Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗಾಂಧಿ ಜಯಂತಿ ಪ್ರಯುಕ್ತ ಕಾಂಗ್ರೆಸ್...

ಗಾಂಧಿ ಜಯಂತಿ ಪ್ರಯುಕ್ತ ಕಾಂಗ್ರೆಸ್ ವತಿಯಿಂದ ಬೋಳದಲ್ಲಿ ಉಚಿತ ವೈದ್ಯಕೀಯ ತಪಾಸಣೆ

ರಕ್ತದಾನ ಶಿಬಿರ ಹಾಗೂ ಸಾಧಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ3 Oct 2026 3:19 PM IST
share
ಗಾಂಧಿ ಜಯಂತಿ ಪ್ರಯುಕ್ತ ಕಾಂಗ್ರೆಸ್ ವತಿಯಿಂದ ಬೋಳದಲ್ಲಿ ಉಚಿತ ವೈದ್ಯಕೀಯ ತಪಾಸಣೆ

ಕಾರ್ಕಳ : ತಾಲೂಕಿನ ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿ ಮತ್ತು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಮುನಿಯಾಲು ಮತ್ತು ಆಳ್ವಾಸ್ ಹೆಲ್ತ್ ಸೆಂಟರ್ ಇವರ ಜಂಟಿ ಸಹಯೋಗದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಗಾಂಧೀ ಜಯಂತಿಯ ಪ್ರಯುಕ್ತ ಬೋಳ ಗ್ರಾಮದ ಶಿಲ್ಪ ಶ್ರೀ ಸಭಾಭವನದಲ್ಲಿ ಉಚಿತ ಮೆಗಾ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಹಾಗು ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಆಳ್ವಾಸ್ ಹೆಲ್ತ್ ಸೆಂಟರ್ ನ ವೈದ್ಯಾಧಿಕಾರಿಯಾದ ಡಾ. ದಿತೇಶ್.ಎಂ ಅವರು ಮಾತನಾಡಿ ಉತ್ತಮ ಆರೋಗ್ಯಕ್ಕಾಗಿ ಜನರು ತಮ್ಮ ದೈನಂದಿನ ದಿನಚರಿಯಲ್ಲಿ ಅಳವಡಿಸಿಕೊಳ್ಳಬೇಕಾದ ಅಂಶಗಳನ್ನು ತಿಳಿಸಿದರು.

ವೇದಿಕೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಸುಧಾಕರ ಕೋಟ್ಯಾನ್, ರಾಜ್ಯ ಕಿಸಾನ್ ಘಟಕದ ಪ್ರಧಾನ ಕಾರ್ಯದರ್ಶಿ ಉದಯ ಶೆಟ್ಟಿ ಕುಕ್ಕುಂದೂರು, ರಾಜ್ಯ ಮಹಿಳಾ ಕಾಂಗ್ರೆಸ್ಸಿನ ಪ್ರದಾನ ಕಾರ್ಯದರ್ಶಿ ಅನಿತಾ ಡಿಸೋಜ ಬೆಳ್ಮಣ್, ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸಿನ ಅಧ್ಯಕ್ಷೆ ಭಾನು ಬಾಸ್ಕರ ಪೂಜಾರಿ, ಆಳ್ವಾಸ್ ಹೆಲ್ತ್ ಸೆಂಟರ್ ನ ವೈದ್ಯಾಧಿಕಾರಿ ಡಾ. ಹನಾ ಶೆಟ್ಟಿ, ಮಾಜಿ ಜಿ.ಪಂ ಸದಸ್ಯರಾದ ಸುಪ್ರಿತ್ ಶೆಟ್ಟಿ ಕೆದಿಂಜೆ, ವಲಯ ಉಸ್ತುವಾರಿ ಕುಶ.ಆರ್.ಮೂಲ್ಯ, ಉದ್ಯಮಿ ಉದಯ ಶೆಟ್ಟಿ ಗುಂಡುಕಲ್ಲು, ಕಾಂತಾವರ ಮತ್ತು ಬೆಳ್ಮಣ್ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅದ್ಯಕ್ಷರುಗಳಾದ ಬಾಂದೊಟ್ಟು ಸುದರ್ಶನ್ ಬಂಗೇರ, ಪ್ರಭಾಕರ ಶೆಟ್ಟಿ ಇಂದಾರು ಉಪಸ್ಥಿತರಿದ್ದರು.

ಆಧುನಿಕ ವೈದ್ಯಕೀಯ ಸೌಲಭ್ಯಗಳಿಲ್ಲದ ಕಾಲದಲ್ಲಿ ಮನೆಮನೆಗೆ ತೆರಳಿ ನೂರಾರು ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ ಮಹಾತಾಯಿ ಬೋಳ ಗ್ರಾಮದ ಹಿರಿಯ ನಾಟಿ ಹೆರಿಗೆ ತಜ್ಙೆ ಅಪ್ಪಿ ಪೂಜಾರಿ ಅವರಿಗೆ ಈ ಸಂದರ್ಭದಲ್ಲಿ ಸನ್ಮಾನವನ್ನು ನಡೆಸಲಾಯಿತು. ಹಾಗೂ ಬೋಳ ಗ್ರಾಮದ ಆರೋಗ್ಯಾಧಿಕಾರಿಗಳಿಗೆ ಮತ್ತು ಆಶಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು.

ಶ್ರೇಯಾ ಮತ್ತು ಮಾನ್ವಿ ಪ್ರಾರ್ಥನೆಯನ್ನು ಹಾಡಿದರು, ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಯೋಗೀಶ್ ಮೂಲ್ಯ ಎಲ್ಲರನ್ನು ಸ್ವಾಗತಿಸಿದರು ಹಾಗೂ ಬ್ಲಾಕ್ ಉಪಾಧ್ಯಕ್ಷ ಅವಿನಾಶ್ ಮಲ್ಲಿ ವಂದನಾರ್ಪಣೆಗೈದರು, ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X