ಗ್ರಂಥಾಲಯದಿಂದ ವಿದ್ಯಾರ್ಥಿಗಳ ಕಲ್ಪನಾಶಕ್ತಿ ವೃದ್ಧಿ: ಎಡಿಸಿ ಮಮತಾದೇವಿ

ಉಡುಪಿ, ನ.20: ಗ್ರಂಥಾಲಯಗಳು ವಿದ್ಯಾರ್ಥಿಗಳ ಕಲ್ಪನಾಶಕ್ತಿಯನ್ನು ಹೆಚ್ಚಿಸುತ್ತದೆ. ಬೇರೆ ಬೇರೆ ವಿಷಯಗಳನ್ನು ಹುಡು ಕಲು ಮತ್ತು ತಿಳಿದುಕೊಳ್ಳಲು ಹೊಸ ಸ್ಪೂರ್ತಿಯಾಗುತ್ತದೆ. ಗ್ರಂಥಾಲಯದ ಸೇವೆಗಳನ್ನು ಬಳಸಿಕೊಳ್ಳುವುದ ರಿಂದ ವಿದ್ಯಾರ್ಥಿಗಳು ತಮ್ಮ ಜೀವನ ಗುಣಮಟ್ಟವನ್ನು ಸುಧಾರಿಸಿಕೊಳ್ಳಲು ಸಾಧ್ಯ ಎಂದು ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಹೇಳಿದ್ದಾರೆ.
ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಐಕ್ಯೂಎಸಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ಯು.ಜಿ. ಸಭಾಂಗಣದಲ್ಲಿ ನಡೆದ ಗ್ರಂಥಾಲಯದ ಯುಟ್ಯೂಬ್ ಮತ್ತು ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ - 2023 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಯಾಗಿ ಕಾರ್ಕಳ ಎಂ.ಪಿ.ಎಂ. ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕ ವೆಂಕ ಟೇಶ್ ಕಾರ್ಯಾಗಾರವನ್ನು ನಡೆಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ್ ಶೆಟ್ಟಿ ಎಸ್. ವಹಿಸಿ ದ್ದರು. ಐಕ್ಯೂಎಸಿ ಸಂಚಾಲಕ ಸೋಜನ್ ಕೆ.ಜಿ., ವಿಜ್ಞಾನ ನಿಕಾಯ ಡೀನ್ ಪ್ರೊ.ಶ್ರೀಧರ್ ಪ್ರಸಾದ ಕೆ., ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಡಾ.ವಾಣಿ ಆರ್.ಬಲ್ಲಾಳ್ ಹಾಗೂ ಸಮಾಜಶಾಸ್ತ್ರ ಮುಖ್ಯಸ್ಥ ಡಾ.ರಾಜೆಂದ್ರ ಕೆ. ಉಪಸ್ಥಿತರಿದ್ದರು.
ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕಿ ಯಶೋದಾ ಸ್ವಾಗತಿಸಿದರು. ವಿದ್ಯಾರ್ಥಿನಿ ಅಮೃತ ಕಾರ್ಯಕ್ರಮ ನಿರೂಪಿಸಿ, ಚೈತ್ರಾ ಕೆ.ಸಿ. ವಂದಿಸಿದರು.