Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಮಾಜದಲ್ಲಿ ಸಾಮರಸ್ಯದ ಬದುಕು...

ಸಮಾಜದಲ್ಲಿ ಸಾಮರಸ್ಯದ ಬದುಕು ಕಲ್ಪಿಸುವುದು ಸರಕಾರದ ಧ್ಯೇಯ: ಸಚಿವ ರಿಝ್ವಾನ್ ಅರ್ಷದ್

ವಾರ್ತಾಭಾರತಿವಾರ್ತಾಭಾರತಿ25 Nov 2026 5:15 PM IST
share
ಸಮಾಜದಲ್ಲಿ ಸಾಮರಸ್ಯದ ಬದುಕು ಕಲ್ಪಿಸುವುದು ಸರಕಾರದ ಧ್ಯೇಯ: ಸಚಿವ ರಿಝ್ವಾನ್ ಅರ್ಷದ್

ಉಡುಪಿ : ರಾಜ್ಯದ ಗ್ರಾಮೀಣ ಪ್ರದೇಶಗಳ ಚಿತ್ರಣ ಬದಲಿಸಲು ನಮ್ಮ ಸರಕಾರ ಬೃಹತ್ ಅಭಿವೃದ್ಧಿ ಯೋಜನೆ ಗಳನ್ನು ರೂಪಿಸಿದೆ. ಗ್ಯಾರಂಟಿ ಯೋಜನೆಗಳಿಂದ ಬಡವರು ಹಾಗೂ ಸಾಮಾನ್ಯ ಜನರಿಗೆ ಸಾಕಷ್ಟು ಅನುಕೂಲ ವಾಗಿದೆ. ಕೇಂದ್ರ ಸರಕಾರದ ತಪ್ಪು ಆರ್ಥಿಕ ನೀತಿಗಳಿಂದ ಬೆಲೆ ಏರಿಕೆ ಹೆಚ್ಚಾಗಿರುವ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳು ಜನರಿಗೆ ನೆರವಾಗಿವೆ. ಸರಕಾರದ ಯೋಜನೆಗಳ ಪ್ರಯೋಜನಗಳ ಬಗ್ಗೆ ಜನರಿಗೆ ಅರಿವು ಮೂಡಿ ಸುವುದು ಕಾರ್ಯಕರ್ತರ ಕರ್ತವ್ಯವಾಗಿದೆ ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಕಾರ್ಯಕರ್ತರು ಇದ್ದರೆ ಮಾತ್ರ ಮುಖಂಡರಾಗಲು ಸಾಧ್ಯ. ಪಕ್ಷಕ್ಕೆ ಸೇರಲು ಇಚ್ಛಿಸುವ ಪ್ರತಿಯೊಬ್ಬರಿಗೂ ಪಕ್ಷದ ಬಾಗಿಲು ತೆರೆದಿರುತ್ತದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈಗಿನಿಂದಲೇ ಸಿದ್ಧತೆ ನಡೆಸಬೇಕು. ನಿರಂತರವಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡ ವರನ್ನು ಗುರುತಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಸರಕಾರವು ಪಕ್ಷ, ಜಾತಿ, ಧರ್ಮದ ಭೇದವಿಲ್ಲದೆ ಎಲ್ಲ ಅರ್ಹ ಫಲಾನುಭವಿಗಳಿಗೂ ಗ್ಯಾರಂಟಿ ಯೋಜನೆಗಳ ಪ್ರಯೋಜನ ತಲುಪಿಸುತ್ತಿದೆ. ಪ್ರತಿಯೊಬ್ಬರೂ ಸಮಾಜದಲ್ಲಿ ನೆಮ್ಮದಿಯ ಜೀವನ ನಡೆಸುವಂತಾಗಬೇಕು ಎಂಬುದೇ ಕಾಂಗ್ರೆಸ್ ಪಕ್ಷದ ಸಂಕಲ್ಪವಾಗಿದೆ ಎಂದು ಅವರು ತಿಳಿಸಿದರು.

