Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ...

ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ನೀತಿ, ಸಚಿವಾಲಯ ಸ್ಥಾಪನೆಗೆ ಪ್ರಯತ್ನ: ಡಾ.ಆರತಿ ಕೃಷ್ಣ

ನೇಜಾರು ನಾಲ್ವರ ಕೊಲೆ ನಡೆದ ಮನೆಗೆ ಭೇಟಿ, ಕುಟುಂಬಕ್ಕೆ ಸಾಂತ್ವಾನ

ವಾರ್ತಾಭಾರತಿವಾರ್ತಾಭಾರತಿ26 Nov 2023 5:22 PM IST
share
ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ನೀತಿ, ಸಚಿವಾಲಯ ಸ್ಥಾಪನೆಗೆ ಪ್ರಯತ್ನ: ಡಾ.ಆರತಿ ಕೃಷ್ಣ

ಉಡುಪಿ: ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ದಿಂದ ವಿದೇಶದಲ್ಲಿ ದುಡಿಯುವ ಬಹಳಷ್ಟು ಅನಿವಾಸಿ ಕನ್ನಡಿಗರು ತಮ್ಮ ಕುಟುಂಬಗಳ ಬಗ್ಗೆ ಆತಂಕಕ್ಕೆ ಒಳಗಾಗಿದ್ದಾರೆ. ಆದುದರಿಂದ ಅನಿವಾಸಿ ಕನ್ನಡಿಗರ ಮತ್ತು ಅವರ ಕುಟುಂಬದ ಸುರಕ್ಷತೆಗಾಗಿ ಪ್ರತ್ಯೇಕ ನೀತಿ ಮತ್ತು ಸಚಿವಾಲಯ ಸ್ಥಾಪಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದು ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಹೇಳಿದ್ದಾರೆ.

ಕೊಲೆ ನಡೆದ ನೇಜಾರಿನ ತೃಪ್ತಿ ಲೇಔಟ್‌ನಲ್ಲಿರುವ ಮನೆಗೆ ರವಿವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದ ಬಳಿಕ ಅವರು ಮಾಧ್ಯಮದ ವರೊಂದಿಗೆ ಮಾತನಾಡುತ್ತಿದ್ದರು. ನೂರ್ ಮುಹಮ್ಮದ್ ಅವರು ಕೂಡ ಒಬ್ಬರು ಅನಿವಾಸಿ ಕನ್ನಡಿಗರು. ಕುಟುಂಬ ಹಾಗೂ ಮಕ್ಕಳಿಗಾಗಿ ಅವರು ಸೌದಿ ಅರೇಬಿಯಾದಲ್ಲಿ ದುಡಿಯುತ್ತಿದ್ದರು. ಇವರ ಮನೆಯಲ್ಲಿ ನಡೆದ ದುರ್ಘಟನೆ ಯಿಂದ ಇವರ ಹಾಗೆ ಹೊರದೇಶದಲ್ಲಿ ದುಡಿಯುವ ಅನಿವಾಸಿ ಕನ್ನಡಿಗರು ತಮ್ಮ ಕುಟುಂಬಗಳ ಬಗ್ಗೆ ಆತಂಕ್ಕೀಡಾಗಿದ್ದಾರೆ ಎಂದರು.

ಈ ಪ್ರಕರಣದಲ್ಲಿ ಕುಟುಂಬಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ನಾನು ಹೋರಾಟ ಮಾಡುತ್ತೇನೆ. ಈ ಸಂಬಂಧ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸುತ್ತೇನೆ. ಕುಟುಂಬದವರ ಬೇಡಿಕೆಯಂತೆ ಪ್ರಕರಣದ ವಿಚಾರಣೆಗಾಗಿ ತ್ವರಿತ ನ್ಯಾಯಾಲಯ ಸ್ಥಾಪನೆ ಮತ್ತು ವಿಶೇಷ ಸರಕಾರಿ ಅಭಿಯೋಜಕರ ನೇಮಕ ಕುರಿತು ಮುಖ್ಯಮಂತ್ರಿ ಜೊತೆ ಚರ್ಚೆ ಮಾಡುತ್ತೇನೆ. ಕುಟುಂಬದವರ ಬೇಡಿಕೆ ಯಂತೆ ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತೇನೆ ಎಂದು ಅವರು ತಿಳಿಸಿದರು.

