Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಿಲ್ಲೆಯಲ್ಲಿ ಸಿಎನ್‌ಜಿ ಗ್ಯಾಸ್...

ಜಿಲ್ಲೆಯಲ್ಲಿ ಸಿಎನ್‌ಜಿ ಗ್ಯಾಸ್ ಕೊರತೆಯಾಗದಂತೆ ನೋಡಿಕೊಳ್ಳಿ: ಉಡುಪಿ ಡಿಸಿ ಸ್ವರೂಪಾ ಟಿ.ಕೆ. ಸೂಚನೆ

ವಾರ್ತಾಭಾರತಿವಾರ್ತಾಭಾರತಿ30 Jan 2026 7:45 PM IST
share
ಜಿಲ್ಲೆಯಲ್ಲಿ ಸಿಎನ್‌ಜಿ ಗ್ಯಾಸ್ ಕೊರತೆಯಾಗದಂತೆ ನೋಡಿಕೊಳ್ಳಿ: ಉಡುಪಿ ಡಿಸಿ ಸ್ವರೂಪಾ ಟಿ.ಕೆ. ಸೂಚನೆ
ವಿತರಣಾ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲು ಕರೆ

ಉಡುಪಿ, ಜ.30: ಜಿಲ್ಲೆಯಲ್ಲಿ ಸಿ.ಎನ್.ಜಿ ಅನಿಲ ಬಳಸುವ ವಾಹನಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಗ್ಯಾಸ್ ವಿತರಣೆಯಾಗುವಂತೆ ನೋಡಿಕೊಳ್ಳಬೇಕು. ಇದಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡು, ಸಿಎನ್‌ಜಿ ಗ್ಯಾಸ್‌ಗೆ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.ಸೂಚಿಸಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಿಎನ್‌ಜಿ ಗ್ಯಾಸ್ ಸರಬರಾಜಿ ನಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಅನಿಲದ ವಿತರಣೆಯಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಿ ಗ್ರಾಹಕರ ಬೇಡಿಕೆಗಳಿಗನು ಗುಣವಾಗಿ ಅನಿಲವನ್ನು ಪೂರೈಸುತ್ತಿರ ಬೇಕು ಎಂದು ಅವರು ಅದಾನಿ ಕಂಪೆನಿಯ ಪ್ರತಿನಿಧಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಸಿಎನ್‌ಜಿ ಗ್ರಾಹಕರು ತಮ್ಮ ವಾಹನಗಳೊಂದಿಗೆ ಸಿಎನ್‌ಜಿ ಗ್ಯಾಸ್ ವಿತರಣಾ ಕೇಂದ್ರಗಳ ಮುಂದೆ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಈ ಸಮಸ್ಯೆಯನ್ನು ಕೂಡಲೇ ಪರಿಹರಿಸಿ ಸುಗಮವಾಗಿ ಗ್ಯಾಸ್ ಲಭ್ಯವಾ ಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ಬಳಸಿ ವಾಹನ ಚಾಲನೆ ಮಾಡುತ್ತಿರುವ ಆಟೋ ಚಾಲಕರು ಸೇರಿದಂತೆ ವಿವಿಧ ವಾಹನಗಳ ಚಾಲಕರು ತಮ್ಮ ವಾಹನ ಗಳಿಗೆ ಗ್ಯಾಸ್ ತುಂಬಿಸಲು ಬಂಕ್‌ಗಳ ಮುಂದೆ ಎರಡು-ಮೂರು ಗಂಟೆ ಗಿಂತ ಹೆಚ್ಚು ಕಾಲ ಕಾಯುವ ಪರಿಸ್ಥಿತಿ ಉಂಟಾಗಿ ಸಾರ್ವಜನಿಕರಿಗೆ ಸಮಸ್ಯೆ ಯಾಗುತ್ತಿದೆ. ಇದನ್ನು ಕೂಡಲೇ ಗೈಲ್ ಗ್ಯಾಸ್ ಕಂಪನಿ ಹಾಗೂ ಅದಾನಿ ಕಂಪನಿಯವರ ಸಮನ್ವಯದೊಂದಿಗೆ ಕಾರ್ಯ ನಿರ್ವಸಿ ಗ್ಯಾಸ್ ತರಣೆಯಲ್ಲಿ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಮಂಗಳೂರಿನ ಗ್ಯಾಸ್ ಡಿಪೋದಲ್ಲಿ ಟ್ಯಾಂಕರ್‌ಗಳಿಗೆ ಗ್ಯಾಸ್ ತುಂಬಿಸು ವಾಗ ಉಡುಪಿ ಜಿಲ್ಲೆಯ ವಾಹನಗಳಿಗೆ ಆದ್ಯತೆ ನೀಡಿ ಸರತಿ ಸಾಲಿನ ಪ್ರಕಾರ ಗ್ಯಾಸ್ ತುಂಬಿಸಲು ಅವಕಾಶ ಮಾಡಿಕೊಡಬೇಕು. ಸಾಧ್ಯವಾದಲ್ಲಿ ನಿಗದಿತ ವೇಳೆಯನ್ನು ನೀಡಿ ಗ್ಯಾಸ್ ಟ್ಯಾಂಕರ್‌ಗಳಿಗೆ ಭರ್ತಿ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ನುಡಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್‌ನ ಅಸಮರ್ಪಕ ವಿತರಣೆಯಿಂದಾಗಿ ಆಟೋ ಸೇರಿದಂತೆ ವಿವಿಧ ವಾಹನ ಚಾಲಕರಿಗೆ ಗ್ಯಾಸ್ ತುಂಬಿಸಲು ದಿನಗಟ್ಟಲೆ ನಿಲ್ಲುವ ಪರಿಸ್ಥಿತಿ ಉಂಟಾಗಿದೆ. ಇದರಿಂದ ಕೆಲವರ ವೃತ್ತಿ ಜೀವನದಲ್ಲಿ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ಸಮರ್ಪಕ ವಿತರಣೆಗೆ ಶೀಘ್ರವೇ ಕ್ರಮತೆಗೆದುಕೊಳ್ಳಬೇಕು ಎಂದರು.

