Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಿತ್ಯವೂ ಗಾಂಧಿ ತತ್ವ, ಸಿದ್ಧಾಂತದ...

ನಿತ್ಯವೂ ಗಾಂಧಿ ತತ್ವ, ಸಿದ್ಧಾಂತದ ಹತ್ಯೆ: ವಿಲ್ಪ್ರೆಡ್ ಡಿಸೋಜ

ವಾರ್ತಾಭಾರತಿವಾರ್ತಾಭಾರತಿ29 Jan 2026 10:12 PM IST
share
ನಿತ್ಯವೂ ಗಾಂಧಿ ತತ್ವ, ಸಿದ್ಧಾಂತದ ಹತ್ಯೆ: ವಿಲ್ಪ್ರೆಡ್ ಡಿಸೋಜ
ಗಾಂಧೀಜಿಯವರ ಗ್ರಾಮೀಣ ಭಾರತ ವಿಚಾರಗೋಷ್ಠಿ

ಉಡುಪಿ, ಜ.29: ಪಂಚಾಯತ್‌ರಾಜ್ ಕಾನೂನುಗಳೆಲ್ಲವೂ ಪುಸ್ತಕಗಳಿಗೆ ಸೀಮಿತವಾಗಿದ್ದು, ಗಾಂಧೀಜಿ ಅವರ ತತ್ವ, ಸಿದ್ಧಾಂತಗಳೆಲ್ಲವನ್ನು ನಿತ್ಯವೂ ಕೊಲ್ಲಲಾಗುತ್ತಿದೆ ಎಂದು ಪ್ರಗತಿಪರ ಚಿಂತಕ ವಿಲ್ಛೆಡ್ ಡಿಸೋಜ ಉಪ್ಪಿನಂಗಡಿ ಹೇಳಿದ್ದಾರೆ.

ಉಡುಪಿಯ ರಥಬೀದಿ ಗೆಳೆಯರು ಸಂಘಟನೆ, ಸಹಬಾಳ್ವೆ ಉಡುಪಿ, ಸೌಹಾರ್ದ ಕರ್ನಾಟಕ, ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಇವುಗಳ ಸಹಯೋಗದಲ್ಲಿ ಅಜ್ಜರಕಾಡು ವಿಮಾ ನೌಕರರ ಸಭಾಭವನದಲ್ಲಿ ಗುರುವಾರ ಆಯೋಜಿಸಿದ ‘ಗಾಂಧೀಜಿಯವರ ಗ್ರಾಮೀಣ ಭಾರತ: ಪ್ರಸ್ತುತ ಸವಾಲುಗಳು’ ವಿಷಯದ ಮೇಲಿನ ವಿಚಾರಗೋಷ್ಠಿ ಹಾಗೂ ಸಂವಾದದಲ್ಲಿ ಅವರು ಮಾತನಾಡುತಿದ್ದರು.

ಗ್ರಾಮ ಸ್ವರಾಜ್ಯ ಪರಿಕಲ್ಪನೆಗೆ ಯಾವ ಸರಕಾರವೂ ಜೀವ ತುಂಬುವ ಕೆಲಸ ಮಾಡಿಲ್ಲ. ಹೊಸ ಘೋಷಣೆಗಳ ಬದಲು ಇರುವುದನ್ನು ಚೆನ್ನಾಗಿ ನಿರ್ವಹಣೆ ಮಾಡಬೇಕು. ಶಿಕ್ಷಣ, ಆರೋಗ್ಯ ಕ್ಷೇತ್ರದ ಕಡೆಗೆ ಸ್ಥಳೀಯವಾಗಿ ಗಮನ ಕೊಡುತ್ತಿಲ್ಲ. ಕೃಷಿ ಆಕರ್ಷಣೆ ಕಳೆದುಕೊಂಡಿದೆ, ಯುವಜನತೆ ನಗರ ಸೇರುವುದು ಅನಿವಾರ್ಯವಾಗಿದೆ ಎಂದವರು ಹೇಳಿದರು.

