Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳು...

ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ26 Dec 2023 8:07 PM IST
share
ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ

ಉಡುಪಿ: ಯುವ ಜನರ ಶ್ರೇಯೋಭಿವೃದ್ಧಿಗೆ ಸರಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಗೆ ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು.

ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರಕಾರ ಜಾರಿಗೆ ತಂದಿರುವ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಾಗಿದ್ದು, ೨೦೨೩ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾದಲ್ಲಿ ಉತ್ತೀರ್ಣರಾದ ಸರಕಾರಿ, ಖಾಸಗಿ ಹಾಗೂ ಸ್ವಯಂ ಉದ್ಯೋಗ ಹೊಂದದೇ ಇರುವ ಅರ್ಹ ಯುವಜನತೆ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.

ಈ ಯೋಜನೆಯನ್ನು ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ, ರಾಜ್ಯದಲ್ಲಿ ವಾಸವಾಗಿರುವವರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ನಲ್ಲಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಪದವಿ ಅಭ್ಯರ್ಥಿಗಳಿಗೆ ಪ್ರತೀ ತಿಂಗಳು ೩೦೦೦ ರೂ., ಡಿಪ್ಲೋಮಾ ಪದವೀಧರರಿಗೆ ಪ್ರತೀ ತಿಂಗಳು ೧೫೦೦ ರೂ. ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುವುದು. ಅರ್ಜಿ ಸಲ್ಲಿಸಿದಾಗಿನಿಂದ ಉದ್ಯೋಗ ದೊರೆಯುವವರೆಗೆ ಅಥವಾ ೨ ವರ್ಷ ಗರಿಷ್ಠ ಅವಧಿಗೆ ಮಾತ್ರ ಭತ್ಯೆ ನೀಡಲಾಗುವುದು ಎಂದರು.

ಅರ್ಜಿ ಸಲ್ಲಿಸುವಾಗ ಮತದಾರರ ಗುರುತಿನ ಚೀಟಿ, ಪದವಿ ಅಥವಾ ಡಿಪ್ಲೋಮಾದ ಅಂಕಪಟ್ಟಿ ಮತ್ತು ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಒದಗಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಪ್ರಸನ್ನ ಹೆಚ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅರುಣ್, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಿಬ್ಬಂದಿ ಪೃಥ್ವಿರಾಜ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X