ಕಳೆದ ಸಭೆಯಲ್ಲಿ ಅದಾನಿ ಕಂಪನಿ ತಮ್ಮದೇ ಸ್ವಂತ ಗ್ಯಾಸ್ ತುಂಬುವ ಡಿಪೋವನ್ನು ಶೀಘ್ರವೇ ಪ್ರಾರಂಭಿ ಸುವುದಾಗಿ ತಿಳಿಸಿದ್ದರು. ಆದರೆ ಇದುವ ರೆಗೂ ಇದು ಆಗಿಲ್ಲ. ಗ್ಯಾಸ್ ಡಿಪೋವನ್ನು ಕೂಡಲೇ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಂಡು ಜನರಿಗೆ ಗ್ಯಾಸ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು ಎಂದ ಕೋಟ, ಪ್ರಸ್ತುತ 17 ಗ್ಯಾಸ್ ಟ್ಯಾಂಕರ್ ವಾಹನಗಳನ್ನು ಬಳಕೆ ಮಾಡಿ ಮಂಗಳೂರಿನಿಂದ ತರಲಾಗುತ್ತಿದೆ. ಈ ವಾಹನ ಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿದ್ದಲ್ಲಿ ಸಿ.ಎನ್.ಸಿ ಗ್ಯಾಸ್ ಸರಬರಾಜಿಗೆ ಅನುಕೂಲವಾಗಲಿದೆ. ಇದಕ್ಕೆ ಅದಾನಿ ಕಂಪನಿಯವರು ವಿಶೇಷ ಒತ್ತು ನೀಡಬೇಕು ಎಂದರು.

ಜಿಲ್ಲೆಯ ಸಿ.ಎನ್.ಜಿ ಗ್ಯಾಸ್ ವಿತರಣಾ ಘಟಕಗಳಲ್ಲಿ ಗ್ಯಾಸ್ ತುಂಬಿಸಲು ವಾಹನಗಳು ಗಂಟೆಗಟ್ಟಲೆ ನಿಂತು ತುಂಬಿ ಸುವ ಅನಿವಾರ್ಯತೆ ಉಂಟಾಗಿದೆ ಹಾಗೂ ಗ್ಯಾಸ್ ತುಂಬುವಾಗ ಒತ್ತಡದ ಕೊರತೆಯಿಂದ ಸಮಸ್ಯೆ ಉಂಟಾ ಗುತ್ತಿದೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ವಾಹನ ಚಾಲಕರು ತಮ್ಮ ಅಹವಾಲು ತೋಡಿಕೊಂಡರು.

ಸಭೆಯಲ್ಲಿ ಶಾಸಕ ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ, ಗೈಲ್ ಗ್ಯಾಸ್ ಹಾಗೂ ಅದಾನಿ ಗ್ಯಾಸ್ ಕಂಪನಿಗಳ ಮುಖ್ಯಸ್ಥರು, ಆಟೋರಿಕ್ಷಾ ಚಾಲಕರು ಹಾಗೂ ಇತರರು ಉಪಸ್ಥಿತರಿದ್ದರು.

Tags

EnsureshortageCNG gasdistrict
share
ವಾರ್ತಾಭಾರತಿ
ವಾರ್ತಾಭಾರತಿ
Next Story
X