ಜಿಪಂ, ತಾಪಂ ಚುನಾವಣೆ ನಡೆಸದ ಕಾರಣಕ್ಕೆ ರಾಜ್ಯಕ್ಕೆ ಬರಬೇಕಾದ 15ನೇ ಹಣಕಾಸು ಅನುದಾನದ ವಾರ್ಷಿಕ 4,000 ಕೋಟಿ ರೂ. ಕಳೆದು ಕೊಂಡಿದ್ದೇವೆ. ಎಂ ನರೇಗಾ 100 ದಿನಗಳ ಉದ್ಯೋಗ ನೀಡುವಲ್ಲಿ ರಾಜ್ಯ ಸರಕಾರ ಶೇ.50ರಷ್ಟು ಸಾಧನೆಗೂ ವಿಫಲವಾಗಿದೆ ಎಂದು ವಿಲ್ಛೆಡ್ ನುಡಿದರು.

ಸ್ವಯಂ ಆಡಳಿತ ಸಂಸ್ಥೆಗಳು ಸಬಲೀಕರಣವಾಗಲು ‘ಎಫ್’ಗಳನ್ನು ಅವುಗಳಿಗೆ ನೀಡಬೇಕು. ಗ್ರಾಮ ಸರಕಾರ ಮಾಡಬೇಕಾದ ಕಾರ್ಯಕ್ರಮಗಳನ್ನು ಅವರಿಗೆ ವರ್ಗಾವಣೆ ಮಾಡಬೇಕು. ಅದರೊಂದಿಗೆ ಬೇಕಷ್ಟು ಸಿಬ್ಬಂದಿಗಳನ್ನು ನೀಡಬೇಕು. ಅದರೊಂದಿಗೆ ಅನುದಾನವನ್ನೂ ನೀಡಬೇಕು. ಇವೆಲ್ಲಾ ಆದ ಮೇಲೆ ಸ್ವಾತಂತ್ರ್ಯ ನೀಡದಿದ್ದರೆ ಗಾಂಧೀಜಿ ಕಂಡ ಗ್ರಾಮ ರಾಜ್ಯ, ಸ್ವರಾಜ್ಯದ ಕನಸು ನನಸಾಗದು. ಈಗಂತೂ ಮತದಾನದ ಹೊರತು ಗ್ರಾಮ ಸಭೆಗಳ ಮೂಲಕ ಜನರಿಗಿರುವ ಸ್ಥಳೀಯಾಡಳಿತದ ಹಕ್ಕನ್ನು ಕಸಿಯಲಾಗುತ್ತಿದೆ ಎಂದು ಅವರು ವಿಷಾಧಿಸಿದರು.

ನಮ್ಮ ಪ್ರಜಾಪ್ರಭುತ್ವದ ದೊಡ್ಡ ವೈಫಲ್ಯವೆಂದರೆ ಪ್ರಜೆಗಳು ದುರ್ಬಲರಾಗಿದ್ದಾರೆ. ಇವರಲ್ಲಿ ಸರಿ-ತಪ್ಪುಗಳ, ವಿವೇಕದ ಕೊರತೆ ಇದೆ. ವಿವೇಚನೆಯ ಕೊರತೆತುಂಬಾ ಇದೆ. ಹೊರಗಿನ ಪ್ರಭಾವಗಳಿಗೆ ಬೇಗ ಬಲಿಯಾಗು ತಿದ್ದಾರೆ. ಅವರಿಗೆ ಅರಿವು ಮೂಡಿಸುವ ಕೆಲಸವನ್ನು ನಾವು ಮಾಡಬೇಕು ಎಂದು ವಿಲ್ಪ್ರೆಡ್ ನುಡಿದರು.

ರಥಬೀದಿ ಗೆಳೆಯರು ಉಡುಪಿ ಅಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್, ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಸಹಬಾಳ್ವೆ ಸಂಸ್ಥೆಯ ಇದ್ರಿಸ್ ಹೂಡೆ, ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

ಸಂತೋಷ್ ನಾಯಕ ಪಟ್ಲ ಸ್ವಾಗತಿಸಿದರೆ, ಸೌಹಾರ್ದ ಕರ್ನಾಟಕ ಜಿಲ್ಲಾ ಸಂಚಾಲಕ ಚಂದ್ರಶೇಥಕ ವಿ. ಕಾರ್ಯಕ್ರಮ ನಿರೂಪಿಸಿದರು.

Tags

EverydayGandhianprinciplesideology
share
ವಾರ್ತಾಭಾರತಿ
ವಾರ್ತಾಭಾರತಿ
Next Story
X