ಕುಟುಂಬದಿಂದ ಮನವಿ: ಈ ಸಂದರ್ಭದಲ್ಲಿ ಡಾ.ಆರತಿ ಕೃಷ್ಣ ಅವರಿಗೆ ನೂರ್ ಮುಹಮ್ಮದ್ ಮನವಿಯನ್ನು ಸಲ್ಲಿಸಿ, ತ್ವರಿತ ನ್ಯಾಯಾಲಯ ಸ್ಥಾಪಿಸಿ, ವಿಶೇಷ ಸರಕಾರಿ ಅಭಿಯೋಜಕರನ್ನು ನೇಮಕ ಮಾಡುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಂ.ಎ.ಗಫೂರ್, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್, ನೂರು ಮುಹಮ್ಮದ್ ಕುಟುಂಬದ ಅಶ್ರಫ್ ಕೆ., ಫಾತಿಮಾ ಅಸ್ಬಾ ಮೊದಲಾದವರು ಉಪಸ್ಥಿತರಿದ್ದರು.

ಅನಿವಾಸಿ ಕನ್ನಡಿಗರ ಬಗ್ಗೆ ಅಂಕಿಅಂಶ ಸಂಗ್ರಹ

ಹೊರ ದೇಶದಲ್ಲಿ ದುಡಿಯುವ ಕನ್ನಡಿಗರು ಮತ್ತು ಊರಲ್ಲಿ ಇರುವ ಅವರ ಕುಟುಂಬಗಳ ಬಗ್ಗೆ ಮಾಹಿತಿ ಮತ್ತು ದಾಖಲೆ ಯನ್ನು ಸಂಗ್ರಹಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಅದೆಲ್ಲ ಸಿದ್ಧಗೊಂಡ ಬಳಿಕ ಆ ಅಂಕಿಅಂಶಗಳ ಆಧಾರ ದಲ್ಲಿ ಅವರಿಗಾಗಿ ಯೋಜನೆ ರೂಪಿಸಲಾಗುವುದು ಎಂದು ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ತಿಳಿಸಿದರು.

ಕಳೆದ ಐದು ವರ್ಷಗಳಿಂದ ಆನಿವಾಸಿ ಭಾರತೀಯ ಸಮಿತಿ ಕರ್ನಾಟಕ ಇದರಲ್ಲಿ ಯಾರು ಇರಲಿಲ್ಲ. ಅದಕ್ಕಿಂತ ಮೊದಲು ಎರಡು ವರ್ಷ ನಾನೇ ಆ ಸಮಿತಿಯಲ್ಲೇ ಉಪಾಧ್ಯಕ್ಷೆ ಆಗಿದ್ದೆ. ಇದೀಗ ಮತ್ತೆ ನಾವು ಅಧಿಕಾರಕ್ಕೆ ಬಂದಿ ದ್ದೇವೆ. ಈ ಭಾಗದ ಹೆಚ್ಚಿನವರು ವಿದೇಶದಲ್ಲಿದ್ದಾರೆ. ಅವರ ಸಮಸ್ಯೆಗಳು ಜಾಸ್ತಿ ಇದೆ. ಕುಟುಂಬವನ್ನು ಬಿಟ್ಟು ಅವರು ಒಬ್ಬರೇ ಹೋಗಿ ಅಲ್ಲಿ ದುಡಿಯುತ್ತಿದ್ದಾರೆ. ಆದುದರಿಂದ ಅವರ ಕುಟುಂಬಕ್ಕೆ ಕೊಡಬೇಕಾಗಿರುವುದು ನಮ್ಮ ಜವಾಬ್ದಾರಿ ಯಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X