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿ ಇದೀಗ ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿಯೂ ಇದೇ ಮಾದರಿಯ ಯೋಜನೆಗಳನ್ನು ಅನುಷ್ಠಾನ ಗೊಳಿಸುತ್ತಿದೆ. ಇದರಿಂದ ಕರ್ನಾಟಕದ ಯೋಜನೆಗಳನ್ನು ಬಿಜೆಪಿ ಅನುಸರಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ. ಇಂದು ದೇಶಕ್ಕೆ ಕರ್ನಾಟಕವೇ ಮಾದರಿಯಾಗಿದೆ ಎಂದರು.

ಸಭೆಯಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಮುಖಂಡರಾದ ಶೇಖರ ಮಡಿವಾಳ ಕಾರ್ಕಳ, ದಿನಕರ ಹೇರೂರು, ಪ್ರಶಾಂತ್ ಜತ್ತನ್ನ, ಪ್ರಸಾದ್ ರಾಜ್ ಕಾಂಚನ್, ಉದಯಕುಮಾರ್ ಶೆಟ್ಟಿ ಮುನಿಯಾಲು, ರಮೇಶ್ ಕಾಂಚನ್, ವೈ.ಸುಕುಮಾರ್, ಗೋಪಿನಾಥ್ ಭಟ್, ಮದನ್ ಕುಮಾರ್, ಸದಾನಂದ ಶೆಟ್ಟಿ, ಪ್ರದೀಪ್ ಕುಮಾರ್, ಅರವಿಂದ್ ಪೂಜಾರಿ, ತಿಮ್ಮ ಪೂಜಾರಿ, ಸಂತೋಷ್ ಕುಲಾಲ್, ರಾಘವೇಂದ್ರ ಶೆಟ್ಟಿ, ಕೃಷ್ಣ ಶೆಟ್ಟಿ ಬಜೆಗೋಳಿ, ಭುಜಂಗ ಶೆಟ್ಟಿ, ಬಿ.ನರಸಿಂಹಮೂರ್ತಿ, ವಿಶ್ವಾಸ್ ಅಮೀನ್, ಹರಿಪ್ರಸಾದ್ ರೈ, ಹಬೀಬ್ ಅಲಿ, ಪ್ರಖ್ಯಾತ್ ಶೆಟ್ಟಿ, ಸುನಿಲ್ ಬಂಗೇರ, ಜ್ಯೋತಿ ಹೆಬ್ಬಾರ್, ನಿರೀಕ್ಷಾ ಮೆಂಡನ್, ಮೀನಾಕ್ಷಿ ಮಾಧವ ಬನ್ನಂಜೆ, ಮಹಾಬಲ ಕುಂದರ್, ಕೀರ್ತಿ ಶೆಟ್ಟಿ, ವಿಕಾಸ ಹೆಗ್ಡೆ, ಉದ್ಯಾವರ ನಾಗೇಶ್ ಕುರ್ಮಾ, ಶಶಿಧರ್ ಶೆಟ್ಟಿ ಎಲ್ಲೂರು, ಹರೀಶ್ ಶೆಟ್ಟಿ ಪಂಗಾಳ, ಶರ್ಪುದ್ದೀನ್ ಶೇಖ್, ಜಯಕುಮಾರ್, ಸುರೇಶ್ ಶೆಟ್ಟಿ ಬನ್ನಂಜೆ, ಸತೀಶ್ ಕೊಡವೂರು, ಲಕ್ಷ್ಮಣ್ ಪೂಜಾರಿ, ಶೇಖ್ ವಾಹೀದ್, ಇಸ್ಮಾಯಿಲ್ ಅತ್ರಾಡಿ, ಸುರೇಂದ್ರ ಆಚಾರ್ಯ, ಸಂಜಯ ಆಚಾರ್ಯ, ಉಪೇಂದ್ರ ಮೆಂಡನ್ ಹಾಗೂ ಸತೀಶ್ ಮಂಚಿ ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಸ್ವಾಗತಿಸಿದರು. ಜಿಲ್ಲಾ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ವಂದಿಸಿದರು.

Tags

EnsuringharmonysocietygovernmentMinister Rizwan Arshad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X