Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾರ್ವಜನಿಕರ ಮಾಹಿತಿ ಹಕ್ಕು ಅರ್ಜಿಗೆ...

ಸಾರ್ವಜನಿಕರ ಮಾಹಿತಿ ಹಕ್ಕು ಅರ್ಜಿಗೆ ಅನಗತ್ಯ ಸತಾಯಿಸಬೇಡಿ : ರಾಜ್ಯ ಮಾಹಿತಿ ಆಯುಕ್ತೆ ಡಾ.ಬಿ.ಆರ್‌.ಮಮತ

ವಾರ್ತಾಭಾರತಿವಾರ್ತಾಭಾರತಿ10 Nov 2025 8:30 PM IST
share
ಸಾರ್ವಜನಿಕರ ಮಾಹಿತಿ ಹಕ್ಕು ಅರ್ಜಿಗೆ ಅನಗತ್ಯ ಸತಾಯಿಸಬೇಡಿ : ರಾಜ್ಯ ಮಾಹಿತಿ ಆಯುಕ್ತೆ ಡಾ.ಬಿ.ಆರ್‌.ಮಮತ

ಉಡುಪಿ, ನ.10: ಸಾರ್ವಜನಿಕರು ಯಾವುದೇ ಮಾಹಿತಿಗಾಗಿ ಅರ್ಜಿ ಹಾಕಿದಾಗ ಅವರನ್ನು ಅನಾವಶ್ಯಕ ಅಲೆದಾಡಿಸದೇ, ಮೂವತ್ತು ದಿನಗಳ ಒಳಗೆ ತಮ್ಮಲ್ಲಿರುವ ಮಾಹಿತಿಯನ್ನು ಅವರಿಗೆ ನೀಡಿ ಸಹಕರಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಮಾಹಿತಿ ಆಯುಕ್ತೆ ಡಾ.ಬಿ.ಆರ್‌.ಮಮತ ಹೇಳಿದ್ದಾರೆ.

ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆಯೋಜಿಸಿದ್ದ ಮಾಹಿತಿ ಹಕ್ಕು ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಅಧಿಕಾರಿಗಳು ಮೊದಲು ತಾವು ಕೂಡ ದೇಶದ ಒಬ್ಬ ಪ್ರಜೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು. ಮಾಹಿತಿ ಹಕ್ಕು ಕಾಯ್ದೆಯಡಿ ಕೇಳುವ ಯಾವುದೇ ಮಾಹಿತಿ ತಮ್ಮಲ್ಲಿದ್ದರೆ ಅದನ್ನು ಅರ್ಜಿದಾರರಿಗೆ ಕೂಡಲೇ ನೀಡಿ ಹಿಂಬರಹ ಪಡೆದುಕೊಂಡು ಶುಲ್ಕ ಪಾವತಿಸಿಕೊಳ್ಳಬೇಕು ಎಂದವರು ಹೇಳಿದರು.

ಸರಕಾರಿ ಕಾರ್ಯಗಳಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ನಾಗರಿಕರು ಸರಕಾರಿ ಕಾರ್ಯ, ಕಾಮಗಾರಿಗಳ ಬಗ್ಗೆ ಮಾಹಿತಿಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದಾಗ ಮಾಹಿತಿಗಳನ್ನು ತಪ್ಪದೇ ನೀಡಬೇಕು ಎಂದು ಡಾ.ಮಮತ ನುಡಿದರು.

ಸರಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ಉಳಿಸಿಕೊಳ್ಳುವ ದೃಷ್ಟಿಯಿಂದ 2005ರಲ್ಲಿ ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಅನ್ನು ಜಾರಿಗೊಳಿಸಲಾಗಿದೆ. ಪ್ರತಿಯೊಬ್ಬ ಭಾರತೀಯ ನಾಗರಿಕನೂ ಸರಕಾರಿ ಅಧಿಕಾರಿಗಳಿಂದ ಸರಕಾರದ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯುವ ಹಕ್ಕನ್ನು ಹೊಂದಿರುತ್ತಾನೆ. ಅವರು ಮಾಹಿತಿ ಕೋರಿ ಅರ್ಜಿ ಸಲ್ಲಿಸಿದಾಗ ನಿಗದಿತ ಕಾಲಾವಧಿಯಲ್ಲಿ ಶುಲ್ಕವನ್ನು ಪಡೆದು ನಿಯಮಾನುಸಾರ ದಾಖಲಾತಿಗಳನ್ನು ನೀಡಬೇಕು ಎಂದರು.

ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಮಾಹಿತಿಯ ಪಾಲಕರಾಗಿದ್ದು, ಮಾಹಿತಿ ಹಕ್ಕು ಅಡಿ ಅರ್ಜಿಗಳು ಬಂದಾಗ ಕ್ಷುಲ್ಲಕ ಕಾರಣ ನೀಡದೇ, ಕಚೇರಿಗೆ ಸಂಬಂಧಿಸಿದ ಯಾವುದೇ ಸಾರ್ವಜನಿಕ ಕಡತಗಳು, ಮಾಹಿತಿಗಳು, ಫೋಟೋಗಳು, ಡಿಜಿಟಲ್ ಮಾಹಿತಿಗಳು ಸೇರಿದಂತೆ ವಿವಿಧ ದಾಖಲೆಗಳನ್ನು ಯಥಾವತ್ತಾಗಿ ನೀಡಬೇಕು ಎಂದು ಅವರು ಸೂಚಿಸಿದರು.

