ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಉದ್ಯಮಶೀಲತಾ ತರಬೇತಿ

ಉಡುಪಿ, ನ.28: ಬ್ರಹ್ಮಾವರದ ರುಡ್‌ಸೆಟ್ ಸಂಸ್ಥೆ ವತಿಯಿಂದ ಉದ್ಯಮ ಶೀಲತಾ ಅಭಿವೃದ್ಧಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಮಾತನಾಡಿ, ಸ್ವಾವಲಂಬಿ ಜೀವನ ನಡೆಸಲು ತರಬೇತಿಯು ಭದ್ರವಾದ ಅಡಿಪಾಯ ವಾಗಿದೆ. ಮಹಿಳಾ ನಿವಾಸಿನಿಯರು ತರಬೇತಿಯನ್ನು ಹೆಚ್ಚಿನ ಆಸಕ್ತಿ ಮತ್ತು ಶ್ರದ್ಧೆಯಿಂದ ಕಲಿತು, ತಮ್ಮಲ್ಲಿರುವ ಕೌಶಲ್ಯ ಗಳನ್ನು ಅಭಿವೃದ್ಧಿಪಡಿಸಿಕೊಳ್ಳುವು ದರ ಜೊತೆಗೆ ಆತ್ಮವಿಶ್ವಾಸ ಮತ್ತು ಆತ್ಮಸ್ಥೈರ್ಯವನ್ನು ಬೆಳೆಸಿಕೊಂಡು ಸ್ವಾವಲಂಬಿಗಳಾಗಿ ಬದುಕಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಡಾ.ವಿಜಯಲಕ್ಷ್ಮಿ ಹೇರೂರ ಮಾತನಾಡಿ, ಮಹಿಳೆಯರಿಗೆ ಸ್ವಾವಲಂಬಿ ಯಾಗಿ ಜೀವನ ನಡೆಸಲು ಕೌಶಲ್ಯಾಧಾರಿತ ತರಬೇತಿಯು ಅವಶ್ಯಕ. ಹಾಗಾಗಿ ಅಂತಹ ತರಬೇತಿ ಯನ್ನು ಉತ್ತಮವಾಗಿ ಉತ್ಸಾಹದಿಂದ ಕಲಿತು, ಸ್ವಾವಲಂಬಿಯಾಗಿ ಎಂದು ತರಬೇತಿಯ ಯಶಸ್ಸಿಗೆ ಶುಭ ಹಾರೈಸಿದರು.
ರಾಜ್ಯ ಮಹಿಳಾ ನಿಲಯದ ಅಧೀಕ್ಷಕಿ ಪುಷ್ಪರಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಡಾ.ಬೊಮ್ಮಯ್ಯ ಎಂ. ಶುಭ ಹಾರೈಸಿದರು. ಮಹಿಳಾ ನಿಲಯದ ಸಿಬ್ಬಂದಿ ಪ್ರೀತಿ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಕಚೇರಿ ಸಹಾಯಕರಾದ ಶಾಂತಪ್ಪ ವಂದಿಸಿದರು. ಸಂಸ್ಥೆಯ ಬೋಧಕ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.






