Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರೈತರು ಹೊಸ ತಂತ್ರಜ್ಞಾನಗಳನ್ನು...

ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ11 May 2025 1:49 PM IST
share
ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ರೈತರು ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ ಹೆಚ್ಚು ಆದಾಯಗಳಿಸುವಂತಾಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರ (ಕೋಟೇಶ್ವರ)ವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರೈತರು ಕೃಷಿಯಲ್ಲಿ ಆಧುನಿಕರಣ ಕಂಡುಕೊಳ್ಳಬೇಕು, ರೈತರು ಸುಖಿಯಾಗಿದ್ದಾಗ ಮಾತ್ರ ದೇಶ ಅಭಿವೃದ್ಧಿಯಾದಂತೆ ಎಂದು ಹೇಳಿದರು.

ರೈತ ಸಂಪರ್ಕ ಕೇಂದ್ರಗಳು ರೈತರಿಗೆ ಅನುಕೂಲವಾಗಿದೆ. ಕೃಷಿಯ ಬಗ್ಗೆ ಅಧಿಕಾರಿಗಳು ರೈತರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸಲಹೆ ನೀಡಬೇಕು. ಸರ್ಕಾರದ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಬೇಕು, ಅಧಿಕಾರಿಗಳು ರೈತರು ಹಾಗೂ ಸರ್ಕಾರದ ಮಧ್ಯೆ ಕೊಂಡಿಯಾಗಿ ಕೆಲಸ ಮಾಡಬೇಕು, ರೈತರ ಮಿತ್ರರಾಗಿ ಕೆಲಸ ಮಾಡಬೇಕು ಎಂದು ಸಚಿವರು ಕರೆ ನೀಡಿದರು.

ನಮ್ಮ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ರೈತರ ಪರ ಸರ್ಕಾರ, ರೈತರ ಪರ ಕಾಳಜಿ ಹೊಂದಿರುವ ಸರ್ಕಾರ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ರೈತರ ಕೃಷಿ ಚಟುವಟಿಕೆ ನಿರಂತರವಾಗಿರುತ್ತದೆ. ಕೃಷಿ ಚಟುವಟಿಕೆ, ಕೃಷಿ ಸಲಕರಣೆಗಳು, ಸಬ್ಸಿಡಿ ಸಿಗುವ ಬಗ್ಗೆ ರೈತರಿಗೆ ಮಾಹಿತಿ ಸಿಗುವಂತಾಗಬೇಕು. ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಮಾಹಿತಿ ಫಲಕ ಅಳವಡಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಬ್ರಿಟಿಷರು ಸ್ವತಂತ್ರ ಕೊಟ್ಟು ಹೋಗುವಾಗ ನಮ್ಮ ಕೃಷಿಗೆ ಪೆಟ್ಟು ನೀಡಿಯೇ ಹೋದರು. ಭಾರತ ಮುಂಚೂಣಿಗೆ ಬರಬಾರದು ಎಂದು ಕೃಷಿ ಉತ್ಪನ್ನಗಳಿಗೆ ರಾಸಾಯನಿಕ ಬೆರಸಿಹೋಗಿದ್ದರು. ಆದರೆ, ನಮಗೆ ಕೃಷಿಯೇ ಪ್ರಧಾನವಾಗಿದೆ. ಕೃಷಿಯಿಂದಲೇ ನಾವು ವಿಶ್ವಗುರುವಿನ ಪಟ್ಟದತ್ತ ನಡೆಯುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

ದೇವರ, ಜನರ ಆಶೀರ್ವಾದಿಂದ ಬದುಕುಳಿದಿರುವೆ :

ಅಪಘಾತದಿಂದಾಗಿ ನಾನು ವಾಪಸ್ ಬರುತ್ತೀನಿ ಎಂದು ಅಂದುಕೊಂಡಿರಲಿಲ್ಲ. ಆ ದೇವರ, ಜನರ ಆಶೀರ್ವಾದಿಂದ ಬದುಕುಳಿದು, ನಿಮ್ಮ ಸೇವೆಗೆ ವಾಪಸ್ ಬಂದಿರುವೆ. ದೇವರು ದೊಡ್ಡವನು ಎನ್ನುತ್ತಾ ಸಚಿವರು ಗದ್ಗದಿತರಾದರು.

ಕಾರ್ಯಕ್ರಮದಲ್ಲಿ ಕುಂದಾಪುರ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷರಾದ ದಿನೇಶ್ ಹೆಗಡೆ, ಜಿಲ್ಲಾ ಕೆಡಿಪಿ ಸದಸ್ಯರಾದ ಪ್ರಸನ್ನ ಕುಮಾರ್ ಶೆಟ್ಟಿ, ಹರಿ ಪ್ರಸಾದ್ ಶೆಟ್ಟಿ, ಶಿವರಾಮ ಶೆಟ್ಟಿ, ವಿಕಾಸ ಹೆಗಡೆ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X