡರೇಶನ್ ಉಡುಪಿ ಜಿಲ್ಲಾಧ್ಯಕ್ಷ ಮಹಾಬಲ ವಡೇರಹೊಬಳಿ, ಕಾರ್ಯ ದರ್ಶಿ ಉಮೇಶ್ ಕುಂದರ್, ಉಡುಪಿ ಬೀಡಿ ಸಂಘದ ಅಧ್ಯಕ್ಷೆ ನಳಿನಿ ಎಸ್., ಕುಂದಾಪುರ ಬೀಡಿ ಸಂಘದ ಅಧ್ಯಕ್ಷೆ ಬಲ್ಕೀಸ್ ಬಾನು, ಕಾರ್ಕಳ ತಾಲೂಕು ಬೀಡಿ ಕಾರ್ಮಿ ಕರ ಸಂಘದ ಅಧ್ಯಕ್ಷ ಸುನೀತಾ ಶೆಟ್ಟಿ, ಕಾರ್ಯದರ್ಶಿ ಕವಿರಾಜ್ ಎಸ್., ಸಿಐಟಿಯು ಉಡುಪಿ ಜಿಲ್ಲಾಧ್ಯಕ್ಷ ಕೆ.ಶಂಕರ್, ಖಜಾಂಚಿ ಶಶಿಧರ ಗೊಲ್ಲ, ಉಡುಪಿ ಜಿಲ್ಲಾ ಹೆಂಚು ಕಾರ್ಮಿಕರ ಸಂಘದ ಕಾರ್ಯದರ್ಶಿ ಎಚ್.ನರಸಿಂಹ, ಸಿಐಟಿಯು ಕುಂದಾಪುರ ವಲಯ ಸಂಚಾಲಕ ಚಂದ್ರಶೇಖರ, ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ್ ಕೋಣಿ, ಪ್ರೇಮ ನೆಲ್ಲಿಕಟ್ಟೆ, ರತ್ನ ಗುಲ್ವಾಡಿ, ಗುಲಾಬಿ, ಪ್ರೇಮ ಬಳ್ಕೂರು, ಪದ್ದು, ರತ್ನ, ವಸಂತಿ, ಇಂದಿರಾ, ಡಿ.ಗಿರಿಜಾ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X