ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್: ಪ್ರಕರಣ ದಾಖಲು

ಕೊಲ್ಲೂರು, ಸೆ.9: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಆರಂಭಿಸಿ ದೇವಳದ ಕೊಠಡಿ ಕಾಯ್ದಿರಿಸುವ ಬಗ್ಗೆ ವಂಚನೆ ಎಸಗಿರುವ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವಸ್ಥಾನದ ಅಧಿಕೃತ ವೆಬ್‌ಸೈಟ್ ಬದಲಿಗೆ ಯಾರೋ ಅಪರಿಚಿತರು hotel accommodation ಎಂಬ ಹೆಸರಿನಲ್ಲಿ http://jagadambikaguesthouse.xyz ಎಂಬ ಅನಧಿಕೃತ ನಕಲಿ ವೆಬ್‌ಸೈಟ್‌ನ್ನು ಅಕ್ರಮ ಲಾಭದ ಉದ್ದೇಶದಿಂದ ಆರಂಭಿಸಿದ್ದಾರೆ. ಇವರು ಹಲವು ಜನರಿಗೆ ಈ ನಕಲಿ ವೆಬ್‌ಸೈಟ್ ಮೂಲಕ ಜಗದಾಂಬಿಕಾ ಅತಿಥಿ ಗೃಹದ ಕೊಠಡಿಯನ್ನು ಕಾಯ್ದಿರಿಸಿ ವಾಟ್ಸಾಪ್‌ನಲ್ಲಿ ಕ್ಯೂಆರ್ ಕೋಡ್‌ನ್ನು ನೀಡಿದ್ದು, ಹಣವನ್ನು ಪಡೆದು ನಕಲಿ ರಶೀದಿ ನೀಡಿ ದೇವಳದ ಭಕ್ತರಿಗೆ ದೇವಳದ ಕೊಠಡಿಗಳನ್ನು ಕಾಯ್ದಿರಿಸುವ ಬಗ್ಗೆ ವಂಚಿಸಿ ಹಣ ದೋಚುತ್ತಿರುವುದಾಗಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ದೂರಿನಲ್ಲಿ ತಿಳಿಸಿದ್ದಾರೆ.
Next Story




