Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್...

ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್: ಮಾದಕ ವ್ಯಸನ ಮುಕ್ತ ಜಾಗೃತಿ ಅಭಿಯಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ22 July 2026 7:37 PM IST
share
ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್: ಮಾದಕ ವ್ಯಸನ ಮುಕ್ತ ಜಾಗೃತಿ ಅಭಿಯಾನ ಕಾರ್ಯಕ್ರಮ

ಕುಂದಾಪುರ, ಜು.22: ಕೋಡಿಯಲ್ಲಿರುವ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಿಕ್ಷಕ- ರಕ್ಷಕ ಸಭೆ, ಶಾಲಾ ವಿದ್ಯಾರ್ಥಿಗಳ ಮಂತ್ರಿಮಂಡಲ ಸಮಾರಂಭ ಹಾಗೂ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ನಡೆಯಿತು.

ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಜಯರಾಮ್ ಡಿ. ಗೌಡ ಮಾತನಾಡಿ, ಶಿಸ್ತು, ನೈತಿಕ ಮೌಲ್ಯಗಳು ಹಾಗೂ ಜೀವನ ಕೌಶಲ್ಯಗಳ ಮಹತ್ವವನ್ನು ವಿದ್ಯಾರ್ಥಿಗಳು ಅರಿಯಬೇಕು. ದೇಶದ ಬೆನ್ನೆಲು ಬಾಗಿ ರುವ ಯುವ ಸಮುದಾಯವು ನಶೆಯ ದಾರಿಗೆ ಬಿದ್ದು ತಮ್ಮ ಅಮೂಲ್ಯವಾದ ಭವಿಷ್ಯವನ್ನು ಹಾಳು ಮಾಡಿಕೊಳ್ಳ ಬಾರದು. ಶಿಕ್ಷಣ ಹಾಗೂ ತಮ್ಮ ಮುಂದಿನ ಗುರಿಯತ್ತ ಗಮನಹರಿಸಿ, ಸಶಕ್ತ ಮತ್ತು ಆರೋಗ್ಯವಂತ ಸಮಾಜವನ್ನು ಕಟ್ಟಲು ಮುಂದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಉದ್ದೇಶದಿಂದ ಪೋಕ್ಸೋ ಕಾಯ್ದೆಯ ಕುರಿತು ಮಾಹಿತಿ ನೀಡಿ, ವಿದ್ಯಾರ್ಥಿಗಳು ಯಾವುದೇ ರೀತಿಯ ಕಿರುಕುಳ ಅಥವಾ ದೌರ್ಜನ್ಯ ಎದುರಾದರೆ ಧೈರ್ಯದಿಂದ ಪೋಷಕರು, ಶಿಕ್ಷಕರು ಅಥವಾ ಪೊಲೀಸರಿಗೆ ತಕ್ಷಣ ಮಾಹಿತಿ ನೀಡುವಂತೆ ತಿಳಿಸಿದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ಡಾ.ಆಸಿಫ್ ಬ್ಯಾರಿ ಪೋಷಕರನ್ನು ಉದ್ದೇಶಿಸಿ ಮಾತನಾಡಿ, ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಶಾಲೆ ಮತ್ತು ಪೋಷಕರ ಸಹಭಾಗಿತ್ವದ ಮಹತ್ವವನ್ನು ಒತ್ತಿಹೇಳಿದರು. ಹಿಸ್ ಗ್ರೇಸ್ ಮಾಂಟೆಸ್ಸರಿ ಶಿಕ್ಷಕಿಯಾದ ಗಾಯತ್ರಿ ಅವರು ಮಾಂಟೆಸ್ಸರಿ ಬೋಧನಾ ವಿಧಾನ ಕುರಿತು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಶಾಲಾ ಸಂಸತ್ತು ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಲಾ ವಿದ್ಯಾರ್ಥಿ ಮಂತ್ರಿ ಮಂಡಲ ಸಮಿತಿಯ ಸಚಿವರ ಹೆಸರುಗಳನ್ನು ಘೋಷಿಸಲಾಯಿತು. ಮುಖ್ಯ ಅತಿಥಿಗಳು ಹಾಗೂ ಗಣ್ಯರು ನೂತನ ಪದಾಧಿಕಾರಿಗಳಿಗೆ ಅಧಿಕಾರದ ಸಂಕೇತವಾಗಿ ಬ್ಯಾಡ್ಜ್ ಮತ್ತು ಸ್ಯಾಶ್‌ಗಳನ್ನು ನೀಡಿದರು. ಬಳಿಕ ವಿದ್ಯಾರ್ಥಿ ಸಂಸತ್ತಿನ ಸದಸ್ಯರು ಶಾಲೆಯ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರಾಮಾಣಿಕತೆ, ಜವಾಬ್ದಾರಿ ಹಾಗೂ ಶಿಸ್ತಿನಿಂದ ಸೇವೆ ಸಲ್ಲಿಸುವುದಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಹಾಗೂ ಶಾಲೆಯ ಪಾಂಶುಪಾಲೆ ಅಶ್ವಿನಿ ಶೆಟ್ಟಿ ಸಂಸ್ಥೆಯ ಶೈಕ್ಷಣಿಕ ದೃಷ್ಟಿಕೋನ ಹಾಗೂ ಪ್ರಸಕ್ತ ಸಾಲಿನ ಶೈಕ್ಷಣಿಕ ಯೋಜನೆಗಳನ್ನು ಪೋಷಕರಿಗೆ ವಿವರಿಸಿದರು.

ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಝೀಯಾನಾ ಹಾಗೂ ಅಕಾಡೆಮಿಕ್ ಡೀನ್ ಪೂರ್ಣಿಮಾ ಶೆಟ್ಟಿ, ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲೆ ಜನಿಫರ್‌ಲೂಯಿಸ್ ಉಪಸಿತರಿದ್ದರು.

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಲೀನ ಜಿಮಾನ್ ಸ್ವಾಗತಿಸಿದರು. ಶಿಕ್ಷಕಿ ಲಮೀಝ್ ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿನಿ ಐಝಾ ನಾಝ್ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಜನಿಫರ್ ಲೂಯಿಸ್ ವಂದಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X