ಸಂಪೂರ್ಣವಾಗಿ ಖಾಸಗಿಯಾಗಿರುವ ಸಂಸ್ಥೆಗಳ ವಿವರ, ವ್ಯಕ್ತಿಯ ಪಾನ್, ಆಧಾರ್, ಮಾರ್ಕ್ಸ್ ಕಾರ್ಡ್ಗಳು ಅಥವಾ ಇನ್ನಿತರ ಯಾವುದೇ ವೈಯಕ್ತಿಕ ಮಾಹಿತಿಗಳನ್ನು ನೀಡುವಂತಿಲ್ಲ. ಮಾಹಿತಿಯು ಅತಿ ಹೆಚ್ಚಿನ ಸಾರ್ವಜನಿಕ ಹಿತಾಸಕ್ತಿಯನ್ನು ಹೊಂದಿದ್ದಾಗ ಸೆಕ್ಷನ್ 11ರ ಅಡಿಯಲ್ಲಿ ವೈಯಕ್ತಿಕ ಮಾಹಿತಿ ಗಳ ಬಗ್ಗೆ ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ಅವರಿಂದ ಮಾಹಿತಿಯನ್ನು ಹಂಚಿಕೊಳ್ಳುವ ಬಗ್ಗೆ ಅನುಮತಿ ಪಡೆದು ಅವರು ಒಪ್ಪಿದರೆ ನೀಡಬಹುದಾಗಿದೆ ಎಂದರು.

ಸ್ವಯಂಪ್ರೇರಿತವಾಗಿ ನೀಡುವ ಮಾಹಿತಿಗಳನ್ನು ಮಾಹಿತಿ ಹಕ್ಕು ಅಧಿ ನಿಯಮದ 4(1)ಎ, 4(1)ಬಿ ಅಡಿಯಲ್ಲಿ ಕಚೇರಿಯಲ್ಲಿ ನಿರ್ವಸುತ್ತಿರುವ ಕಡತ, ವಹಿಗಳು, ಕಚೇರಿಯ ಕಾರ್ಯ ಹಾಗೂ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವಿವರ ಸೇರಿದಂತೆ ವಿವರಗಳನ್ನು ಕಾಲಕಾಲಕ್ಕೆ ಕ್ಷಿಪ್ರವಾಗಿ ವೆಬ್ಸೈಟ್ ನಲ್ಲಿ ನವೀಕರಿಸಿ, ಅಪ್ಲೋಡ್ ಮಾಡಿದಲ್ಲಿ ಸಾರ್ವಜನಿಕರು ಅದರ ಲಾಭ ಪಡೆದುಕೊಳ್ಳಲು ಅನುಕೂಲವಾಗುತ್ತದೆ. ಇದರಿಂದ ಮಾಹಿತಿ ಗಾಗಿ ಅರ್ಜಿ ಸಲ್ಲಿಸುವುದು ತಪ್ಪುತ್ತದೆ ಎಂದರು.

8(1) ಜೆನಲ್ಲಿ ಸೂಚಿಸಲಾದ ದಾಖಲೆಗಳ ಮಾಹಿತಿ ನೀಡಲು ವಿನಾಯಿತಿ ಇದ್ದಲ್ಲಿ ಹಾಗೂ ನ್ಯಾಯಾಲಯದಿಂದ ನೀಡಬಾರದು ಎಂದು ಸ್ಪಷ್ಟ ಆದೇಶ ವಿದ್ದ ಸಂದರ್ಭದಲ್ಲಿ ಮಾಹಿತಿ ನೀಡಲು ನಿರಾಕರಿಸಬಹುದಾಗಿದೆ ಎಂದ ಮಮತಾ ಗೌಡ, ಸರಕಾರಿ ನೌಕರರು ಸಾರ್ವಜನಿಕರಿಗೆ ಸಹಕಾರ ನೀಡಬೇಕು ಎಂಬ ಮನೋಭಾವ ಹೊಂದುವುದರೊಂದಿಗೆ ದಾಖಲೆಗಳನ್ನು ಕೋರಿ ಅರ್ಜಿ ಸಲ್ಲಿಸಿದಾಗ ನೀಡಬೇಕು ಎಂದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಮಾಹಿತಿ ಹಕ್ಕುಗಳ ಕಾಯ್ದೆ ಅಡಿಯಲ್ಲಿ ಬರುವ ಅರ್ಜಿಗಳ ವಿಲೇವಾರಿಗೆ ಸಂಬಂಧಪಟ್ಟಂತೆ ಅಧಿಕಾರಿಗಳಲ್ಲಿ ಗೊಂದಲಗಳು ಏರ್ಪಡುತ್ತಿವೆ. ಕಾಯ್ದೆಯಲ್ಲಿ ಕಾಲಕಾಲಕ್ಕೆ ತಿದ್ದುಪಡಿಗಳನ್ನು ಮಾಡಲಾಗುತ್ತದೆ. ಇವುಗಳ ಬಗ್ಗೆ ಕೆಳಹಂತದ ಪ್ರತಿಯೊಬ್ಬ ಅಧಿಕಾರಿಗಳು ತಿಳಿದುಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಕಾರ್ಯಾಗಾರ ಆಯೋಜಿಸಲಾಗಿದ್ದು, ಅಧಿಕಾರಿಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಾರ್ಯಾಗಾರದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್.ಕಾದ್ರೋಳ್ಳಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X