Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ...

ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ; ದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ9 July 2026 9:42 PM IST
share
ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ; ದೂರು ದಾಖಲು

ಉಡುಪಿ, ಜು.9: ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಕೇಂದ್ರದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾ ಗುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿದ್ದು, ಆಧಾರರಹಿತವಾಗಿವೆ ಎಂದು ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಅಶೋಕ್ ಸ್ಪಷ್ಟಿಕರಣ ನೀಡಿದ್ದಾರೆ.

ಜು.7ರಂದು ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರ ಯಾವುದೆ ದಾಖಲಾತಿ ಅಥವಾ ರಶೀದಿ ಇಲ್ಲದೆ ರಕ್ತವನ್ನು ಖಾಸಗಿ ಆಸ್ಪತ್ರೆಗೆ ವಿತರಿಸಿದೆ. ಒಂದೇ ಬಾರಿಗೆ 15 ಯುನೀಟ್ ರಕ್ತವನ್ನ ಖಾಸಗಿ ಆಸ್ಪತ್ರಗೆ ನೀಡಲಾಗಿದೆ ಎಂದು ಕೆಲವು ವೆಬ್‌ಸೈಟ್‌ಗಳು ವರದಿ ಪ್ರಕಟಿಸಿವೆ. ಮೇಲಿನ ಸುದ್ದಿ ಹಾಗೂ ಎಲ್ಲಾ ಆರೋಪಗಳು ಸಂಪೂರ್ಣ ಸುಳ್ಳು ಎಂದು ಅಶೋಕ್ ಜಿಲ್ಲಾಸ್ಪತ್ರೆಯ ವತಿಯಿಂದ ನೀಡಿದ ಸ್ಪಷ್ಟೀಕರಣದಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಿಂದ ರಕ್ತ ಹಾಗೂ ರಕ್ತ ಘಟಕಗಳ ವಿತರಣೆಯನ್ನು ಕರ್ನಾಟಕ ಸರ್ಕಾರದಿಂದ ಜಾರಿಯಲ್ಲಿರುವ ಮಾರ್ಗಸೂಚಿ, ಡ್ರಗ್ಸ್ ಮತ್ತು ಕಾಸ್ಮಿಟಿಕ್ ಆ್ಯಕ್ಟ್ 1940ಕ್ಕೆ ಸಂಬಂಧಿತ ನಿಯಮಗಳು ಹಾಗೂ ರಕ್ತ ಕೇಂದ್ರದ ಪ್ರಮಾಣಿತ ಕಾರ್ಯವಿಧಾನಗಳ ಅನುಸಾರ ಕಟ್ಟುನಿಟ್ಟಾಗಿ ನಿರ್ವಹಿಸಲಾಗುತ್ತದೆ.

ಪ್ರತಿ ಯೂನಿಟ್ ರಕ್ತ ಅಥವಾ ರಕ್ತ ಘಟಕವನ್ನು ಅಗತ್ಯ ದಾಖಲಾತಿಗಳನ್ನು ಪರಿಶೀಲಿಸಿ, ನಿಗದಿತ ನೋಂದಣಿ ಗಳನ್ನು ಪೂರ್ಣಗೊಳಿಸಿದ ನಂತರವೇ ವಿತರಿಸಲಾಗುತ್ತದೆ. ಯಾವುದೇ ರಕ್ತ ಅಥವಾ ರಕ್ತ ಘಟಕವನ್ನು ದಾಖಲಾತಿ ಗಳಿಲ್ಲದೆ ವಿತರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಮತ್ತು ಅದರ ಪ್ರಕಾರವೇ ಬ್ಲಡ್ ಸ್ಟೋರೆಜ್ ಯುನಿಟ್ ನಿರ್ವಹಿ ಸುತ್ತಿರುವ ಅದರ್ಶ ಆಸ್ಪತ್ರೆಗೆ ಸರಕಾರದ ಮಾರ್ಗಸೂಚಿಗಳ ಅನ್ವಯ ರಕ್ತವನ್ನು ವಿತರಿಸಲಾಗಿದೆ ಎಂದು ಜಿಲ್ಲಾ ಸರ್ಜನ್ ಡಾ.ಎಚ್.ಅಶೋಕ್ ಸ್ಪಷ್ಟೀಕರಣದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳಾಗಿದ್ದು, ಈ ಸಂಬಂದ ಉಡುಪಿ ನಗರ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಲಾಗಿದೆ. ಇದರ ಬಗ್ಗೆ ಕೂಲಂಕಷ ತನಿಖೆ ನಡೆಸಿ, ತಪ್ಪಿಸ್ಥರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲು ಪೊಲೀಸರನ್ನು ಕೋರಲಾಗಿದೆ ಎಂದು ಡಾ.ಅಶೋಕ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X