ಉಡುಪಿ ಎಸ್ಪಿ ಹರಿರಾಂ ಶಂಕರ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ!

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಸಾರ್ವಜನಿಕರನ್ನು ಸಂಪರ್ಕಿಸುತ್ತಿರುವ ಬಗ್ಗೆ ವರದಿಯಾಗಿದೆ.
ಫೇಸ್‌ಬುಕ್‌ನಲ್ಲಿ ‘ಎಸ್‌ಪಿ ಉಡುಪಿ’ ಎಂಬ ಅಧಿಕೃತ ಸಾಮಾಜಿಕ ಜಾಲತಾಣ ಖಾತೆ ಹೊರತುಪಡಿಸಿ ಬೇರೆ ಯಾವುದೇ ವೈಯಕ್ತಿಕ ಅಥವಾ ಅಧಿಕೃತ ಖಾತೆಗಳು ಇರುವುದಿಲ್ಲ. ಸಾರ್ವಜನಿಕರು ಇಂತಹ ನಕಲಿ ಖಾತೆಗಳಿಗೆ ಪ್ರತಿಕ್ರಿಯಿಸದೇ, ಯಾವುದೇ ವೈಯಕ್ತಿಕ ಮಾಹಿತಿ ಅಥವಾ ಹಣವನ್ನು ಹಂಚಿಕೊಳ್ಳಬಾರದು ಎಂದು ಎಸ್ಪಿ ತಿಳಿಸಿದ್ದಾರೆ.
ಸಂದೇಹಾಸ್ಪದ ಖಾತೆಗಳು ಕಂಡುಬಂದಲ್ಲಿ ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ಅಥವಾ ಫೇಸ್‌ಬುಕ್.ಕಾಮ್ ಮೂಲಕ ರಿಪೋರ್ಟ್ ಮಾಡುವಂತೆ ಎಸ್ಪಿ ಕೋರಿದ್ದಾರೆ.
Next Story




